ಶ್ರೀನಗರ : ಜಮ್ಮು ಮತ್ತು ಕಾಶ್ಮೀರದ ರಾಮಗಢ ಸೆಕ್ಟರ್‌ನ ಅಂತಾರಾಷ್ಟ್ರೀಯ ಗಡಿಯಲ್ಲಿ ಪಾಕಿಸ್ತಾನದ ಸೇನೆ ನಡೆಸಿದ ಅಪ್ರಚೋದಿತ ಗುಂಡಿನ ದಾಳಿಯಿಂದ ಬಿಎಸ್‍ಎಫ್ ಸಿಬ್ಬಂದಿಯೊಬ್ಬರು ಸಾವನ್ನಪ್ಪಿದ್ದಾರೆ. ಈ ವೇಳೆ ಭಾರತೀಯ ಸೇನೆ ಸಹ ತಕ್ಕ ಪ್ರತ್ಯುತ್ತರ ನೀಡಿದ್ದು, ಶತ್ರು ಸೇನೆಯನ್ನು ಹಿಮ್ಮೆಟ್ಟಿಸಿದೆ.
ಪಾಕ್ ಸೇನೆ ನಡೆಸಿದ ದಾಳಿಯಿಂದ ಬಿಎಸ್‍ಎಫ್ ಸಿಬ್ಬಂದಿ ಗಾಯಗೊಂಡಿದ್ದರು. ತಕ್ಷಣ ಅವರನ್ನು ಆಸ್ಪತ್ರೆಗೆ ದಾಖಲಿಸಲಾಯಿತು. ತೀವ್ರ ಗಾಯಗೊಂಡಿದ್ದ ಅವರು ಚಿಕಿತ್ಸೆಗೆ ಸ್ಪಂದಿಸದೆ ಸಾವಿಗೀಡಾಗಿದ್ದಾರೆ. ಪಾಕ್ ದಾಳಿಯಿಂದ ರಾಮಗಢ ಪ್ರದೇಶದ ಸುತ್ತಮುತ್ತ ಗ್ರಾಮಸ್ಥರು ಭಯಗೊಂಡು ಬಂಕರ್ ಗಳಲ್ಲಿ ಆಶ್ರಯ ಪಡೆದಿದ್ದಾರೆ.
ಪಾಕಿಸ್ತಾನ ಹಾಗೂ ಭಾರತ 2021 ರ ಫೆ.25 ರಂದು ಕದನ ವಿರಾಮ ಒಪ್ಪಂದಕ್ಕೆ ಸಹಿ ಹಾಕಿದ ನಂತರ ಜಮ್ಮು ಗಡಿಯಲ್ಲಿ 24 ದಿನಗಳಲ್ಲಿ ನಡೆದ ಮೂರನೇ ಕದನ ವಿರಾಮ ಉಲ್ಲಂಘನೆ ಇದಾಗಿದೆ. ಅಲ್ಲದೇ ಈ ಮೂಲಕ ಒಟ್ಟಾರೆ ಆರನೇ ಉಲ್ಲಂಘನೆ ಇದಾಗಿದೆ.
ಅಕ್ಟೋಬರ್ 28 ರಂದು ಪಾಕಿಸ್ತಾನ ರೇಂಜರ್ ಗಳು ಸುಮಾರು ಏಳು ಗಂಟೆಗಳ ಕಾಲ ಗುಂಡು ಹಾಗೂ ಶೆಲ್ ದಾಳಿ ನಡೆಸಿತ್ತು. ಈ ವೇಳೆ ಇಬ್ಬರು ಬಿಎಸ್‍ಎಫ್ ಯೋಧರು ಮತ್ತು ಓರ್ವ ಮಹಿಳೆ ಗಾಯಗೊಂಡಿದ್ದರು. ಅಕ್ಟೋಬರ್ 17 ರಂದು ಅರ್ನಿಯಾ ಸೆಕ್ಟರ್ ನಲ್ಲಿ ಪಾಕಿಸ್ತಾನದ ರೇಂಜರ್ ಗಳು ನಡೆಸಿದ ಅಪ್ರಚೋದಿತ ಗುಂಡಿನ ದಾಳಿಯಲ್ಲಿ ಇಬ್ಬರು ಬಿಎಸ್‍ಎಫ್ ಸಿಬ್ಬಂದಿ ಗಾಯಗೊಂಡಿದ್ದರು.
ಮಂಡ್ಯ : ಕೊಬ್ಬರಿ ಶೆಡ್ ಗೆ ಬೆಂಕಿ ಬಿದ್ದು ಲಕ್ಷಾಂತರ ರೂ. ಮೌಲ್ಯದ ಕೊಬ್ಬರಿ ನಾಶವಾಗಿರುವ ಘಟನೆ ತಾಲೂಕಿನ ಗುನ್ನಾಯಕನಹಳ್ಳಿಯಲ್ಲಿ…
ಹನೂರು : ತಾಲೂಕಿನ ಕಾವೇರಿ ವನ್ಯಜೀವಿಧಾಮ ವ್ಯಾಪ್ತಿಯ ಅಲಗುಮೂಲೆ ಅರಣ್ಯ ಪ್ರದೇಶದಲ್ಲಿ ಬುಧವಾರ ರಾತ್ರಿ ಏಕಾಏಕಿ ಎರಡು ಮೂರು ಕಡೆ…
ಶ್ರೀರಂಗಪಟ್ಟಣ : ಸಿಗರೇಟ್ ಮತ್ತು ತಂಬಾಕು ಉತ್ಪನ್ನಗಳ ಸೇವನೆಯಿಂದ ಕ್ಯಾನ್ಸರ್, ಹೃದಯ, ಶ್ವಾಸಕೋಶ ಸಂಬಂಧಿತ ಮಾರಣಾಂತಿಕ ಕಾಯಿಲೆಗಳು ಬರುತ್ತವೆಂದು ಕ್ಷೇತ್ರ…
ಹೊಸದಿಲ್ಲಿ : ದೇಶದ ಎಲ್ಲ ನಗರಗಳ ರಸ್ತೆಗಳಲ್ಲಿ ಆಂಬ್ಯುಲೆನ್ಸ್ಗಳ ಸಂಚಾರಕ್ಕಾಗಿ ಪ್ರತ್ಯೇಕ ಮೀಸಲು ಮಾರ್ಗಗಳನ್ನು ಒದಗಿಸುವಂತೆ ಸಮಾಜವಾದಿ ಪಕ್ಷದ ಸಂಸದೆ…
ಗುಂಡ್ಲುಪೇಟೆ : ಜಾನುವಾರು ಹಾಗೂ ಜಾನುವಾರು ಮೇಯಿಸುತ್ತಿದ್ದ ರೈತರೊಬ್ಬರ ಮೇಲೆ ಹುಲಿ ದಾಳಿ ನಡೆಸಿದೆ. ಪರಿಣಾಮ ರೈತ ಗಾಯಗೊಂಡಿದ್ದಾನೆ. ಘಟನೆ…
ಮೈಸೂರು : ರಾಜ್ಯದ ಪ್ರತಿಯೊಂದೂ ಜಿಲ್ಲೆಗಳ ವಿಶೇಷ ಉತ್ಪನ್ನಗಳ ಪರಿಚಯ, ಮಾರಾಟಕ್ಕೆ ಅವಕಾಶ ಕಲ್ಪಿಸಿಕೊಡುವ ಉದ್ದೇಶದಿಂದ ಕೇಂದ್ರ ಸರ್ಕಾರ ನಿರ್ಮಿಸುತ್ತಿರುವ…