BREAKING NEWS

ಕಾಂಗ್ರೆಸ್‌ನಿಂದ ರಾಜಭವನ ಚಲೋಗೆ ಯತ್ನ; ಡಿಕೆಶಿ, ಸಿದ್ದರಾಮಯ್ಯ ಸೇರಿ ಅನೇಕ ನಾಯಕರು ಪೊಲೀಸರ ವಶಕ್ಕೆ

ಬೆಂಗಳೂರು: ಎಸ್‌ಸಿ, ಎಸ್‌ಟಿ ಮೀಸಲಾತಿ ಹೆಚ್ಚಳ ವಿಚಾರವಾಗಿ ಸಂವಿಧಾನದ 9 ನೇ ಪರಿಚ್ಛೇದ ಸೇರ್ಪಡೆ ಶಿಫಾರಸ್ಸು ವಿಳಂಬ ಖಂಡಿಸಿ ಕಾಂಗ್ರೆಸ್ ರಾಜಭವನ ಚಲೋ ಪ್ರತಿಭಟನೆ ಹಮ್ಮಿಕೊಂಡಿತ್ತು. ಕೆಪಿಸಿಸಿ ಕಚೇರಿಯಿಂದ ಪಾದಯಾತ್ರೆ ಮೂಲಕ ಆಗಮಿಸಿದ ಕಾಂಗ್ರೆಸ್ ನಾಯಕರನ್ನು ಇಂಡಿಯನ್ ಎಕ್ಸ್‌ಪ್ರೆಸ್‌ ಸರ್ಕಲ್ ಬಳಿ ಪೊಲೀಸರು ವಶಕ್ಕೆ ಪಡೆದುಕೊಂಡರು.
ಪ್ರತಿಭಟನೆಯಲ್ಲಿ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್, ಮಾಜಿ ಡಿಸಿಎಂ ಡಾ. ಜಿ ಪರಮೇಶ್ವರ್, ಪರಿಷತ್ ವಿಪಕ್ಷ ನಾಯಕ ಬಿಕೆ‌ ಹರಿಪ್ರಸಾದ್, ಕೆಪಿಸಿಸಿ ಕಾರ್ಯಾಧ್ಯಕ್ಷರಾದ ರಾಮಲಿಂಗಾ ರೆಡ್ಡಿ, ಸಲೀಂ ಅಹ್ಮದ್ ಭಾಗಿಯಾಗಿದ್ದರು.
ಕಾಂಗ್ರೆಸ್ ಪ್ರತಿಭಟನೆ ವಿಚಾರವಾಗಿ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಮಾತನಾಡಿ, ಎಸ್‌ಟಿ, ಎಸ್‌ಸಿ ಮೀಸಲಾತಿ ಹೆಚ್ಚಳ ವಿಚಾರವಾಗಿ ಸಂವಿಧಾನದ 9 ನೇ ಪರಿಚ್ಛೇದಕ್ಕೆ ಸೇರಿಸಲು ಇಷ್ಟು ದಿನ ಏನು ಮಾಡುತ್ತಿದ್ದರು? ಮೀಸಲಾತಿ ಹೆಚ್ಚಳಕ್ಕೆ ಆದೇಶ ಯಾವಾಗ ಆಯಿತು? ಆದೇಶ ಆಗಿ ಬಹಳ ದಿನ ಆಯ್ತು, ನಂತರದಲ್ಲಿ ಕ್ಯಾಬಿನೆಟ್‌ನಲ್ಲೂ ನಿರ್ಧಾರ ಆಯಿತು ಎಂದರು.
ನಾವು ಪ್ರತಿಭಟನೆಗೆ ಕರೆ ಕೊಟ್ಟ ಬಳಿಕ ಕೇಂದ್ರಕ್ಕೆ ಶಿಫಾರಸ್ಸು ಮಾಡಿದ್ದಾರೆ. ಶೇ.50ರಷ್ಟು ಇರುವ ಮೀಸಲಾತಿ ಏರಿಕೆ ಮಾಡುವ ಯಾವುದೇ ಪ್ರಸ್ತಾವ ಇಲ್ಲ ಎಂದು ಕೇಂದ್ರ ಸರ್ಕಾರ ಉತ್ತರ ಕೊಟ್ಟಿದೆ. ಅಂದರೆ ಏನು ಅರ್ಥ? ರಾಜ್ಯ ಸರ್ಕಾರದ ಮೀಸಲಾತಿ ಹೆಚ್ಚಳ ಮಾಡಿದರೂ ಕೇಂದ್ರ ಒಪ್ಪಲ್ಲ ಎಂದಲ್ಲವೇ ಎಂದು ಪ್ರಶ್ನಿಸಿದರು.
ಇಂದಿರಾ ಸಹಾನಿ ಪ್ರಕರಣದಲ್ಲಿ ಮೀಸಲಾತಿ ಶೇ.50 ಮೀರಬಾರದು ಎಂದಿದೆ. ಅದು ಮೀರಬೇಕಾದರೆ ಸಂವಿಧಾನದ 9 ನೇ ಪರಿಚ್ಛೇದಕ್ಕೆ ಸೇರ್ಪಡೆ ಮಾಡಬೇಕು. ಕೇವಲ ಮತಕ್ಕಾಗಿ ಹಾಗೂ ಜನರ ದಾರಿತಪ್ಪಿಸಲು ಮೋಸ ಮಾಡುತ್ತಿದ್ದಾರೆ ಎಂದು ಆರೋಪಿಸಿದರು.
ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಮಾತನಾಡಿ, ದಲಿತರಿಗೆ ಎಷ್ಟು ಮೋಸ ಮಾಡುತ್ತಿದ್ದೀರಿ? ಬಿಜೆಪಿ ಸರ್ಕಾರ ಸಂವಿಧಾನದ ವಿರುದ್ಧವಾಗಿ ನಡೆದುಕೊಳ್ಳುತ್ತಿದೆ. ಬಿಜೆಪಿ ಸರ್ಕಾರ 15 ದಿನ ಮಾತ್ರ ಇದೆ. ಅಷ್ಟು ದಿನ ಕೂಡಾ ಇರಬಾರದು. ಕೂಡಲೇ ವಜಾ ಮಾಡಬೇಕು ಎಂದು ಒತ್ತಾಯಿಸಿ, ರಾಜ ಭವನ ಚಲೋ ಹಮ್ಮಿಕೊಂಡಿದ್ದೇವೆ. ಬಿಜೆಪಿ ಸರ್ಕಾರ ದಲಿತರಿಗೆ ಅವಮಾನ ಮಾಡಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಎಸ್‌ಸಿ-ಎಸ್‌ಟಿ ಮೀಸಲು ಹೆಚ್ಚಳ ಕೇಂದ್ರಕ್ಕೆ ಶಿಫಾರಸು!
ಪರಿಶಿಷ್ಟ ಜಾತಿ, ಪಂಗಡದ ಮೀಸಲಾತಿ ಪ್ರಮಾಣವನ್ನು ಶೇ.24ಕ್ಕೆ ಹೆಚ್ಚಳ ಮಾಡಿ ಕರ್ನಾಟಕ ರೂಪಿಸಿರುವ ಶಾಸನವನ್ನು ಸಂವಿಧಾನದ ಶೆಡ್ಯೂಲ್‌ 9ರಲ್ಲಿ ಸೇರ್ಪಡೆ ಮಾಡಲು ಕರ್ನಾಟಕ ಸರಕಾರ ಗುರುವಾರ ಕೇಂದ್ರ ಸರ್ಕಾರಕ್ಕೆ ಶಿಫಾರಸು ಮಾಡಿದೆ. ಪರಿಶಿಷ್ಟರ ಮೀಸಲಾತಿಯನ್ನು ಒಟ್ಟಾರೆ ಶೇ.6ರಷ್ಟು ಏರಿಕೆ ಮಾಡಲು ರಾಜ್ಯ ಸಚಿವ ಸಂಪುಟ ತೀರ್ಮಾನ ಕೈಗೊಂಡು ವಿಧಾನ ಮಂಡಲ ಅಧಿವೇಶನದಲ್ಲಿ ವಿಧೇಯಕ ಮಂಡನೆ ಮಾಡಿತ್ತು. ಚಳಿಗಾಲದ ಅಧಿವೇಶನದಲ್ಲಿ ಉಭಯ ಸದನಗಳು ವಿಧೇಯಕಕ್ಕೆ ಅನುಮೋದನೆ ನೀಡಿದ್ದವು. ಜನವರಿ 11 ರಂದು ರಾಜ್ಯಪಾಲರು ಒಪ್ಪಿಗೆ ಕೂಡ ಸೂಚಿಸಿದ್ದರು. ಆದರೆ, ಎರಡು ತಿಂಗಳ ಬಳಿಕ ವಿಧೇಯಕವನ್ನು ಶೆಡ್ಯೂಲ್‌ 9ಗೆ ಸೇರಿಸಲು ಕೇಂದ್ರಕ್ಕೆ ರಾಜ್ಯ ಸರ್ಕಾರ ಶಿಫಾರಸು ಮಾಡಿದೆ.

lokesh

Recent Posts

ಸ್ಪರ್ಧಾತ್ಮಕ ಪರೀಕ್ಷೆಯಲ್ಲಿ ಸಮಗ್ರ ಓದಿಗೆ ಒತ್ತು ನೀಡಿ : ಎಸ್‌.ಪಿ ಮಲ್ಲಿಕಾರ್ಜುನ ಬಾಲದಂಡಿ

ಮೈಸೂರು : ಯುಪಿಎಸ್‌ಸಿ ಮತ್ತು ಕೆಪಿಎಸ್‌ಸಿ ಅಂತಹ ಸ್ಪರ್ಧಾತ್ಮಕ ಪರೀಕ್ಷೆಗಳು ಕಠಿಣ ಸವಾಲು. ಇದೊಂದು ಸುದೀರ್ಘ ಪಯಣ. ಹೀಗಾಗಿ ಒಂದೇ…

12 seconds ago

ಸಾಮರ್ಥ್ಯ ವೃದ್ಧಿಗೆ ಎಐ ಬಳಸಿಕೊಳ್ಳಿ : ಪ್ರಧಾನಿ ಮೋದಿ

ಹೊಸದಿಲ್ಲಿ : ಕೃತಕ ಬುದ್ಧಿಮತ್ತೆಗೆ ಗುಲಾಮರಾಗಬೇಡಿ ಬದಲಿಗೆ ಅದನ್ನು ಸಾಮರ್ಥ್ಯವೃದ್ಧಿಗೆ ಬಳಸಿಕೊಳ್ಳಿ ಎಂದು ಪ್ರಧಾನಿ ನರೇಂದ್ರ ಮೋದಿ ಅವರು ವಿದ್ಯಾರ್ಥಿ…

13 mins ago

ನಾಪೋಕ್ಲು| ಕಾಡಾನೆ ದಾಳಿ: ಬೈಕ್‌ ಸವಾರನಿಗೆ ಗಂಭೀರ ಗಾಯ

ನಾಪೋಕ್ಲು: ಸಮೀಪದ ಮದನಾಡು ಗ್ರಾಮದಲ್ಲಿ ಕಾಡಾನೆ ಹಿಂಡು ದಾಳಿ ಮಾಡಿದ ಪರಿಣಾಮ ಬೈಕ್‌ ಸವಾರ ತೀವ್ರವಾಗಿ ಗಾಯಗೊಂಡಿರುವ ಘಟನೆ ನಡೆದಿದೆ.…

2 hours ago

ಹುಬ್ಬಳ್ಳಿಯ ಸಿದ್ದಾರೂಢ ಮಠಕ್ಕೆ ಗಾಯಕ ಸೋನು ನಿಗಮ್‌ ಭೇಟಿ

ಹುಬ್ಬಳ್ಳಿ: ಖ್ಯಾತ ಗಾಯಕ ಸೋನು ನಿಗಮ್‌ ಅವರಿಂದು ಹುಬ್ಬಳ್ಳಿಯ ಸಿದ್ದಾರೂಢ ಮಠಕ್ಕೆ ಭೇಟಿ ನೀಡಿ ಗದ್ದುಗೆಗೆ ವಿಶೇಷ ಪೂಜೆ ಸಲ್ಲಿಸಿದರು.…

2 hours ago

ಹನೂರು| ಕುಡಿಯುವ ನೀರಿಗಾಗಿ ಪರದಾಟ: ಖಾಲಿ ಬಿಂದಿಗೆ ಹಿಡಿದು ಪ್ರತಿಭಟನೆ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಸಮರ್ಪಕ ಕುಡಿಯುವ ನೀರು ಪೂರೈಸುವಂತೆ ಒತ್ತಾಯಿಸಿ ಮಾಟಳ್ಳಿ ಗ್ರಾಮ ಪಂಚಾಯಿತಿ…

3 hours ago

ಕೆನಡಾದಲ್ಲಿ ಕನ್ನಡಿಗನ ಬರ್ಬರ ಹತ್ಯೆ

ಟೊರೆಂಟೊ: ನೆಲಮಂಗಲ ತಾಲ್ಲೂಕಿನ ತ್ಯಾಮಗೊಂಡ್ಲು ಮೂಲದ ವ್ಯಕ್ತಿಯೊಬ್ಬನನ್ನು ಹತ್ಯೆಗೈದಿರುವ ಘಟನೆ ಕೆನಡಾದಲ್ಲಿ ನಡೆದಿದೆ. ಚಂದನ್‍ಕುಮಾರ್(37) ಹತ್ಯೆಯಾದ ವ್ಯಕ್ತಿ. ಕಳೆದ ಆರು…

3 hours ago