BREAKING NEWS

ಮಹಾರಾಷ್ಟ್ರದಲ್ಲಿ ‘ಗೋ ರಕ್ಷಕ’ರ ದಾಳಿ : ದನಗಳನ್ನು ಸಾಗಿಸುತ್ತಿದ್ದ ಯುವಕ ಸಾವು

ಮಹಾರಾಷ್ಟ್ರ : ಗೋವುಗಳನ್ನು ಅಕ್ರಮವಾಗಿ ಸಾಗಣೆ ಮಾಡುತ್ತಿದ್ದ ಅನುಮಾನದ ಮೇರೆಗೆ ಗೋ ರಕ್ಷಕರು ದಾಳಿ ನಡೆಸಿದ ವೇಳೆ 23 ವರ್ಷ ವಯಸ್ಸಿನ ಯುವಕನೊಬ್ಬ ಸಾವನ್ನಪ್ಪಿದ ಘಟನೆ ಮಹಾರಾಷ್ಟ್ರ ರಾಜ್ಯದ ನಾಸಿಕ್ ಜಿಲ್ಲೆಯಲ್ಲಿ ನಡೆದಿದೆ. ಈ ಪ್ರಕರಣ ಸಂಬಂಧ 6 ಮಂದಿಯನ್ನು ಪೊಲೀಸರು ಬಂಧಿಸಿದ್ದಾರೆ.

ಲುಕ್ಮನ್ ಅನ್ಸಾರಿ ಎಂಬ ವ್ಯಕ್ತಿಯ ಶವ ಜೂನ್ 10 ರಂದು ನಾಸಿಕ್‌ನ ಇಗತ್‌ಪುರಿ ಪ್ರದೇಶದ ಘಟನ್‌ದೇವಿ ಗ್ರಾಮದ ನಿರ್ಜನ ಪ್ರದೇಶದ ಹಳ್ಳ ಒಂದರಲ್ಲಿ ಪತ್ತೆಯಾಗಿತ್ತು. ಈ ವೇಳೆ ಪ್ರಕರಣದ ತನಿಖೆ ನಡೆಸಿದಾಗ ಪೊಲೀಸರಿಗೆ ಗೋ ರಕ್ಷಕರು ದಾಳಿ ನಡೆಸಿದ ವಿಚಾರ ಗೊತ್ತಾಗಿದೆ.
ಈ ಪ್ರಕರಣ ಸಂಬಂಧ ಈಗಾಗಲೇ 6 ಮಂದಿಯನ್ನು ಬಂಧಿಸಲಾಗಿದ್ದು, ಈ ಕೃತ್ಯದಲ್ಲಿ ಇನ್ನೂ ಹಲವರು ಭಾಗಿಯಾಗಿರುವ ಶಂಕೆ ಇದೆ. ಈ ಹಿನ್ನೆಲೆಯಲ್ಲಿ ಪೊಲೀಸರು ಪ್ರಕರಣದ ಸಮಗ್ರ ತನಿಖೆಗೆ ಮುಂದಾಗಿದ್ದಾರೆ. ಕಾನೂನು ಕೈಗೆತ್ತಿಕೊಂಡು ನೈತಿಕ ಪೊಲೀಸ್‌ಗಿರಿ ನಡೆಸಿದ ಆರೋಪಿಗಳು ಬಲಪಂಥೀಯ ಹಿಂದೂ ಪರ ಸಂಘಟನೆಯಾದ ರಾಷ್ಟ್ರೀಯ ಬಜರಂಗ ದಳಕ್ಕೆ ಸೇರಿದವರು ಎಂದು ಪೊಲೀಸರು ತಿಳಿಸಿದ್ದಾರೆ.

ಜೂನ್‌ 8 ರಂದು ಮೃತ ಲುಕ್ಮನ್ ಅನ್ಸಾರಿ ಹಾಗೂ ಆತನ ಇಬ್ಬರು ಸಹಾಯಕರು ಟೆಂಪೋ ಒಂದರಲ್ಲಿ ಗೋವುಗಳನ್ನು ಸಾಗಾಟ ಮಾಡುತ್ತಿದ್ದರು. ಈ ವೇಳೆ 10 ರಿಂದ 15 ಮಂದಿ ಕಾರ್ಯಕರ್ತರು ಈ ವಾಹನವನ್ನು ತಡೆದರು. ಮಹಾರಾಷ್ಟ್ರ ರಾಜ್ಯದ ಥಾಣೆ ಜಿಲ್ಲೆಯ ಸಹಾಪುರ ಪ್ರದೇಶದ ವಿಹಿಗಾಂವ್ ಎಂಬ ಊರಿನಲ್ಲಿ ಅನ್ಸಾರಿ ಅವರ ವಾಹನವನ್ನು ತಡೆಯಲಾಗಿತ್ತು ಎಂಬ ಮಾಹಿತಿ ಸಿಕ್ಕಿದೆ.

ಈ ವೇಳೆ ಆರೋಪಿಗಳು ಟೆಂಪೋವನ್ನು ತಮ್ಮ ವಶಕ್ಕೆ ಪಡೆದು ನಾಲ್ಕು ಗೋವುಗಳನ್ನು ರಕ್ಷಣೆ ಮಾಡಿದ್ದಾಗಿ ಹೇಳಿಕೊಂಡಿದ್ದಾರೆ. ಹಸುಗಳನ್ನು ಬಂಧಮುಕ್ತಗೊಳಿಸಿದ ನಂತರ ಇಗತ್‌ಪುರಿ ಪ್ರದೇಶದ ಘಟನ್‌ ದೇವಿ ಗ್ರಾಮಕ್ಕೆ ವಾಹನವನ್ನು ತೆಗೆದುಕೊಂಡು ಹೋದರು ಎಂಬ ಮಾಹಿತಿ ಸಿಕ್ಕಿದೆ. ಈ ವಾಹನದಲ್ಲಿ ಅನ್ಸಾರಿ ಹಾಗೂ ಅವರ ಇಬ್ಬರು ಸಹಾಯಕರನ್ನು ಬಲವಂತವಾಗಿ ಕಟ್ಟಿ ಹಾಕಲಾಗಿತ್ತು ಎಂದು ತಿಳಿದು ಬಂದಿದೆ.

ಘಟನ್‌ದೇವಿ ಗ್ರಾಮದ ನಿರ್ಜನ ಪ್ರದೇಶದ ಹಳ್ಳವೊಂದರ ಬಳಿ ಬಳಿ ಟೆಂಪೋ ವಾಹನವನ್ನು ಕೊಂಡೊಯ್ದ ಆರೋಪಿಗಳು ಮೂವರ ಮೇಲೂ ಹಲ್ಲೆ ನಡೆಸಿದರು ಎಂಬ ಮಾಹಿತಿ ಸಿಕ್ಕಿದೆ. ಈ ವೇಳೆ ಅನ್ಸಾರಿ ಅವರ ಇಬ್ಬರು ಸಹಾಯಕರು ಹರಸಾಹಸ ನಡೆಸಿ ಘಟನಾ ಸ್ಥಳದಿಂದ ಪರಾರಿಯಾದರು. ಆದರೆ, ಅನ್ಸಾರಿ ಪರಾರಿಯಾಗಲು ಸಾಧ್ಯವಾಗಲಿಲ್ಲ ಎಂದು ಪೊಲೀಸರು ಮಾಧ್ಯಮಗಳಿಗೆ ಮಾಹಿತಿ ನೀಡಿದ್ದಾರೆ.

ಆದರೆ ಬಂಧಿತ ಆರೋಪಿಗಳು ಮಾತ್ರ ಹಳ್ಳಕ್ಕೆ ಬಿದ್ದು ಅನ್ಸಾರಿ ಮೃತಪಟ್ಟ ಎಂದು ಹೇಳುತ್ತಿದ್ದಾರೆ. ಆದ್ರೆ, ಪೊಲೀಸರು ಮಾತ್ರ ಮಾರಣಾಂತಿಕ ಥಳಿತದಿಂದಲೇ ಅನ್ಸಾರಿ ಮೃತಪಟ್ಟಿರಬಹುದು ಎಂದು ಶಂಕಿಸಿದ್ದಾರೆ. ಈ ಪ್ರಕರಣ ಸಂಬಂಧ ಪೊಲೀಸರು ಎರಡು ಪ್ರತ್ಯೇಕ ಕೇಸ್‌ಗಳನ್ನು ದಾಖಲು ಮಾಡಿದ್ದಾರೆ. ಈ ಪೈಕಿ ಒಂದು ಕೇಸ್‌ ಕೊಲೆ ಪ್ರಕರಣವಾಗಿದ್ದು, ಭಾರತೀಯ ದಂಡ ಸಂಹಿತೆ ಐಪಿಸಿ ಸೆಕ್ಷನ್ 302ರ ಅಡಿ ದಾಖಲು ಮಾಡಲಾಗಿದೆ.

lokesh

Recent Posts

ತಂತ್ರಜ್ಞಾನ ಶಸ್ತ್ರಾಸ್ತ್ರೀಕರಣದ ಬಗ್ಗೆ ಕಳವಳಗಳ ವ್ಯಕ್ತಪಡಿಸಿದ ಪ್ರಧಾನಿ ಮೋದಿ

ನವದೆಹಲಿ : ಹೆಚ್ಚುತ್ತಿರುವ ಭೌಗೋಳಿಕ ರಾಜಕೀಯ ಉದ್ವಿಗ್ನತೆಗಳು ಜಾಗತಿಕವಾಗಿ ಸಾಮಾನ್ಯ ಜೀವನದ ಮೇಲೆ ಪ್ರತಿಕೂಲ ಪರಿಣಾಮ ಬೀರುತ್ತಿದೆ ಎಂದು ಪ್ರಧಾನಿ…

8 hours ago

ಭಾನುವಾರದ ಹಾಡುಪಾಡು | ಹೊರಗೆ ನಗುವಿನ ಮೇಕಪ್‌, ಒಳಗೆ ಕುದಿಯುವ ಬೇಗುದಿ

ಮೇಘನ ಕೆ.ಆರ್‌ ಕೇರಳಿಗಳಾದ ನನಗೆ ವರ್ಷಕ್ಕೆರಡು ಹಬ್ಬ-ಓಣಂ, ವಿಶು ಮಾತ್ರ ತಿಳಿದಿತ್ತು. ದೀಪಾವಳಿಗೆ ದನಗಳಿಗೆ ಪೂಜೆ ಮಾಡಿ ಅಮ್ಮ ಕೆಲಸಕ್ಕೆ…

12 hours ago

ಭಾನುವಾರದ ಹಾಡುಪಾಡು | ಮಳೆ ತರುವ ತಾಯಯಿ ಈ ಪುಟ್ಟ ಗೌರಿ

ಡಾ. ಶಿಲಿನಾ ಕೋಟೆ ಎನ್.‌ ಭಾರತೀಯ ಸಂಸ್ಕೃತಿಯಲ್ಲಿ ಹಬ್ಬಗಳು ಕೇವಲ ಧಾರ್ಮಿಕ ಆಚರಣೆ ಗಳಲ್ಲ; ಅವು ಪ್ರಕೃತಿ, ಕೃಷಿ, ಮಳೆ,…

12 hours ago

ಗೌರಮ್ಮ ಭೂಮಿಗೆ ಬರುವ ದಿನ

ಶುಭಮಂಗಳ ರಾಮಾಪುರ ಗೌರಿಹಬ್ಬವೆಂದ ಕೂಡಲೇ ಸಂಭ್ರಮದ ನೆನಪು ಒಂದೆಡೆಯಾದರೆ ಕೆಲಸದ ಹೊರೆ ಮತ್ತೊಂದೆಡೆ. ನನ್ನೂರಿನಲ್ಲಂತೂ ಗೌರಿಹಬ್ಬಕ್ಕೆ ಮಡಿ ಮಾಡುವುದೇ ದೊಡ್ಡ…

12 hours ago

ಮಗಳು ಗೌರಿ, ದೇವತೆಯೂ ಗೌರಿ, ಮಳೆಯು ಗೌರಿ, ಬೆಂಕಿಯೂ ಗೌರಿ

ನಾಳಿನ ಗೌರಿ ಗಣೇಶ ಸಂಭ್ರಮಕ್ಕೆ ಬರಹಗಳ ಬಾಗಿನ ಡಾ.ಶುಭಶ್ರೀ ಪ್ರಸಾದ್‌, ಮಂಡ್ಯ ‘ಮಗಳು’ಎಂದ ಕ್ಷಣ ಕಣ್ಮುಂದೆ ಬರುವುದು ಜರಿ ಲಂಗ,…

12 hours ago

ಗೌರಿ-ಗಣೇಶ ಹಬ್ಬಕ್ಕೆ ಸಕಲ ಸಿದ್ಧತೆ

ಅರಮನೆ ನಗರಿಯ ಮಾರುಕಟ್ಟೆಗಳಲ್ಲಿ ಖರೀದಿ ಭರಾಟೆ ಜೋರು ಸೇವಂತಿಗೆ ಹೂವು, ಏಲಕ್ಕಿ ಬಾಳೆಹಣ್ಣು ಸೇರಿ ಇನ್ನಿತರೆ ಹಣ್ಣುಗಳ ಬೆಲೆ ಹೆಚ್ಚಳ…

12 hours ago