ಬೆಂಗಳೂರು : ಕಳೆದ ದಿನ ಆನೇಕಲ್ ತಾಲೂಕಿನ ಅತ್ತಿಬೆಲೆಯಲ್ಲಿ 14 ಮಂದಿಯ ಸಜೀವ ದಹನಕ್ಕೆ ಕಾರಣವಾದ ಪಟಾಕಿ ದುರಂತ ಸ್ಥಳಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ರವಿವಾರ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಈ ವೇಳೆ ಸಚಿವರಾದ ರಾಮಲಿಂಗರೆಡ್ಡಿ, ಬೈರತಿ ಸುರೇಶ್, ಮಾಜಿ ಸಚಿವ ಎಸ್.ಟಿ.ಸೋಮಶೇಖರ್, ಶಾಸಕ ಶಿವಣ್ಣ ಮತ್ತಿತರರು ಜತೆಗಿದ್ದರು.
ಘಟನೆಯ ಪ್ರತಿ ಸ್ಥಳಕ್ಕೂ ಖುದ್ದಾಗಿ ಭೇಟಿ ನೀಡಿದ ಮುಖ್ಯಮಂತ್ರಿಗಳು, ನಷ್ಟದ ಅಂದಾಜುಗಳು ಹಾಗೂ ಇತರ ವಿವರಗಳನ್ನು ಪರಿಶೀಲನೆ ನಡೆಸಿದರು.
ಇದೇ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ಪರವಾನಗಿ ಪಡೆದು ಪಟಾಕಿ ಮಾರಾಟ ಮಾಡುವುದು ದೀಪಾವಳಿ ಸಂದರ್ಭದಲ್ಲಿ ಕಂಡುಬರುತ್ತದೆ. ಶನಿವಾರ 3 ಗಂಟೆ ಸುಮಾರಿನಲ್ಲಿ ಈ ಗೋದಾಮಿನಲ್ಲಿ ಅಗ್ನಿ ದುರಂತ ನಡೆದಿದೆ. ಇದಕ್ಕೆ ಪಟಾಕಿ ದಾಸ್ತಾನು ಮಳಿಗೆಯಲ್ಲಿ ಸರಿಯಾದ ಸುರಕ್ಷತಾ ಕ್ರಮ ಮಾಡದಿರುವುದು ಕಾರಣ ಎಂದರು.
ಪಟಾಕಿ ಮಾರಾಟ ಹಾಗೂ ಸಂಗ್ರಹಕ್ಕೆ ಎರಡು ಪರವಾನಗಿಗಳನ್ನು ಪಡೆದಿದ್ದಾರೆ. 2023 ರ ಸೆಪ್ಟೆಂಬರ್ 13 ರಂದು ಒಂದು ಪರವಾನಗಿ ನವೀಕರಣಗೊಂಡಿದ್ದು, ಅದು 2028 ರ ಅಕ್ಟೋಬರ್ 31 ರವರಗೆ ಚಾಲ್ತಿಯಲ್ಲಿರುತ್ತದೆ. ಇನ್ನೊಂದು ಪರವಾನಗಿಯನ್ನು 2021ರ ಜನವರಿ 18 ರಂದು ಪಡೆಯಲಾಗಿದ್ದು, 2026 ರ ಜನವರಿ 28 ರವರೆಗೂ ಚಾಲ್ತಿಯಲ್ಲಿರಲಿದೆ.
ಜಯಮ್ಮ ಅವರಿಗೆ ಸೇರಿದ ಜಾಗವನ್ನು ಬಾಡಿಗೆ ಪಡೆದು ಪಟಾಕಿ ವ್ಯಾಪಾರ ಮಾಡಲಾಗುತ್ತಿತ್ತು. ಮೃತ ಪಟ್ಟವರು ಕೃಷ್ಣಗಿರಿ, ಧರ್ಮಪುರಿ ಜಿಲ್ಲೆಗೆ ಸೇರಿದವರಾಗಿದ್ದು, ಅವರಲ್ಲಿ ಬಹುತೇಕರು ವಿದ್ಯಾರ್ಥಿಗಳಾಗಿದ್ದಾರೆ. ರಜಾ ಅವಧಿಯಲ್ಲಿ ವಿದ್ಯಾರ್ಥಿಗಳು ಸಂಪಾದನೆಗಾಗಿ ಕೆಲಸ ಮಾಡುತ್ತಿದ್ದರು. ಮ್ಯಾನೇಜರ್ ಮಾತ್ರ ಖಾಯಂ ನೌಕರ. ಉಳಿದೆಲ್ಲರೂ ದಿನಗೂಲಿಗಾಗಿ ಕೆಲಸ ಮಾಡುತ್ತಿದ್ದರು ಎಂದು ಹೇಳಿದ್ದಾರೆ.
ಪೊಲೀಸರು ಮತ್ತು ಅಗ್ನಿಶಾಮಕ ದಳದಿಂದ ನಿರಪೇಕ್ಷಣಾ ಪತ್ರ ಸಲ್ಲಿಸಿದ್ದರಿಂದ ಪರವಾನಗಿಯನ್ನು ನವೀಕರಣ ಮಾಡಿಕೊಟ್ಟಿರುವುದಾಗಿ ಜಿಲ್ಲಾಧಿಕಾರಿ ತಿಳಿಸಿದ್ದಾರೆ.
ನಿರಪೇಕ್ಷಣಾ ಪತ್ರ ನೀಡಿದವರು ಸ್ಥಳಕ್ಕೆ ಭೇಟಿ ನೀಡಿ ಸುರಕ್ಷತಾ ಕ್ರಮಗಳನ್ನು ಪರಿಶೀಲಿಸಬೇಕಿತ್ತು. ಇದು ಆಗಿಲ್ಲ. ಜಿಲ್ಲಾಕಾರಿಗಳು ಕೂಡ ಸ್ಥಳಕ್ಕೆ ಭೇಟಿ ನೀಡಿಲ್ಲ. ಹೀಗಾಗಿ ಘಟನೆಯನ್ನು ಸಿಐಡಿ ತನಿಖೆಗೆ ಒಪ್ಪಿಸಲಾಗುತ್ತಿದೆ ಎಂದು ಹೇಳಿದರು.
ತನಿಖೆಯ ಬಳಿಕ ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಜರುಗಿಸಲಾಗುವುದು. ಘಟನೆಯಲ್ಲಿ 14 ಮಂದಿ ಮೃತಪಟ್ಟಿರುವುದರಿಂದ ಸರ್ಕಾರ ಇದನ್ನು ಗಂಭೀರವಾಗಿ ಪರಿಗಣಿಸಿದೆ ಎಂದು ಹೇಳಿದರು.
ಮೃತಪಟ್ಟವರಿಗೆ 5 ಲಕ್ಷ ರೂ. ಪರಿಹಾರ ಮತ್ತು ಗಾಯಗೊಂಡ 4 ಜನರಿಗೆ ಉಚಿತ ಚಿಕಿತ್ಸೆ ಕೊಡಿಸಲಾಗುವುದು ಎಂದರು.
ಎಚ್.ಡಿ.ಕೋಟೆ : ಪ್ರಭಾವಿಗಳು ಮತ್ತು ಅಧಿಕಾರಿಗಳು ನಕಲಿ ದಾಖಲೆ ಸೃಷ್ಟಿಸಿ, ಮುಗ್ಧ ಆದಿವಾಸಿ ಜನರ ೮ ಎಕರೆ ಜಮೀನು ಕಬಳಿಸಲು…
ಮೈಸೂರು : ಸಿಎಆರ್, ಡಿಎಆರ್ ಪೇದೆಗಳ ನೇಮಕಾತಿಗಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಭಾನುವಾರ ನಡೆಸಿದ ಸ್ಪರ್ಧಾತ್ಮಕ ಪರೀಕ್ಷೆಯು ಸುಗಮವಾಗಿ ನಡೆಯಿತು.…
ದೆಹಲಿ : ನೈಋತ್ಯ ದೆಹಲಿಯ ಸತ್ಯ ನಿಕೇತನದಲ್ಲಿ ಇಂದು ಮಧ್ಯಾಹ್ನ ಆರು ಅಂತಸ್ತಿನ ಕಟ್ಟಡ ಕುಸಿದು ಹಲವರು ಅವಶೇಷಗಳಡಿ ಸಿಲುಕಿರುವ…
ಬೆಂಗಳೂರು : ತಮಗೆ ಅಶ್ಲೀಲ ಸಂದೇಶ ಕಳಿಸಿದವರ ವಿರುದ್ಧ ನಟಿ ರಮ್ಯಾ ಅವರು ಕಾನೂನು ಸಮರ ಸಾರಿದ್ದು, ರಾಜಿಯಾಗುವ ಪ್ರಶ್ನೆಯೇ…
ಸಿದ್ದಾಪುರ: ಪಟ್ಟಣದೊಳಗೆ ಭಾನುವಾರ ಬೆಳಗಿನ ಜಾವ ಐದು ಕಾಡಾನೆಗಳು ಸಂಚರಿಸಿರುವ ಘಟನೆ ಸ್ಥಳೀಯರಲ್ಲಿ ಆತಂಕ ಮೂಡಿಸಿದೆ. ಸಿದ್ದಾಪುರದಿಂದ ಮೈಸೂರು ಕಡೆಗೆ…
ಸೋಮವಾರಪೇಟೆ: ಪಟ್ಟಣದ ಎಂ.ಜಿ. ರಸ್ತೆಯಲ್ಲಿರುವ ಎಸ್‌ಬಿಐ ಬ್ಯಾಂಕ್‌ಗೆ ಹೊಂದಿಕೊಂಡಿರುವ ಎಟಿಎಂ ಅನ್ನು ದರೋಡೆ ಮಾಡಲು ಖದೀಮರ ತಂಡವೊಂದು ಯತ್ನಿಸಿರುವ ಘಟನೆ…