BREAKING NEWS

ಜಯಲಲಿತಾ ಅವರಿಂದ ಜಪ್ತಿ ಮಾಡಿದ್ದ ವಸ್ತುಗಳ ಹರಾಜು: ಪ್ರಾಸಿಕ್ಯೂಟರ್ ನೇಮಕ

ಬೆಂಗಳೂರು : ಅಕ್ರಮ ಆಸ್ತಿ ಗಳಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ತಮಿಳುನಾಡು ಮಾಜಿ ಮುಖ್ಯಮಂತ್ರಿ ದಿವಂಗತ ಜೆ.ಜಯಲಲಿತಾ ಅವರಿಂದ ಜಪ್ತಿ ಮಾಡಲಾಗಿದ್ದ ಕೋಟ್ಯಂತರ ರೂಪಾಯಿ ಬೆಲೆಬಾಳುವ ವಸ್ತುಗಳ ವಿಲೇವಾರಿ ಕಾನೂನು ಪ್ರಕ್ರಿಯೆ ಕೈಗೊಳ್ಳಲು ರಾಜ್ಯ ಪಬ್ಲಿಕ್ ಪ್ರಾಸಿಕ್ಯೂಟರ್-1 ಕಿರಣ್ ಎಸ್. ಜವಳಿ ಅವರನ್ನು ಪ್ರಕರಣದ ‘ವಿಶೇಷ ಪ್ರಾಸಿಕ್ಯೂಟರ್’ ಆಗಿ ನೇಮಕ ಮಾಡಲಾಗಿದೆ.

ಜಯಲಲಿತಾ ವಿರುದ್ಧದ ಪ್ರಕರಣವನ್ನು ವಿಚಾರಣೆ ನಡೆಸಿದ್ದ ನಗರದ ವಿಶೇಷ ನ್ಯಾಯಾಲಯ (ಬೆಂಗಳೂರಿನ ಸಿಟಿ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ) ಬರೆದ ಪತ್ರವನ್ನು ಆಧರಿಸಿ ರಾಜ್ಯ ಕಾನೂನು ಇಲಾಖೆ ಮಾರ್ಚ್ 27ರಂದು ಆದೇಶ ಹೊರಡಿಸಿದೆ.

ಅಕ್ರಮ ಆಸ್ತಿ ಗಳಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಗರದ ವಿಶೇಷ ನ್ಯಾಯಾಲಯವು ಜಯಲಲಿತಾಗೆ 4 ವರ್ಷ ಜೈಲು ಮತ್ತು ₹ 100 ಕೋಟಿ ದಂಡ ವಿಧಿಸಿ 2014ರ ಸೆಪ್ಟೆಂಬರ್ 27ರಂದು ಆದೇಶಿಸಿತ್ತು. ‘ಜಪ್ತಿ ಮಾಡಲಾಗಿದ್ದ ಬೆಲೆಬಾಳುವ ವಸ್ತುಗಳನ್ನು ಆರ್‌ಬಿಐ, ಎಸ್‌ಬಿಐಗೆ ಅಥವಾ ಸಾರ್ವಜನಿಕ ಹರಾಜು ಮೂಲಕ ಮಾರಾಟ ಮಾಡಬೇಕು. ಅದರಿಂದ ಬಂದ ಹಣವನ್ನು ದಂಡಮೊತ್ತಕ್ಕೆ ಹೊಂದಾಣಿಕೆ ಮಾಡಬೇಕು’ ಎಂದು ನಿರ್ದೇಶಿಸಲಾಗಿತ್ತು.

7 ಕೆ.ಜಿ ಚಿನ್ನ, 740 ಚಪ್ಪಲಿ : 7.04 ಕೆ.ಜಿ ತೂಕದ 468 ಬಗೆಯ ಚಿನ್ನ ಹಾಗೂ ವಜ್ರಖಚಿತ ಆಭರಣಗಳು, 700 ಕೆ.ಜಿ. ತೂಕದ ಬೆಳ್ಳಿ ಆಭರಣಗಳು, 740 ದುಬಾರಿ ಚಪ್ಪಲಿಗಳು, 11,344 ರೇಷ್ಮೆ ಸೀರೆಗಳು, 250 ಶಾಲು, 12 ರೆಫ್ರಿಜರೇಟರ್, 10 ಟಿವಿ ಸೆಟ್, 8 ವಿಸಿಆರ್, 1 ವಿಡಿಯೊ ಕ್ಯಾಮರಾ, 4 ಸಿಡಿ ಪ್ಲೇಯರ್, 2 ಆಡಿಯೊ ಡೆಕ್, 24 ಟೂ-ಇನ್ ಒನ್ ಟೇಪ್‌ ರೆಕಾರ್ಡರ್, 1040 ವಿಡಿಯೊ ಕ್ಯಾಸೆಟ್, 3 ಐರನ್ ಲಾಕರ್,

₹ 1,39,202 ನಗದು ಸೇರಿದಂತೆ ಹಲವು ವಸ್ತುಗಳನ್ನು ಜಯಲಲಿತಾ ಅವರಿಂದ ಜಪ್ತಿ ಮಾಡಲಾಗಿತ್ತು. ಈಗ ಇವುಗಳನ್ನು ವಿಲೇವಾರಿ ಮಾಡಬೇಕಿದೆ.

 

 

 

lokesh

Recent Posts

ಓದುಗರ ಪತ್ರ: ಕೊನೆಗೊಳ್ಳಲಿ ಸಂಘರ್ಷ!

ಕೊನೆಗೊಳ್ಳಲಿ ಸಂಘರ್ಷ! ಯುದ್ಧವನು ಕೊನೆಗಾಣಿಸಲು ರಾಜತಾಂತ್ರಿಕ ಮಾತುಕತೆಯೇ ಉತ್ತಮವೆಂಬ ಭಾರತದ ನಿಲುವಿಗೆ ಬ್ರಿಕ್ಸ್ ನಾಯಕರು ಒಕ್ಕೊರಲಿನಿಂದ ಒಪ್ಪಿರುವುದು ಸ್ವಾಗತಾರ್ಹ! ಇದಲ್ಲವೇ…

5 hours ago

ಓದುಗರ ಪತ್ರ: ಚುರುಕಾಗಲಿ 6ರ ಪ್ಲಾಟ್ ಫಾರಂ ಟಿಕೆಟ್ ಕೌಂಟರ್

ಮೈಸೂರಿನ ನೈಋತ್ಯ ರೈಲ್ವೆಗೆ ಸೇರಿರುವ ಅಶೋಕ ಪುರಂ ರೈಲು ನಿಲ್ದಾಣದಲ್ಲಿ ಪ್ಲಾಟ್ ಫಾರಂ ೬ರ ಕಡೆ ರೈಲು ಪ್ರಯಾಣಿಕರಿಗೆ ಅನುಕೂಲವಾಗಲೆಂದು…

5 hours ago

ಓದುಗರ ಪತ್ರ: ಲೆಕ್ಕ ಹಾಕಿಕೊಂಡು ಮುಷ್ಕರ ನಡೆಸುವ ಬ್ಯಾಂಕ್ ಯೂನಿಯನ್‌ಗಳ ವಿರುದ್ಧ ಕ್ರಮ ಕೈಗೊಳ್ಳಲಿ

ಸರ್ಕಾರಿ ಸ್ವಾಮ್ಯದ ಬ್ಯಾಂಕ್ ನೌಕರರು ಕಳೆದ ಶುಕ್ರವಾರ ತಮ್ಮ ಬಹುದಿನಗಳ ಬೇಡಿಕೆಯಾದ ವಾರಕ್ಕೆ ಐದು ದಿನಗಳ ಕಾಲ ಮಾತ್ರ ಕೆಲಸ…

5 hours ago

ಬಾಗಿಲುಗಳನ್ನು ತೆರೆದಿಡಿ, ಸಂವಹನವನ್ನು ಪಾರದರ್ಶಕವಾಗಿಡಿ

ಎಸ್.ಎಲ್.ಚನ್ನಬಸವಣ್ಣ , ಉಪನಿರ್ದೇಶಕರು, ಕರ್ನಾಟಕ ಪೊಲೀಸ್ ಅಕಾಡೆಮಿ, ಮೈಸೂರು ಸಾರ್ವಜನಿಕ ಸಂಸ್ಥೆಗಳಿಗೆ ಅತ್ಯಂತ ಮುಖ್ಯವಾದ ಪಾಠ  ಯಾವುದೇ ನಾಗರಿಕನು ತನ್ನ…

5 hours ago

ಗಾಲಿಕುರ್ಚಿಯಲ್ಲಿ ಕುಳಿತೇ ಯಶಸ್ವೀ ಲೇಖಕಿಯಾದ ಹಿಮಾಂಶಿಕಾ

ಪಂಜುಗಂಗೊಳ್ಳಿ ಅವರ ವಾರದ ಅಂಕಣ  ದೈಹಿಕ ನ್ಯೂನತೆ ನಡುವೆ ಆರ್ಥಿಕ ಪ್ರಗತಿಯ ಮೆಟ್ಟಿಲೇರಿದ ಮಹಿಳೆ ಹರ‍್ಯಾಣದ ಅಂಬಾಲಾದ ಹಿಮಾಂಶಿಕಾ ಶರ್ಮಾರಿಗೆ…

5 hours ago

ಇ-ಕೆವೈಸಿಗೆ ಮುಗಿಬಿದ್ದ ಫಲಾನುಭವಿಗಳು

ಕೆ.ಬಿ.ರಮೇಶನಾಯಕ ರಾಜ್ಯ ಸರ್ಕಾರದ ಗಡುವಿನೊಳಗೆ ಪ್ರಕ್ರಿಯೆ ಮುಗಿಸಲು ಇಲಾಖೆ ಕಸರತ್ತು.  ಮೈಸೂರು: ನಕಲಿ ಫಲಾನುಭವಿಗಳನ್ನು ಕೈಬಿಟ್ಟು ಪಾರದರ್ಶಕತೆ ಕಾಯ್ದುಕೊಳ್ಳಲು ಹಾಗೂ…

5 hours ago