BREAKING NEWS

ರಾಜ್ಯದಲ್ಲಿ ಲೋಕಸಭಾ ಚುನಾವಣೆಯಲ್ಲಿ ಕನಿಷ್ಠ ಪಕ್ಷ 18 ರಿಂದ 20 ಕ್ಷೇತ್ರಗಳನ್ನು ಗೆಲ್ಲಬೇಕು: ಕಾಂಗ್ರೆಸ್ ವರಿಷ್ಠರ ಚರ್ಚೆ

ನವದೆಹಲಿ : ಮುಂದಿನ ವರ್ಷ ನಡೆಯಲಿರುವ ಲೋಕಸಭಾ ಚುನಾವಣೆಯ ಸಿದ್ಧತೆಗಳ ಕುರಿತು ಕಾಂಗ್ರೆಸ್ ಪಕ್ಷದ ರಾಷ್ಟ್ರೀಯ ನಾಯಕರು, ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸೇರಿದಂತೆ ಸಚಿವರು, ಶಾಸಕರು, ಹಿರಿಯ ಮುಖಂಡರೊಂದಿಗೆ ಸುದೀರ್ಘ ಸಮಾಲೋಚನೆ ನಡೆಸಿದರು.

ಬುಧವಾರ ಹೊಸದಿಲ್ಲಿಯಲ್ಲಿರುವ ಕಾಂಗ್ರೆಸ್ ಪಕ್ಷದ ಕಚೇರಿಯಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ನೇತೃತ್ವದಲ್ಲಿ ನಡೆದ ಸಭೆಯಲ್ಲಿ, ಎಐಸಿಸಿ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ, ಸಂಘಟನಾ ಪ್ರಧಾನ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್, ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುಜೇವಾಲ ಉಪಸ್ಥಿತರಿದ್ದರು.

ರಾಜ್ಯದ ಜನತೆಗೆ ಸರಕಾರ ನೀಡಿರುವ ಐದು ಉಚಿತ ಗ್ಯಾರಂಟಿಗಳ ಸಮರ್ಪಕ ಅನುಷ್ಠಾನವಾಗಬೇಕು. ಫಲಾನುಭವಿಗಳನ್ನು ಸ್ಥಳೀಯ ಕಾಂಗ್ರೆಸ್ ಕಾರ್ಯಕರ್ತರು ಸಂಪರ್ಕ ಮಾಡಬೇಕು. ಫಲಾನುಭವಿಗಳ ಸಭೆ ಅಥವಾ ಸಮಾವೇಶಗಳನ್ನು ಮಾಡುವಂತೆಯೂ ಕಾಂಗ್ರೆಸ್ ನಾಯಕರು ಸೂಚಿಸಿದ್ದಾರೆ.

ಲೋಕಸಭಾ ಚುನಾವಣೆಗೆ ಅಭ್ಯರ್ಥಿಗಳನ್ನು ಘೋಷಿಸುವುದು ತಡ ಮಾಡಬಾರದು. ಆದಷ್ಟು ಬೇಗ ಅಭ್ಯರ್ಥಿಗಳನ್ನು ಪ್ರಕಟಿಸುವುದರಿಂದ ಕ್ಷೇತ್ರಗಳಲ್ಲಿ ಕೆಲಸ ಮಾಡಲು ಸಹಕಾರಿಯಾಗುತ್ತದೆ ಎಂದು ರಾಜ್ಯ ನಾಯಕರು, ಎಐಸಿಸಿ ವರಿಷ್ಠರಿಗೆ ಕೋರಿದ್ದಾರೆ.

ಭ್ರಷ್ಟಾಚಾರಕ್ಕೆ ಅವಕಾಶ ನೀಡಬಾರದು: ನಾವು ಜನಪರವಾಗಿದ್ದೇವೆ. ಜನರು ನಮ್ಮ ಪರವಾಗಿರುತ್ತಾರೆ. ಆದುದರಿಂದ, ಯಾವುದೆ ಕಾರಣಕ್ಕೂ ಸರಕಾರದ ವಿರುದ್ಧ ಭ್ರಷ್ಟಾಚಾರದ ಆರೋಪ ಕೇಳಿ ಬರದಂತೆ ಎಚ್ಚರಿಕೆ ವಹಿಸುವಂತೆ ಸಚಿವರಿಗೆ ರಾಹುಲ್ ಗಾಂಧಿ ಸೂಚನೆ ನೀಡಿದ್ದಾರೆ ಎಂದು ತಿಳಿದು ಬಂದಿದೆ.

ಈ ಹಿಂದಿನ ಬಿಜೆಪಿ ಸರಕಾರದಲ್ಲಿನ ಭ್ರಷ್ಟಾಚಾರದ ವಿರುದ್ಧ ನಾವು ಹೋರಾಟ ಮಾಡಿದ್ದೇವೆ. ಆದುದರಿಂದ, ನಮ್ಮ ಸರಕಾರದ ವಿರುದ್ಧ ಅಂತಹ ಆರೋಪಗಳು ಬರದಂತೆ ಎಚ್ಚರ ವಹಿಸುವುದು ಅಗತ್ಯ. ಪಕ್ಷದ ಕಾರ್ಯಕರ್ತರ ಜೊತೆ ಸಚಿವರು ನಿಕಟ ಸಂಪರ್ಕ ಹೊಂದಿರಬೇಕು. ಪ್ರಮುಖವಾಗಿ ಕಾಂಗ್ರೆಸ್ ಕೊಟ್ಟಿರುವ ಗ್ಯಾರಂಟಿಗಳನ್ನು ಜನರಿಗೆ ತಲುಪಿಸಲು ಶ್ರಮವಹಿಸಿ ಎಂದು ರಾಹುಲ್ ಗಾಂಧಿ ತಿಳಿಸಿದ್ದಾರೆ ಎನ್ನಲಾಗಿದೆ.

ಗ್ಯಾರಂಟಿಗಳ ಅನುಷ್ಠಾನದಿಂದ ರಾಜ್ಯದ ಆರ್ಥಿಕತೆ ದಿವಾಳಿಯಾಗಲಿದೆ ಎಂದು ವಿಪಕ್ಷಗಳು ಅಪಪ್ರಚಾರ ಮಾಡುತ್ತವೆ. ಆದರೆ, ಸರಿಯಾದ ರೀತಿಯಲ್ಲಿ ಸಂಪನ್ಮೂಲ ಕ್ರೋಢೀಕರಿಸಿದರೆ ಅಂತಹ ಸಮಸ್ಯೆ ಎದುರಾಗುವುದಿಲ್ಲ. ನಾವು ಜನರ ಪರವಾಗಿರುವುದರಿಂದಲೆ, ಈ ವಿಧಾನಸಭೆ ಚುನಾವಣೆಯಲ್ಲಿ ಮತದಾರರು ಐತಿಹಾಸಿಕ ಗೆಲುವು ಕೊಟ್ಟಿದ್ದಾರೆ ಎಂದು ಸಚಿವರಿಗೆ ರಾಹುಲ್ ಗಾಂಧಿ ಕಿವಿಮಾತು ಹೇಳಿದರು.

ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಹಾಗೂ ಜೆಡಿಎಸ್ ಮೈತ್ರಿ ಮಾಡಿಕೊಂಡು ಕಣಕ್ಕಿಳಿದರೆ ಅದನ್ನು ಯಾವ ರೀತಿ ಎದುರಿಸಬೇಕು ಎಂಬುದರ ಬಗ್ಗೆ ಈಗಿನಿಂದಲೆ ಅಗತ್ಯ ಸಿದ್ಧತೆ ಮಾಡಿಕೊಳ್ಳಬೇಕು. ಅಗತ್ಯ ವಸ್ತುಗಳ ಬೆಲೆ ಏರಿಕೆ, ನಿರುದ್ಯೋಗ, ಅಡುಗೆ ಅನಿಲ ಸಿಲಿಂಡರ್ ದುಬಾರಿ ಈ ಎಲ್ಲ ವಿಷಯಗಳನ್ನು ಪ್ರಚಾರಕ್ಕೆ ಬಳಸಿಕೊಳ್ಳಬೇಕು ಎಂದು ಅವರು ತಿಳಿಸಿದ್ದಾರೆ ಎಂದು ಹೇಳಲಾಗಿದೆ.

ರಾಜ್ಯ ಸರಕಾರ ನೀಡಿರುವ ಐದು ಗ್ಯಾರಂಟಿಗಳಿಂದ ಕಾಂಗ್ರೆಸ್ ಪಕ್ಷಕ್ಕೆ ಅನುಕೂಲವಾಗಲಿದೆ. ಈ ಗ್ಯಾರಂಟಿಗಳ ಬಗ್ಗೆ ಹೆಚ್ಚು ಪ್ರಚಾರ ನಡೆಸುವಂತೆ ರಾಜ್ಯ ನಾಯಕರಿಗೆ ಸೂಚನೆ ನೀಡಲಾಗಿದೆ. ಕರ್ನಾಟಕದಲ್ಲಿ ಈ ಬಾರಿ ಕನಿಷ್ಠ 20 ಲೋಕಸಭಾ ಕ್ಷೇತ್ರಗಳನ್ನು ಗೆಲ್ಲುವ ನಿರೀಕ್ಷೆಯಿದೆ ಎಂದು ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ ತಿಳಿಸಿದ್ದಾರೆ.

andolanait

Recent Posts

ಸಂಪ್ರದಾಯವಾಗಿ ನಡೆಯದ ವಿವಾಹ ಅಮಾನ್ಯ ; ಗುಜರಾತ್ ಹೈಕೋರ್ಟ್ ತೀರ್ಪು

ಸಪ್ತಪದಿ ಹಿಂದೂ ವಿವಾಹದ ಅಡಿಪಾಯ ; ಗುಜರಾತ್‌ ಹೈಕೋರ್ಟ್‌ ತೀರ್ಪು ಅಹಮದಾಬಾದ್ : ಸಪ್ತಪದಿಯಂತಹ ಸಾಂಪ್ರದಾಯಿಕ ವಿಧಿವಿಧಾನಗಳು ಮತ್ತು ಸಮಾರಂಭಗಳನ್ನು…

8 hours ago

ಬೋರ್‌ವೆಲ್, ಪಂಪ್‌ಸೆಟ್ ಕೇಬಲ್‌ ಕಳ್ಳತನ ಯುವಕರಿಗೆ ಧರ್ಮದೇಟು

ಮಂಡ್ಯ : ಬೋರ್‌ವೆಲ್, ಪಂಪ್‌ಸೆಟ್ ಕೇಬಲ್ ಕಳವು ಮಾಡುತ್ತಿದ್ದ ಅಪ್ರಾಪ್ತ ಬಾಲಕ ಸೇರಿದಂತೆ ಮೂವರನ್ನು ಸಾರ್ವಜನಿಕರೇ ಹಿಡಿದು ಕಂಬಕ್ಕೆ ಕಟ್ಟಿ…

9 hours ago

ವಿದ್ಯುತ್‌ ಶಾರ್ಟ್‌ ಸರ್ಕ್ಯೂಟ್‌ ; ಸುಟ್ಟು ಹೋದ 6 ಎಕರೆ ಕಬ್ಬು

ಹನೂರು : ಅತಿಯಾದ ಗಾಳಿಯ ರಭಸಕ್ಕೆ ವಿದ್ಯುತ್ ತಂತಿ ಒಂದಕ್ಕೊಂದು ಸ್ಪರ್ಶಿಸಿ ಬೆಂಕಿ ಹೊತ್ತಿಕೊಂಡು ಜಮೀನಿನಲ್ಲಿದ್ದ 6 ಎಕರೆ ಕಬ್ಬು…

10 hours ago

ಆಷಾಢ ಶುಕ್ರವಾರ, ಶನಿವಾರ, ಭಾನುವಾರ ಚಾಮುಂಡಿಬೆಟ್ಟಕ್ಕೆ ಖಾಸಗಿ ವಾಹನಗಳ ಪ್ರವೇಶಕ್ಕೆ ನಿರ್ಬಂಧ

ಮೈಸೂರು: ಆಷಾಢ ಶುಕ್ರವಾರ, ಶನಿವಾರ ಹಾಗೂ ಭಾನುವಾರ ಚಾಮುಂಡಿಬೆಟ್ಟಕ್ಕೆ ಖಾಸಗಿ ವಾಹನಗಳ ಪ್ರವೇಶಕ್ಕೆ ನಿರ್ಬಂಧ ವಿಧಿಸಲಾಗಿದೆ ಎಂದು ಸಚಿವ ಯತೀಂದ್ರ…

14 hours ago

ಕಾರಂಜಿ ಕೆರೆ ಉದ್ಯಾನದಲ್ಲಿ ‘ಪರಿಸರ ಅನುಭವ ವಲಯ’

ಮೈಸೂರು: ಜೀವವೈವಿಧ್ಯ ತಾಣವಾಗಿರುವn ಹಾಗೂ ಪ್ರಕೃತಿಯ ಸೊಬಗಿನ ವಾತಾವರಣದಿಂದ ಕೂಡಿರುವ ಕಾರಂಜಿ ಕೆರೆ ಉದ್ಯಾನದಲ್ಲಿ ‘ಪರಿಸರ ಅನುಭವ ವಲಯ’ ನಿರ್ಮಾಣ…

15 hours ago

ಅಲೆಮಾರಿ ಜನಾಂಗ ನಾಡಿನ ಸಂಸ್ಕೃತಿಯ ಜೀವಂತಿಕೆ

ಟಿ.ಕೆ.ಹರೀಶ್ ಸಮುದಾಯಗಳಿಗೆ ಸೂರು, ಶಿಕ್ಷಣ ಒದಗಿಸುವುದು ಅತ್ಯಗತ್ಯ ಭಾರತೀಯ ಅಲೆಮಾರಿ ಜನಾಂಗಗಳು ಕೇವಲ ಸಂಚಾರಿಗಳಲ್ಲ; ಅವರು ನಮ್ಮ ಶ್ರೀಮಂತ ಸಾಂಸ್ಕೃತಿಕ…

21 hours ago