ಬೆಂಗಳೂರು : ಅಕ್ರಮ ಆಸ್ತಿ ಗಳಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ತಮಿಳುನಾಡು ಮಾಜಿ ಮುಖ್ಯಮಂತ್ರಿ ದಿವಂಗತ ಜೆ.ಜಯಲಲಿತಾ ಅವರಿಂದ ಜಪ್ತಿ ಮಾಡಲಾಗಿದ್ದ ಕೋಟ್ಯಂತರ ರೂಪಾಯಿ ಬೆಲೆಬಾಳುವ ವಸ್ತುಗಳ ವಿಲೇವಾರಿ ಕಾನೂನು ಪ್ರಕ್ರಿಯೆ ಕೈಗೊಳ್ಳಲು ರಾಜ್ಯ ಪಬ್ಲಿಕ್ ಪ್ರಾಸಿಕ್ಯೂಟರ್-1 ಕಿರಣ್ ಎಸ್. ಜವಳಿ ಅವರನ್ನು ಪ್ರಕರಣದ ‘ವಿಶೇಷ ಪ್ರಾಸಿಕ್ಯೂಟರ್’ ಆಗಿ ನೇಮಕ ಮಾಡಲಾಗಿದೆ.
ಜಯಲಲಿತಾ ವಿರುದ್ಧದ ಪ್ರಕರಣವನ್ನು ವಿಚಾರಣೆ ನಡೆಸಿದ್ದ ನಗರದ ವಿಶೇಷ ನ್ಯಾಯಾಲಯ (ಬೆಂಗಳೂರಿನ ಸಿಟಿ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ) ಬರೆದ ಪತ್ರವನ್ನು ಆಧರಿಸಿ ರಾಜ್ಯ ಕಾನೂನು ಇಲಾಖೆ ಮಾರ್ಚ್ 27ರಂದು ಆದೇಶ ಹೊರಡಿಸಿದೆ.
ಅಕ್ರಮ ಆಸ್ತಿ ಗಳಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಗರದ ವಿಶೇಷ ನ್ಯಾಯಾಲಯವು ಜಯಲಲಿತಾಗೆ 4 ವರ್ಷ ಜೈಲು ಮತ್ತು ₹ 100 ಕೋಟಿ ದಂಡ ವಿಧಿಸಿ 2014ರ ಸೆಪ್ಟೆಂಬರ್ 27ರಂದು ಆದೇಶಿಸಿತ್ತು. ‘ಜಪ್ತಿ ಮಾಡಲಾಗಿದ್ದ ಬೆಲೆಬಾಳುವ ವಸ್ತುಗಳನ್ನು ಆರ್‌ಬಿಐ, ಎಸ್‌ಬಿಐಗೆ ಅಥವಾ ಸಾರ್ವಜನಿಕ ಹರಾಜು ಮೂಲಕ ಮಾರಾಟ ಮಾಡಬೇಕು. ಅದರಿಂದ ಬಂದ ಹಣವನ್ನು ದಂಡಮೊತ್ತಕ್ಕೆ ಹೊಂದಾಣಿಕೆ ಮಾಡಬೇಕು’ ಎಂದು ನಿರ್ದೇಶಿಸಲಾಗಿತ್ತು.
7 ಕೆ.ಜಿ ಚಿನ್ನ, 740 ಚಪ್ಪಲಿ : 7.04 ಕೆ.ಜಿ ತೂಕದ 468 ಬಗೆಯ ಚಿನ್ನ ಹಾಗೂ ವಜ್ರಖಚಿತ ಆಭರಣಗಳು, 700 ಕೆ.ಜಿ. ತೂಕದ ಬೆಳ್ಳಿ ಆಭರಣಗಳು, 740 ದುಬಾರಿ ಚಪ್ಪಲಿಗಳು, 11,344 ರೇಷ್ಮೆ ಸೀರೆಗಳು, 250 ಶಾಲು, 12 ರೆಫ್ರಿಜರೇಟರ್, 10 ಟಿವಿ ಸೆಟ್, 8 ವಿಸಿಆರ್, 1 ವಿಡಿಯೊ ಕ್ಯಾಮರಾ, 4 ಸಿಡಿ ಪ್ಲೇಯರ್, 2 ಆಡಿಯೊ ಡೆಕ್, 24 ಟೂ-ಇನ್ ಒನ್ ಟೇಪ್ ರೆಕಾರ್ಡರ್, 1040 ವಿಡಿಯೊ ಕ್ಯಾಸೆಟ್, 3 ಐರನ್ ಲಾಕರ್,
₹ 1,39,202 ನಗದು ಸೇರಿದಂತೆ ಹಲವು ವಸ್ತುಗಳನ್ನು ಜಯಲಲಿತಾ ಅವರಿಂದ ಜಪ್ತಿ ಮಾಡಲಾಗಿತ್ತು. ಈಗ ಇವುಗಳನ್ನು ವಿಲೇವಾರಿ ಮಾಡಬೇಕಿದೆ.
ಮಂಡ್ಯ : ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಸುತ್ತೂರಿನ ಆದಿ ಜಗದ್ಗುರು ಶ್ರೀ ಶಿವರಾತ್ರಿ ಶಿವ ಯೋಗಿಗಳರವರ 1066ನೇ ಜಯಂತಿ…
ಸಿದ್ದಾಪುರ : ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದಡಿ ಗ್ರಾ.ಪಂ. ಮಾಜಿ ಅಧ್ಯಕ್ಷನ ವಿರುದ್ಧ ಸಿದ್ದಾಪುರ ಪೊಲೀಸ್ ಠಾಣೆಯಲ್ಲಿ…
ಬೆಂಗಳೂರು : ಪ್ರಧಾನಿ ನರೇಂದ್ರಮೋದಿ ಅವರ ನೇತೃತ್ವದ ಕೇಂದ್ರ ಸಚಿವ ಸಂಪುಟವು ೨೦೨೬ರ ಹಂಗಾಮಿನ ಕೊಬ್ಬರಿಯ ಕನಿಷ್ಠ ಬೆಂಬಲ ಬೆಲೆಯನ್ನು…
ಹಲವು ಜಿಲ್ಲೆಗಳಲ್ಲಿ ಗರಿಷ್ಠ ತಾಪಮಾನ ೩೦ ಡಿ.ಸೆ. ಬೆಂಗಳೂರು : ಈಗಾಗಲೇ ರಾಜ್ಯದಲ್ಲಿ ಹೆಚ್ಚಾಗಿರುವ ಮಾಗಿ ಚಳಿಯ ವಾತಾವರಣಕ್ಕೆ ಜನರು…
ಗುಂಡ್ಲುಪೇಟೆ : ತಾಲ್ಲೂಕಿನಲ್ಲಿ ಹುಲಿ ದಾಳಿ ಪ್ರಕರಣಗಳು ಮುಂದುವರಿದಿದ್ದು ಹಸುವಿನ ಮೇಲೆ ದಾಳಿ ಮಾಡಿದ ವ್ಯಾಘ್ರ ರಕ್ತ ಹೀರಿ ಕೊಂದಿರುವ…
ಮೈಸೂರು : NFHS-5 ವರದಿಯ ಪ್ರಕಾರ ಮೈಸೂರು ಜಿಲ್ಲೆಯ SAM ಮಕ್ಕಳ ಪ್ರಮಾಣ 7.2% ಇದ್ದು ಪ್ರಸ್ತುತ 0.21% ಗೆ…