BREAKING NEWS

ಎಂಟು ಪಟ್ಟು ಏರಿದ ಅಬಕಾರಿ ಸಚಿವ ಕೆ. ಗೋಪಾಲಯ್ಯ ಆಸ್ತಿ

ಬೆಂಗಳೂರು : ಮಹಾಲಕ್ಷ್ಮಿ ಬಡಾವಣೆ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿ ಕಣಕ್ಕಿಳಿದಿರುವ ಅಬಕಾರಿ ಸಚಿವ ಕೆ. ಗೋಪಾಲಯ್ಯ ಅವರ ಕುಟುಂಬದ ಒಟ್ಟು ಆಸ್ತಿ ಮೂರು ವರ್ಷಗಳಲ್ಲೇ ಎಂಟು ಪಟ್ಟು ಹೆಚ್ಚಳವಾಗಿದೆ.

ಗೋಪಾಲಯ್ಯ ಕುಟುಂಬದ ಬಳಿ 2019ರ ನವೆಂಬರ್‌ನಲ್ಲಿ ಒಟ್ಟು₹ 11.99 ಕೋಟಿ ಮೌಲ್ಯದ ಆಸ್ತಿ ಇತ್ತು. ಈಗ ಅವರ ಕುಟುಂಬದ ಒಟ್ಟು ಆಸ್ತಿಯ ಮೌಲ್ಯ ₹ 96.15 ಕೋಟಿ. ಸಚಿವರು ಮತ್ತು ಅವರ ಪತ್ನಿ ಎಸ್‌.ಪಿ. ಹೇಮಲತಾ ಇಬ್ಬರೂ ಮಹಾಲಕ್ಷ್ಮಿ ಬಡಾವಣೆ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿಗಳಾಗಿ ಸೋಮವಾರ ನಾಮಪತ್ರ ಸಲ್ಲಿಸಿದರು.

2019ರ ಉಪ ಚುನಾವಣೆ ಸಂದರ್ಭದಲ್ಲಿ ಗೋಪಾಲಯ್ಯ ಕುಟುಂಬ ಒಟ್ಟು ₹ 11.78 ಕೋಟಿ ಮೌಲ್ಯದ ಸ್ಥಿರಾಸ್ತಿ ಹೊಂದಿತ್ತು. ಈಗ ಅವರ ಕುಟುಂಬ ಹೊಂದಿರುವ ಒಟ್ಟು ಸ್ಥಿರಾಸ್ತಿ ₹ 95.91 ಕೋಟಿ ಮೌಲ್ಯದ್ದು ಎಂದು ಚುನಾವಣಾಧಿಕಾರಿಗೆ ಸಲ್ಲಿಸಿರುವ ಪ್ರಮಾಣಪತ್ರದಲ್ಲಿ ತಿಳಿಸಿದ್ದಾರೆ.

ಇಬ್ಬರ ಆದಾಯದಲ್ಲೂ ಗಣನೀಯ ಏರಿಕೆಯಾಗಿದೆ. 2019ರಲ್ಲಿ ಗೋಪಾಲಯ್ಯ ಅವರ ವಾರ್ಷಿಕ ಆದಾಯ ₹ 6.70 ಲಕ್ಷ ಇದ್ದು, ಈಗ ₹ 3.47 ಕೋಟಿಗೆ ಏರಿಕೆಯಾಗಿದೆ. ಹೇಮಲತಾ ಅವರ ವಾರ್ಷಿಕ ಆದಾಯ ₹ 5.21 ಲಕ್ಷದಿಂದ ₹ 3.37 ಕೋಟಿಗೆ ಏರಿಕೆಯಾಗಿದೆ. ಸಾಲದಲ್ಲೂ ಭಾರಿ ಏರಿಕೆಯಾಗಿದೆ. ಸಚಿವರು 2019ರಲ್ಲಿ ₹ 1.79 ಕೋಟಿ ಸಾಲ ಹೊಂದಿದ್ದರು. ಈಗ ಸಾಲದ ಮೊತ್ತ ₹ 22.49 ಕೋಟಿಗೆ ಏರಿಕೆಯಾಗಿದೆ. ಪತ್ನಿಯ ಸಾಲ ₹ 5.26 ಕೋಟಿಯಿಂದ ₹ 26.01 ಕೋಟಿಗೆ ಹೆಚ್ಚಳವಾಗಿದೆ ಎಂಬ ಮಾಹಿತಿ ಪ್ರಮಾಣ ಪತ್ರದಲ್ಲಿದೆ.

ಸಚಿವರ ಬಳಿ ಮಹೀಂದ್ರಾ ಜೀಪ್‌, ಟೊಯೊಟಾ ಕ್ವಾಲಿಸ್‌, ಟೊಯೊಟಾ ಇನ್ನೋವಾ, ಟೊಯೊಟಾ ಫಾರ್ಚೂನರ್‌ ಕಾರುಗಳಿವೆ. ಕುಟುಂಬದ ಬಳಿ 18 ಕೆ.ಜಿ. ಬೆಳ್ಳಿ ಮತ್ತು 2 ಕೆ.ಜಿ.ಯಷ್ಟು ಚಿನ್ನವಿದೆ.

lokesh

Recent Posts

ತಿ.‌ ನರಸೀಪುರ: ಬೈಕ್ ಡಿಕ್ಕಿ ಚಿರತೆ ಸಾವು

ತಿ. ನರಸೀಪುರ: ತಾಲೂಕಿನ ಬನ್ನೂರು ಹೋಬಳಿಯ ಬಸವನಹಳ್ಳಿ ಗ್ರಾಮದ ಸಮೀಪದ ಮುಖ್ಯರಸ್ತೆಯಲ್ಲಿ ದ್ವಿಚಕ್ರ ವಾಹನ ಚಿರತೆಗೆ ಡಿಕ್ಕಿ ಹೊಡೆದ ಪರಿಣಾಮ…

6 hours ago

ತಿರುಪತಿ ಲಡ್ಡು: ತುಪ್ಪದಲ್ಲಿ ಪ್ರಾಣಿ ಕೊಬ್ಬು ಬಳಕೆ

ಅಮರಾವತಿ: ಜಗತ್‌ ಪ್ರಸಿದ್ಧ ತಿರುಪತಿ ಲಡ್ಡು ಪ್ರಸಾದದಲ್ಲಿ ಪ್ರಾಣಿಗಳ ಕೊಬ್ಬು ಹಾಗೂ ಕಳಪೆ ಗುಣಮಟ್ಟದ ಪದಾರ್ಥಗಳು ಪತ್ತೆಯಾಗಿದೆ ಎಂದು ತೆಲುಗು…

8 hours ago

ಬುರ್ಖಾಧಾರಿ ಮಹಿಳೆಯಿಂದ ಸಲ್ಮಾನ್‌ ಖಾನ್‌ ತಂದೆಗೆ ಜೀವ ಬೆದರಿಕೆ: ಮಹಿಳೆ ಸೇರಿ ಇಬ್ಬರ ಬಂಧನ

ಮುಂಬೈ:‌ ಬಾಲಿವುಡ್‌ನ ಭಾಯಿಜಾನ್ ಸಲ್ಮಾನ್‌ ಖಾನ್‌ ಅವರ ತಂದೆಗೆ ಬುರ್ಖಾ ಧರಿಸಿದ್ದ ಮಹಿಳೆ ಹಾಗೂ ಇನ್ನೊರ್ವ ವ್ಯಕ್ತಿ ಜೀವ ಬೆದರಿಕೆ…

8 hours ago

ಶಾಸಕ ಮುನಿರತ್ನಗೆ ಜಾಮೀನು: ಅತ್ಯಾಚಾರ ಪ್ರಕರಣದಲ್ಲಿ ಮತ್ತೆ ಬಂಧನ ಸಾಧ್ಯತೆ

ಬೆಂಗಳೂರು: ಗುತ್ತಿಗೆದಾರರೊಬ್ಬರಿಗೆ ಜಾತಿನಿಂದನೆ ಹಾಗೂ ಪ್ರಾಣ ಬೆದರಿಕೆ ಹಾಕಿದ ಪ್ರಕರಣದಲ್ಲಿ ಬೆಂಗಳೂರಿನ ರಾಜರಾಜೇಶ್ವರಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕ ಮುನಿರತ್ನಗೆ…

9 hours ago

ನುಡಿ ಹಬ್ಬಕ್ಕೆ ಆಹ್ವಾನಿಸಲು ಸಿದ್ಧವಾಗಿದೆ ಕನ್ನಡ ರಥ

ಮಂಡ್ಯ: ಜಿಲ್ಲೆಯಲ್ಲಿ ಡಿಸೆಂಬರ್ 20, 21, 22 ರಂದು ನಡೆಯಲಿರುವ 87 ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ…

10 hours ago

ಬಸ್‌ನಲ್ಲಿ ಪ್ರಯಾಣ: ಮಹಿಳೆಯರಿಂದ ಶಕ್ತಿಯೋಜನೆಯ ಅಭಿಪ್ರಾಯ ಪಡೆದ ಪುಷ್ಪ ಅಮರನಾಥ್‌

ಮೈಸೂರು: ರಾಜ್ಯ ಸರ್ಕಾರದ ಮಹತ್ವಕಾಂಕ್ಷೆ ಯೋಜನೆಗಳಲ್ಲಿ ಒಂದಾದ ಶಕ್ತಿಯೋಜನೆ ಫಲಾನುಭವಿಗಳ ಅಭಿಪ್ರಾಯ ಸಂಗ್ರಹಿಸಲು ಗ್ಯಾರಂಟಿ ಅನುಷ್ಠಾನ ಸಮಿತಿ ಉಪಾಧ್ಯಕ್ಷೆಯಾದ ಡಾ…

10 hours ago