BREAKING NEWS

ವಿಮಾನದ ಬಾಗಿಲು ತೆಗೆಯಲು ಯತ್ನ : ಯುವಕನ ಬಂಧನ

ಬೆಂಗಳೂರು : ಪ್ಯಾರೀಸ್‌ ನಿಂದ ಬೆಂಗಳೂರಿಗೆ ಬರುತ್ತಿದ್ದ ವಿಮಾನದಲ್ಲಿ ಮಾರ್ಗ ಮಧ್ಯೆ ವಿಮಾನದ ದ್ವಾರ ತೆರೆಯಲು ಪ್ರಯತ್ನಿಸಿದ ಆರೋಪದಡಿ ಓರ್ವ ಯುವಕನನ್ನು ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಠಾಣೆಯ ಪೊಲೀಸರು ಬಂಧಿಸಿದ್ದಾರೆ.

ಆಂಧ್ರಪ್ರದೇಶದ ರಾಜಮಂಡ್ರಿ ಮೂಲದ ವೆಂಕಟ್‌ ಮೋಹಿತ್‌(29) ಬಂಧಿತ. ಆರೋಪಿಯು ಪ್ಯಾರೀಸ್‌ನಿಂದ ಏರ್‌ ಫ್ರಾನ್ಸ್‌ ವಿಮಾನದಲ್ಲಿ ಬೆಂಗಳೂರಿಗೆ ಪ್ರಯಾಣಿಸುತ್ತಿದ್ದ. ವಿಮಾನ ಬೆಂಗಳೂರು ತಲುಪಲು ಇನ್ನು ನಾಲ್ಕು ತಾಸು ಇರುವಾಗ ಏಕಾಏಕಿ ವಿಮಾನದ ಹಿಂಬದಿಯ ಎಡಭಾಗದ ದ್ವಾರದ ತೆರೆಯಲು ಪ್ರಯತ್ನಿಸಿದ್ದಾನೆ.

ಈ ಸಂಬಂಧ ವಿಮಾನದ ಸಿಬ್ಭಂದಿ ನೀಡಿದ ವರದಿ ಮೇರೆಗೆ ಏರ್‌ ಫ್ರಾನ್ಸ್‌ ಇಂಡಿಯಾದ ಡ್ಯೂಟಿ ಮ್ಯಾನೇಜರ್‌ ಶೀಬಾ ಸ್ವಾಮೀನಾಥನ್‌ ಅವರು ವೆಂಕಟ್‌ ವಿರುದ್ಧ ದೂರು ನೀಡಿದ್ದರು. ಈ ದೂರಿನ ಮೇರೆಗೆ ಪ್ರಕರಣ ದಾಖಲಿಸಿದ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಠಾಣೆ ಪೊಲೀಸರು ಆರೋಪಿಯನ್ನು ಬಂಧಿಸಿದ್ದರು. ಬಳಿಕ ಜಾಮೀನಿನ ಮೇಲೆ ಆರೋಪಿಯನ್ನು ಬಿಡುಗಡೆ ಮಾಡಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

lokesh

Recent Posts

ಇ-ಕೆವೈಸಿಗೆ ಗಡುವು ವಿಸ್ತರಣೆ

ಬೆಂಗಳೂರು : ತಾಂತ್ರಿಕ ದೋಷ ಹಾಗೂ ಸರ್ವರ್ ಮಂದಗತಿಯ ಕಾರಣದಿಂದ ನ್ಯಾಯಬೆಲೆ ಅಂಗಡಿಗಳಲ್ಲಿ ಇ-ಕೆವೈಸಿ ಮಾಡಿಸಲು ಬಿಪಿಎಲ್, ಎಪಿಎಲ್ ಪಡಿತರದಾರರಿಗೆ…

36 mins ago

ಯುಪಿಐ ಶುಲ್ಕ | ನಮ್ಮ ಕಿಸೆಯೊಳಗೆ ಸರ್ಕಾರದ ಕೈ

ಬಾಲಸುಬ್ರಹ್ಮಣ್ಯ ಕಂಜರ್ಪಣೆ ನಮ್ಮೂರಿನಲ್ಲಿ ಒಬ್ರು ಬಹಳ ಒಳ್ಳೆಯ ಮನುಷ್ಯ ಇದ್ರು. ಅವರು ಕುಡೀತಿರ್ಲಿಲ್ಲ. ಅವರಿಗೆ ಒಂದಿಬ್ಬರು ಗೆಳೆಯರು ಸೇರಿ ಕುಡಿಯೋದನ್ನು…

1 hour ago

ಓದಗರ ಪತ್ರ | ಮರಳಿಗೆ ಮೊಳೆ ಹೊಡೆಯದೇ ದೀಪಾಲಂಕಾರಕ್ಕೆ ಪರ್ಯಾಯ ವ್ಯವಸ್ಥೆ ಮಾಡಲಿ

ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಮುಂಬರುವ ಕೆಲವೇ ದಿನಗಳಲ್ಲಿ ನಡೆಯುವ ನಾಡ ಹಬ್ಬ ದಸರಾ ಮಹೋತ್ಸವದ ಅಂಗವಾಗಿ ಪ್ರವಾಸಿಗರನ್ನು ಆಕರ್ಷಿಸುವ ಸಲುವಾಗಿ,…

1 hour ago

ಓದುಗರ ಪತ್ರ | ಮುಷ್ಕರದ ಉದ್ದೇಶವೇ ಭಂಗಗೊಳಿಸುವುದಲ್ಲವೇ ?

ಕಾರ್ಮಿಕರು ಅಥವಾ ವಿಶಾಲಾರ್ಥದಲ್ಲಿ ದುಡಿಯುವ ವರ್ಗಗಳು ತಮ್ಮ ಜೀವನಾವಶ್ಯ-ವೃತ್ತಿಕೇಂದ್ರಿತ ಅವಶ್ಯಕತೆಗಳನ್ನು ಈಡೇರಿಸಿಕೊಳ್ಳಲು ಉದ್ಯೋಗದಾತರ ವಿರುದ್ಧ ಮುಷ್ಕರ ಹೂಡುವುದು ಚಾರಿತ್ರಿಕವಾಗಿ ನಡೆದುಬಂದಿರುವಂತಹ…

1 hour ago

ಬಾ.ನಾ.ಸುಬ್ರಹ್ಮಣ್ಯ ಅವರ ವೈಡ್‌ ಆಂಗಲ್‌ | ಅನಂತ್‌ಗೆ ಫಾಲ್ಕೆ : ಕನ್ನಡ ಚಿತ್ರರಂಗಕ್ಕೆ ಅತ್ಯುನ್ನತ ಗೌರವ

ಅತ್ಯುತ್ತಮ ನಟನೆಗೆ ರಾಷ್ಟ್ರಪ್ರಶಸ್ತಿ ಪಡೆಯುವ ಚಿತ್ರಗಳಿದ್ದರೂ, ಆಯಾ ವರ್ಷದಲ್ಲಿನ ಸ್ಪರ್ಧೆಯ ಕಾರಣವೋ ಇನ್ನೇನೋ, ಅನಂತನಾಗ್ ಅವರಿಗೆ ಈ ತನಕ ಆ…

1 hour ago

ಮಹಾಪಂಚ್ ಕಾರ್ಟೂನ್‌

ಮಹಾಪಂಚ್ ಕಾರ್ಟೂನ್‌ | ಸೆಪ್ಟಂಬರ್‌ 18 ಶುಕ್ರವಾರ

2 hours ago