BREAKING NEWS

Assembly Election Results 2023: ಬಿಜೆಪಿ ಗೆಲ್ಲಿಸಿದ ಜನತೆಗೆ ಕೃತಜ್ಞತೆ ಸಲ್ಲಿಸಿದ ನರೇಂದ್ರ ಮೋದಿ

ಇಂದು ( ಡಿಸೆಂಬರ್‌ 3 ) ನಾಲ್ಕು ರಾಜ್ಯಗಳ ವಿಧಾನಸಭಾ ಚುನಾವಣಾ ಫಲಿತಾಂಶ ಹೊರಬಿದ್ದಿದ್ದು, ಮಧ್ಯಪ್ರದೇಶ, ರಾಜಸ್ಥಾನ ಹಾಗೂ ಛತ್ತೀಸ್‍ಘಡ ರಾಜ್ಯಗಳಲ್ಲಿ ಬಿಜೆಪಿ ಭರ್ಜರಿ ಜಯ ಸಾಧಿಸಿ ಸಮೀಕ್ಷೆಗಳನ್ನೆಲ್ಲಾ ತಲೆಕೆಳಗಾಗುವಂತೆ ಮಾಡಿದ್ದರೆ, ಇತ್ತ ತೆಲಂಗಾಣದಲ್ಲಿ ಕಾಂಗ್ರೆಸ್‌ ಪಕ್ಷ ಸ್ಪಷ್ಟ ಬಹುಮತ ಸಾಧಿಸಿದೆ.

ಬಿಜೆಪಿ ಮೂರು ರಾಜ್ಯಗಳಲ್ಲಿ ಗೆದ್ದು ತೆಲಂಗಾಣದಲ್ಲಿ ಕಳೆದ ಬಾರಿಯ ವಿಧಾನಸಭಾ ಚುನಾವಣೆಗಿಂತ ಹೆಚ್ಚಿನ ಕ್ಷೇತ್ರಗಳಲ್ಲಿ ಗೆದ್ದು ಉತ್ತಮ ಹಂತದಲ್ಲಿದೆ. ಈ ಗೆಲುವಿನ ಕುರಿತು ದೇಶದ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಟ್ವೀಟ್‌ ಮಾಡುವ ಮೂಲಕ ತಮ್ಮನ್ನು ಬೆಂಬಲಿಸಿದ ಮತದಾರರಿಗೆ ಕೃತಜ್ಞತೆ ಸಲ್ಲಿಸಿದ್ದಾರೆ.

ಮೊದಲಿಗೆ ಛತ್ತೀಸ್‌ಘಡ, ರಾಜಸ್ಥಾನ ಹಾಗೂ ಮಧ್ಯ ಪ್ರದೇಶದ ಫಲಿತಾಂಶಗಳ ಬಗ್ಗೆ ಟ್ವೀಟ್‌ ಮಾಡಿರುವ ಮೋದಿ “ಜನತಾ ಜನಾರ್ಧನರಿಗೆ ತಲೆ ನಾವು ತಲೆ ಬಾಗಿದ್ದೇವೆ. ಛತ್ತೀಸ್‌ಗಢ, ಮಧ್ಯ ಪ್ರದೇಶ ಹಾಗೂ ರಾಜಸ್ಥಾನಗಳಲ್ಲಿ ಬಂದಿರುವ ಫಲಿತಾಂಶ ದೇಶದ ಜನತೆ ಉತ್ತಮ ಆಡಳಿತ ಹಾಗೂ ಅಭಿವೃದ್ಧಿ ಪರ ಇರುವ ಬಿಜೆಪಿಯನ್ನು ಆರಿಸಿದ್ದಾರೆ. ಅಭೂತಪೂರ್ವ ಬೆಂಬಲ ಕೊಟ್ಟ ಈ ರಾಜ್ಯಗಳ ಜನತೆಗೆ ನಾನು ಧನ್ಯವಾದ ತಿಳಿಸುತ್ತೇನೆ ಹಾಗೂ ಅವರ ಅಭಿವೃದ್ಧಿಗಾಗಿ ಶ್ರದ್ಧೆಯಿಂದ ಕೆಲಸ ಮಾಡುತ್ತೇವೆ ಎಂಬ ಭರವಸೆ ನೀಡುತ್ತಿದ್ದೇನೆ. ಕಷ್ಟಪಟ್ಟು ಕೆಲಸ ನಿರ್ವಹಿಸಿದ ಪಕ್ಷದ ಎಲ್ಲಾ ಕಾರ್ಯಕರ್ತರಿಗೂ ವಿಶೇಷ ಧನ್ಯವಾದಗಳು. ಅವರೆಲ್ಲಾ ಶ್ರಮದಿಂದ ಕೆಲಸ ಮಾಡಿದ್ದು ನಮ್ಮ ಪಕ್ಷ ಮಾಡಿದ ಅಭಿವೃದ್ಧಿಯನ್ನು ಜನರಿಗೆ ಮನವರಿಕೆ ಮಾಡಿದ್ದಾರೆ” ಎಂದು ಬರೆದುಕೊಂಡಿದ್ದಾರೆ.

ಇನ್ನು ತೆಲಂಗಾಣದ ಜನತೆ ಬಗ್ಗೆ ಸಹ ಟ್ವೀಟ್‌ ಮಾಡಿರುವ ಪ್ರಧಾನಿ ಮೋದಿ “ತೆಲಂಗಾಣದ ನನ್ನೆಲ್ಲಾ ಅಣ್ಣ-ತಮ್ಮ, ಅಕ್ಕ-ತಂಗಿಯರೇ, ಕಳೆದ ಕೆಲ ವರ್ಷಗಳಿಂದ ನೀವು ಬಿಜೆಪಿಗೆ ನೀಡಿದ ಬೆಂಬಲಕ್ಕೆ ಧನ್ಯವಾದಗಳು. ನಿಮ್ಮ ಬೆಂಬಲ ಹೆಚ್ಚುತ್ತಲೇ ಇದ್ದು ಮುಂದಿನ ದಿನಗಳಲ್ಲಿ ಇದು ಮತ್ತಷ್ಟು ಹೆಚ್ಚಾಗಲಿದೆ. ತೆಲಂಗಾಣ ಜನತೆ ಜತೆಗಿನ ನಮ್ಮ ಸಂಬಂಧ ಬಿಡಿಸಲಾಗದ್ದು ಹಾಗೂ ಅವರಿಗಾಗಿ ನಾವು ಶ್ರದ್ಧೆಯಿಂದ ಕೆಲಸ ಮಾಡಲಿದ್ದೇವೆ. ತೆಲಂಗಾಣದಲ್ಲಿ ಶ್ರಮವಹಿಸಿ ಕೆಲಸ ಮಾ ಡಿದ ಬಿಜೆಪಿ ಕಾರ್ಯಕರ್ತರಿಗೂ ಸಹ ನನ್ನ ಕೃತಜ್ಞತೆ ಸಲ್ಲಿಸುತ್ತಿದ್ದೇನೆ” ಎಂದು ಬರೆದುಕೊಂಡಿದ್ದಾರೆ.

andolana

Recent Posts

ಹನೂರು: ಏಕಕಾಲದಲ್ಲೇ ಕಾಣಿಸಿಕೊಂಡ ಎರಡು ಚಿರತೆಗಳು

ಹನೂರು: ತಾಲೂಕಿನ ಲೊಕ್ಕನಹಳ್ಳಿ ಹೋಬಳಿ ವ್ಯಾಪ್ತಿಯ ಮಲೆ ಮಹದೇಶ್ವರ ಅರಣ್ಯ ಪ್ರದೇಶ ವ್ಯಾಪ್ತಿಯ ಬಳಗುಡ್ಡ ಬಿಟ್ ವ್ಯಾಪ್ತಿಯಲ್ಲಿ ಏಕಕಾಲಕ್ಕೆ ಎರಡು…

1 hour ago

ನಾಳೆಯೊಳಗೆ ಪ್ರಯಾಣಿಕರಿಗೆ ಮರುಪಾವತಿ ಮಾಡಿ: ಇಂಡಿಗೋ ಏರ್‌ಲೈನ್ಸ್‌ಗೆ ಗಡುವು ನೀಡಿದ ಕೇಂದ್ರ ಸರ್ಕಾರ

ನವದೆಹಲಿ: ನಾಗರಿಕ ವಿಮಾನಯಾನ ಸಚಿವಾಲಯವು ಇಂಡಿಗೋದ ಬಾಕಿ ಇರುವ ಎಲ್ಲಾ ಪ್ರಯಾಣಿಕರ ಮರುಪಾವತಿಗಳನ್ನು ವಿಳಂಬವಿಲ್ಲದೇ ಪಾವತಿಸಲು ಆದೇಶಿಸಿದೆ. ರದ್ದಾದ ಅಥವಾ…

1 hour ago

ಡಿ.ಕೆ.ಶಿವಕುಮಾರ್‌ ಸಂಪುಟದಲ್ಲಿ ನನಗೆ ಸಚಿವ ಸ್ಥಾನ ಬೇಡ: ಮಾಜಿ ಸಚಿವ ಕೆ.ಎನ್.ರಾಜಣ್ಣ

ತುಮಕೂರು: ರಾಜ್ಯದಲ್ಲಿ ಸಿಎಂ ಸ್ಥಾನ ಬದಲಾವಣೆ ಚರ್ಚೆ ಬೆನ್ನಲ್ಲೇ ಮಾಜಿ ಸಚಿವ ಕೆ.ಎನ್.ರಾಜಣ್ಣ ಮಹತ್ವದ ಹೇಳಿಕೆ ಕೊಟ್ಟಿದ್ದಾರೆ. ಈ ಕುರಿತು…

2 hours ago

ನನ್ನನ್ನು ಹೆದರಿಸ್ತೀನಿ ಅಂದ್ರೆ ಅದು ಸಾಧ್ಯವಿಲ್ಲ: ಡಿಸಿಎಂ ಡಿ.ಕೆ.ಶಿವಕುಮಾರ್‌ ಪ್ರತಿಕ್ರಿಯೆ

ಹಾಸನ: ನ್ಯಾಷನಲ್‌ ಹೆರಾಲ್ಡ್‌ ಪ್ರಕರಣದಲ್ಲಿ ದೆಹಲಿ ಪೊಲೀಸರು ನೋಟಿಸ್‌ ಕೊಟ್ಟ ವಿಚಾರಕ್ಕೆ ಡಿಸಿಎಂ ಡಿ.ಕೆ.ಶಿವಕುಮಾರ್‌ ಪ್ರತಿಕ್ರಿಯೆ ನೀಡಿದ್ದಾರೆ. ಈ ಕುರಿತು…

2 hours ago

ಹೇಮಾವತಿ ಜಲಾಶಯದ ಬಳಿ ಉದ್ಯಾನವನ ನಿರ್ಮಿಸಲು ಸಿಎಂ ಸಿದ್ದರಾಮಯ್ಯ ಭರವಸೆ

ಹಾಸನ: ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಒಂದು ವರ್ಷದೊಳಗೆ ಎಲ್ಲ ಗ್ಯಾರಂಟಿ ಯೋಜನೆಗಳನ್ನು ಯಶಸ್ವಿಯಾಗಿ ಜಾರಿಗೊಳಿಸಿದ್ದು, ಕರ್ನಾಟಕದ ಇತಿಹಾಸದಲ್ಲಿಯೇ ಕಾಂಗ್ರೆಸ್…

3 hours ago

ಮೈಸೂರು| ಜಮೀನಿನಲ್ಲಿ ಭಾರೀ ಗಾತ್ರದ ಹೆಬ್ಬಾವು ಪತ್ತೆ

ನಂಜನಗೂಡು: ಜಮೀನಿನಲ್ಲಿ ಭಾರೀ ಗಾತ್ರದ ಹೆಬ್ಬಾವು ಪತ್ತೆಯಾಗಿದ್ದು, ಅರಣ್ಯ ಇಲಾಖೆ ಸಿಬ್ಬಂದಿಗಳು ರಕ್ಷಿಸಿ ಸುರಕ್ಷಿತ ಪ್ರದೇಶಕ್ಕೆ ಬಿಟ್ಟಿದ್ದಾರೆ. ಜಿಲ್ಲೆಯ ನಂಜನಗೂಡು…

3 hours ago