ಬೆಂಗಳೂರು : ಪ್ಯಾರೀಸ್ ನಿಂದ ಬೆಂಗಳೂರಿಗೆ ಬರುತ್ತಿದ್ದ ವಿಮಾನದಲ್ಲಿ ಮಾರ್ಗ ಮಧ್ಯೆ ವಿಮಾನದ ದ್ವಾರ ತೆರೆಯಲು ಪ್ರಯತ್ನಿಸಿದ ಆರೋಪದಡಿ ಓರ್ವ ಯುವಕನನ್ನು ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಠಾಣೆಯ ಪೊಲೀಸರು ಬಂಧಿಸಿದ್ದಾರೆ.
ಆಂಧ್ರಪ್ರದೇಶದ ರಾಜಮಂಡ್ರಿ ಮೂಲದ ವೆಂಕಟ್ ಮೋಹಿತ್(29) ಬಂಧಿತ. ಆರೋಪಿಯು ಪ್ಯಾರೀಸ್‌ನಿಂದ ಏರ್ ಫ್ರಾನ್ಸ್ ವಿಮಾನದಲ್ಲಿ ಬೆಂಗಳೂರಿಗೆ ಪ್ರಯಾಣಿಸುತ್ತಿದ್ದ. ವಿಮಾನ ಬೆಂಗಳೂರು ತಲುಪಲು ಇನ್ನು ನಾಲ್ಕು ತಾಸು ಇರುವಾಗ ಏಕಾಏಕಿ ವಿಮಾನದ ಹಿಂಬದಿಯ ಎಡಭಾಗದ ದ್ವಾರದ ತೆರೆಯಲು ಪ್ರಯತ್ನಿಸಿದ್ದಾನೆ.
ಈ ಸಂಬಂಧ ವಿಮಾನದ ಸಿಬ್ಭಂದಿ ನೀಡಿದ ವರದಿ ಮೇರೆಗೆ ಏರ್ ಫ್ರಾನ್ಸ್ ಇಂಡಿಯಾದ ಡ್ಯೂಟಿ ಮ್ಯಾನೇಜರ್ ಶೀಬಾ ಸ್ವಾಮೀನಾಥನ್ ಅವರು ವೆಂಕಟ್ ವಿರುದ್ಧ ದೂರು ನೀಡಿದ್ದರು. ಈ ದೂರಿನ ಮೇರೆಗೆ ಪ್ರಕರಣ ದಾಖಲಿಸಿದ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಠಾಣೆ ಪೊಲೀಸರು ಆರೋಪಿಯನ್ನು ಬಂಧಿಸಿದ್ದರು. ಬಳಿಕ ಜಾಮೀನಿನ ಮೇಲೆ ಆರೋಪಿಯನ್ನು ಬಿಡುಗಡೆ ಮಾಡಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಪಿಎಂ ಕುಸುಮ್ ಬಿ ಯೋಜನೆಯಡಿ ಸೋಲಾರ್ ಪಂಪ್ ಸೆಟ್‌ಗೆ ಶೇ.80 ಸಬ್ಸಿಡಿ ನೀಡಲಾಗುತ್ತಿದೆ. ಈ ಯೋಜನೆಯಲ್ಲಿ ನೀರಾವರಿಗೆ ಸಾಂಪ್ರದಾಯಿಕ ವಿದ್ಯುತ್…
ಶನಿವಾರ, ಭಾನುವಾರ, ಸೋಮವಾರವೂ ಬಲಿ; ಹುಲಿ ದಾಳಿ ಎಂದು ಬಿಸಲವಾಡಿ, ಸಾಗಡೆ ಗ್ರಾಮಗಳ ರೈತರ ಆರೋ ಚಾಮರಾಜನಗರ: ತಾಲ್ಲೂಕಿನ ಬಿಸಲವಾಡಿ…
ರಾಜ್ಯ ಸರ್ಕಾರದಿಂದ ಅನುದಾನ ವಿಳಂಬ; ಚಿಕಿತ್ಸೆಗಾಗಿ ಬೆಂಗಳೂರು, ಮೈಸೂರಿನ ಆಸ್ಪತ್ರೆಗೆ ಅಲೆಯುತ್ತಿರುವ ರೋಗಿಗಳು ಮಂಡ್ಯ: ಕ್ಯಾನ್ಸರ್ ರೋಗಿಗಳಿಗೆ ಗುಣಮಟ್ಟದ ಚಿಕಿತ್ಸೆ…
ಜೀಪ್ ವ್ಯವಸ್ಥೆ ಮಾಡುವಂತೆ ತಹಸಿಲ್ದಾರ್‌ಗೆ ಮನವಿ ಮಾಡಿದ ಬಿಇಒ ಹನೂರು: ಹನೂರು ಶೈಕ್ಷಣಿಕ ವಲಯದ ಪಚ್ಚೆದೊಡ್ಡಿ ಗ್ರಾಮದ ಶಾಲೆಗೆ ಕ್ಷೇತ್ರ…
ಮಂಜು ಕೋಟೆ ಪ್ರತಿನಿತ್ಯ ಅಧಿಕಾರಿಗಳ ಬಳಿ ಅಲೆದಾಡುತ್ತಿರುವ ನೌಕರರು; ಕುಟುಂಬ ನಿರ್ವಹಣೆಗೆ ಪರದಾಟ ಎಚ್.ಡಿ.ಕೋಟೆ: ಪಟ್ಟಣದ ಪುರಸಭೆಯ ಪೌರಕಾರ್ಮಿಕರು ಮತ್ತು…
ಪುಸ್ತಕ ಪ್ರಿಯರಿಗಾಗಿ ರಿಯಾಯಿತಿ ದರದಲ್ಲಿ ಪುಸ್ತಕ ಮಾರಾಟ ಮೈಸೂರು: ವಿಶ್ವಕೋಶ, ಶಬ್ಧಕೋಶ, ಇಂಗ್ಲಿಷ್-ಕನ್ನಡ ನಿಘಂಟು, ಕನ್ನಡ-ಇಂಗ್ಲಿಷ್ ನಿಘಂಟು, ಕನ್ನಡ ಗ್ರಂಥಮಾಲೆ,…