ಕೊಪ್ಪಳ : 200 ಯುನಿಟ್ ಕರೆಂಟ್ ಫ್ರೀ ಕೊಡುತ್ತೇವೆ ಎಂದು ಕಾಂಗ್ರೆಸ್ ಸರ್ಕಾರ ಹೇಳಿದ್ದು, ಜನ ಇದನ್ನೇ ನೆಪ ಮಾಡಿಕೊಂಡು ಕರೆಂಟ್ ಬಿಲ್ ಕಟ್ಟುವುದಿಲ್ಲ ಎಂದು ಹಠಕ್ಕೆ ಬಿದ್ದಿದ್ದಾರೆ. ಅಂತೆಯೇ ಇದೀಗ ಕೊಪ್ಪಳದಲ್ಲಿ ವಿದ್ಯುತ್ ಬಿಲ್ ಕಲೆಕ್ಟ್ ಮಾಡಲು ಬಂದವರ ಮೇಲೆ ಹಲ್ಲೆ ಮಾಡಿರುವ ಘಟನೆ ನಡೆದಿದೆ.
ಕುಕನಪಳ್ಳಿ ಗ್ರಾಮದ ಚಂದ್ರಶೇಖರಯ್ಯ ಎಂಬವರು ಕಳೆದ ಆರು ತಿಂಗಳಿನಿಂದ ಬಿಲ್ ಬಾಕಿ ಉಳಿಸಿಕೊಂಡಿದ್ದರು. ಬಿಲ್ ಪಾವತಿ ಮಾಡದ ಹಿನ್ನೆಲೆಯಲ್ಲಿ ಲೈನ್ ಮ್ಯಾನ್ ಮಂಜುನಾಥ ಬಿಲ್ ವಸೂಲಾತಿಗೆ ತೆರಳಿದ್ದರು. ಈ ವೇಳೆ ವಿದ್ಯುತ್ ಬಿಲ್ ಕಟ್ಟಲ್ಲ, ಕರೆಂಟ್ ಫ್ರೀ ಎಂದು ಹೇಳಿದ್ದಾರೆ, ಅಲ್ಲದೆ ಅವಾಚ್ಯ ಪದಗಳಿಂದ ನಿಂದಿಸಿ ಚಪ್ಪಲಿಯಿಂದ ಹಲ್ಲೆ ಮಾಡಲಾಗಿದೆ.
ಹಲ್ಲೆ ನಡೆಸಿದ ವ್ಯಕ್ತಿಯ ವಿರುದ್ಧ ಮಂಜುನಾಥ್ ಅವರು ಮುನಿರಾಬಾದ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.