ಶಿರಸಿ: ಇಲ್ಲಿನ ರೌಡಿ ಶೀಟರ್ ಫಯಾಜ್ ಚೌಟಿ (ಪಯ್ಯು) ವಿಧಾನಸಭೆ ಅಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ ಜೊತೆ ತನ್ನ ಬೆಂಬಲಿಗರೊಂದಿಗೆ ಇತ್ತೀಚೆಗೆ ಗುಪ್ತವಾಗಿ ಸಭೆ ನಡೆಸಿರುವುದು ಇದೀಗ ಹಲವು ಚರ್ಚೆಗೆ ಎಡೆಮಾಡಿಕೊಟ್ಟಿದೆ.
ದರೋಡೆ, ಬ್ಲಾಕ್ ಮೇಲ್, ಹಣ ವಂಚನೆ, ಅಪಹರಣ ಸೇರಿದಂತೆ 17ಕ್ಕೂ ಹೆಚ್ಚು ಪ್ರಕರಣದಲ್ಲಿ ಆರೋಪಿಯಾಗಿರುವ ಫಯಾಜ್ ಚೌಟಿ, ಭೂಗತ ಪಾತಕಿ ಹೆಬ್ಬೆಟ್ಟು ಮಂಜ ಸೇರಿದಂತೆ ಅನೇಕರೊಂದಿಗೆ ಸಂಪರ್ಕದಲ್ಲಿದ್ದಾನೆ. ಆದರೆ 5 ದಿನಗಳ ಹಿಂದೆ ಗುಪ್ತವಾಗಿ 50ಕ್ಕೂ ಹೆಚ್ಚು ಬೆಂಬಲಿಗರೊಂದಿಗೆ ಕಾಗೇರಿ ಕಚೇರಿಯಲ್ಲಿ ಚುನಾವಣೆ ಸಂಬಂಧ ಚೌಟಿ ಸಭೆ ನಡೆಸಿರುವ ಫೊಟೊ ಇದೀಗ ಎಲ್ಲೆಡೆ ವೈರಲ್ ಆಗಿದೆ.
ಫೋಟೊದಲ್ಲಿ ಕಾಗೇರಿ ಪಕ್ಕದಲ್ಲೇ ಕುಳಿತು ಚೌಟಿ ಸಭೆ ನಡೆಸಿದ್ದಾನೆ. ಇನ್ನು ಸಭೆಯ ಎರಡು ದಿನದ ನಂತರ ಹಂದಿ ಅಣ್ಣಿ ಕೊಲೆ ಆರೋಪಿಗಳನ್ನು ತನ್ನ ಅಂಬ್ಯುಲೆನ್ಸ್ ಮೂಲಕ ಎಸ್ಕೆಪ್ ಮಾಡಿಸಿದ ಆರೋಪದಡಿ 2 ದಿನಗಳ ಹಿಂದೆಯಷ್ಟೇ ದಾವಣಗೆರೆ ಪೊಲೀಸರಿಂದ ಬಂಧನವಾಗಿದ್ದು, ಹೀಗಾಗಿ ಈ ಭೇಟಿ ಹಲವು ಅನುಮಾನಗಳಿಗೆ ಎಡೆಮಾಡಿಕೊಟ್ಟಿದೆ.
ಕಾಗೇರಿ ಕಚೇರಿ ಮೂಲಗಳ ಪ್ರಕಾರ ಈತ ಕ್ಷೇತ್ರದ ಯಾವುದೋ ಸಮಸ್ಯೆ ಇಟ್ಟುಕೊಂಡು ಕಾಗೇರಿ ಬಳಿ ಚರ್ಚೆಗೆ ಬಂದಿದ್ದರು ಎಂದು ಹೇಳಲಾಗಿದೆ.
ಗದಗ : ಗುತ್ತಿಗೆದಾರನಿಂದ ಕಮಿಷನ್ ರೂಪದಲ್ಲಿ ಐದು ಲಕ್ಷ ಹಣ ಪಡೆಯುತ್ತಿದ್ದ ಶಿರಹಟ್ಟಿ ಕ್ಷೇತ್ರದ ಬಿಜೆಪಿ ಶಾಸಕ ಡಾ.ಚಂದ್ರು ಲಮಾಣಿ…
ಬೆಂಗಳೂರು: ನನ್ನನ್ನು ರಾಜಕೀಯವಾಗಿ ಮುಗಿಸಲು ಹಲವಾರು ದೊಡ್ಡ ದೊಡ್ಡ ನಾಯಕರು ಹಲವಾರು ಬಗೆಯ ಕುಟಿಲ ಕಾರಸ್ತಾನಗಳನ್ನು ಮಾಡಿದ್ದಾರೆ. ರಣರಂಗವನ್ನು ಬಿಟ್ಟು…
ಮಂಡ್ಯ: ಜಿಲ್ಲೆಯಲ್ಲಿ ನಿರುದ್ಯೋಗಿ ಸಮಸ್ಯೆಯನ್ನು ಹೋಗಲಾಡಿಸಲು ಜಿಲ್ಲಾ ಮಟ್ಟದ ಉದ್ಯೋಗ ಮೇಳವನ್ನು ಏರ್ಪಡಿಸಿದ್ದು ಯುವಜನತೆಯ ವಿದ್ಯಾರ್ಹತೆಗೆ ತಕ್ಕಂತೆ ಉದ್ಯೋಗಾವಕಾಶವನ್ನು ಕಲ್ಪಿಸುವ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಹನೂರು ಪಟ್ಟಣವನ್ನು ಮಾದರಿ ಪಟ್ಟಣವನ್ನಾಗಿ ಮಾಡಲು ವಿಶೇಷವಾಗಿ ಕಾಳಜಿ ವಹಿಸಿದ್ದೇನೆ…
ಮೈಸೂರು: ಕೆಲಸ ಇಲ್ಲದವರ ಆರೋಪಕ್ಕೆ ಉತ್ತರ ಕೊಡಲ್ಲ ಎಂಬ ಎಂಎಲ್‌ಸಿ ಹಾಗೂ ಸಿಎಂ ಸಿದ್ದರಾಮಯ್ಯ ಪುತ್ರ ಯತೀಂದ್ರ ಸಿದ್ದರಾಮಯ್ಯಗೆ ಮಾಜಿ…
ಬೆಂಗಳೂರು: ರಾಜ್ಯ ರಾಜಕೀಯದಲ್ಲಿ ಸಂಚಲನ ಮೂಡಿಸಿರುವ ಬಿಕ್ಲು ಶಿವ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೆ.ಆರ್.ಪುರಂ ಕ್ಷೇತ್ರದ ಶಾಸಕ ಭೈರತಿ ಬಸವರಾಜ್…