Mysore
17
broken clouds

Social Media

ಬುಧವಾರ, 10 ಡಿಸೆಂಬರ್ 2025
Light
Dark

ಅತ್ತಿಬೆಲೆ ಪಟಾಕಿ ದುರಂತ : ನಾಲ್ವರು ಅಧಿಕಾರಿಗಳು ಅಮಾನತು

ಬೆಂಗಳೂರು : ಅತ್ತಿಬೆಲೆ ಪಟಾಕಿ ದುರಂತಕ್ಕೆ ಸಬಂಧಿಸಿದಂತೆ ನಾಲ್ವರು ಅಧಿಕಾರಿಗಳನ್ನು ಅಮಾನತು ಮಾಡಲಾಗಿದೆ.

ಆನೇಕಲ್ ತಾಲೂಕಿನ ಹಿಂದಿನ ತಹಶೀಲ್ದಾರ್ ಶಶಿಧರ್ ಮಾಡ್ಯಾಳ್, ಉಪ ತಹಶೀಲ್ದಾರ್ ಶ್ರೀಧರ್, ರಾಜಸ್ವ ನಿರೀಕ್ಷಕ ಅತ್ತಿಬೆಲೆ, ಗ್ರಾಮ ಆಡಳಿತಾಧಿಕಾರಿಯನ್ನು ಸೇವೆಯಿಂದ ಅಮಾನತುಗೊಳಿಸಿ ಕಂದಾಯ ಇಲಾಖೆ ಆದೇಶ ಹೊರಡಿಸಿದೆ.

ಅತ್ತಿಬೆಲೆ ಅಗ್ನಿ ಅವಘಡಕ್ಕೆ ಅಧಿಕಾರಿಗಳೇ ಹೊಣೆ ಎಂದು ವರದಿ ಬಂದಿತ್ತು. ಪಟಾಕಿ ಅಂಗಡಿಗೆ 1ಸಾವಿರ ಕೆ.ಜಿ ಮಾತ್ರ ಸ್ಟಾಕ್ ಇಡಲು ಅವಕಾಶ ನೀಡಲಾಗಿತ್ತು. ಪರವಾನಿಗೆ ನೀಡುವಾಗ ಅಧಿಕಾರಿಗಳು ಸ್ಥಳ ಪರಿಶೀಲನೆ ನಡೆಸದೆ ಪರವಾನಗಿ ನೀಡಿರುವುದೇ ಈ ಅವಘಡಕ್ಕೆ ಕಾರಣವೆಂದು 4 ಜನ ಅಧಿಕಾರಿಗಳನ್ನು ಸೇವೆಯಿಂದ ಅಮಾನತು ಮಾಡಿ ಆದೇಶಿಸಲಾಗಿದೆ.

ಮಂಗಳವಾರ ಅಮಾನತಿನ ಬಗ್ಗೆ ಡಿಸಿ, ಎಸ್‍ಪಿಗೆ ಸಿಎಂ ಸೂಚನೆ ನೀಡಿದ್ದರು. ಇದೀಗ ಸಿಎಂ ಸೂಚನೆ ಬೆನ್ನಲ್ಲೆ ಅಧಿಕಾರಿಗಳ ಅಮಾನತು ಮಾಡಲಾಗಿದೆ.

Tags:

ಸುದ್ದಿ ಬಗ್ಗೆ ನಿಮ್ಮ ಅಭಿಪ್ರಾಯ ತಿಳಿಸಿ

error: Content is protected !!