BREAKING NEWS

ಆಗಸ್ಟ್​ 23 ಇನ್ನು ರಾಷ್ಟ್ರೀಯ ಬಾಹ್ಯಾಕಾಶ ದಿನ: ಪ್ರಧಾನಿ ಮೋದಿ ಘೋಷಣೆ

ಬೆಂಗಳೂರು : ಚಂದ್ರಯಾನ-3 ಮಿಷನ್ ಯಶಸ್ವಿಯಾಗಿದ್ದು ಇಡೀ ಮನುಕುಲಕ್ಕೆ ಮಹತ್ವಪೂರ್ಣವಾದದ್ದು, ಆಗಸ್ಟ್ 23ರಂದು ಚಂದ್ರಯಾನ ಯಶಸ್ವಿಯಾದ ದಿನವನ್ನು ರಾಷ್ಟ್ರೀಯ ಬಾಹ್ಯಾಕಾಶ ದಿನ ಎಂದು ಪ್ರಧಾನಿ ನರೇಂದ್ರ ಮೋದಿ ಘೋಷಿಸಿದ್ದಾರೆ.

ಶಿವಶಕ್ತಿ ಪಾಯಿಂಟ್ : ಚಂದ್ರನ ಮೇಲೆ ವಿಕ್ರಮ್​ ಲ್ಯಾಂಡರ್ ಇಳಿದ ಸ್ಥಳವನ್ನು ‘ಶಿವಶಕ್ತಿ ಪಾಯಿಂಟ್’ ಎಂದು ಕರೆಯೋಣ. ಶಿವನಲ್ಲಿ ಮಾನವ ಶಕ್ತಿಯನ್ನು ರೂಪಿಸುವ ಶಕ್ತಿ ಇದೆ. ಚಂದ್ರನ ಮೇಲೂ ತಿರಂಗ ರಾರಾಜಿಸುತ್ತಿದೆ ಎಂದ ಮೋದಿ, ಚಂದ್ರಯಾನ-2 ಪತನ ಸ್ಥಳಕ್ಕೆ ತಿರಂಗ ಪಾಯಿಂಟ್​ ಎಂದು ಹೆಸರಿಟ್ಟರು.

ಈ ತಿರಂಗ ಪಾಯಿಂಟ್​​​ ಮುಂದಿನ ಸಾಧನೆಗಳಿಗೆ ಪ್ರೇರಣೆಯಾಯಿತು. ಚಂದ್ರಯಾನ-3 ಯಶಸ್ಸಿನಲ್ಲಿ ಇಸ್ರೋ ಸಾಧನೆ ದೊಡ್ಡದು. ಮೇಕ್​ ಇನ್​ ಇಂಡಿಯಾ ಈಗ ಚಂದ್ರನವರೆಗೂ ತಲುಪಿದೆ ಎಂದು ಖುಷಿಯಿಂದ ಮುಕ್ತಕಂಠದಿಂದ ಇಸ್ರೊ ವಿಜ್ಞಾನಿಗಳನ್ನು ಶ್ಲಾಘಿಸಿ ಬೆಂಗಳೂರಿನ ಇಸ್ರೊ ಕಚೇರಿಯಲ್ಲಿಂದು ಘೋಷಿಸಿದರು.

ರಾಷ್ಟ್ರೀಯ ಬಾಹ್ಯಾಕಾಶ ದಿನ: ಚಂದ್ರನ ಮೇಲೆ ಪ್ರಜ್ಞಾನ್​ ಪರಾಕ್ರಮ ಕಂಡು ಖುಷಿಯಾಗಿದೆ. ಇಡೀ ವಿಶ್ವವೇ ಭಾರತದ ವಿಜ್ಞಾನ, ತಂತ್ರಜ್ಞಾನವನ್ನು ಒಪ್ಪಿಕೊಂಡಿದೆ ಎಂದು ಇಸ್ರೋ ಕಮಾಂಡ್​ ಸೆಂಟರ್​ನಲ್ಲಿ ಪ್ರಧಾನಿ ಮೋದಿ ಹೇಳಿದರು. ಆಗಸ್ಟ್ 23 ರ ಆ ದಿನ ನನ್ನ ಕಣ್ಣ ಮುಂದೆ ಪ್ರತಿ ಸೆಕೆಂಡ್ ಮತ್ತೆ ಮತ್ತೆ ತಿರುಗುತ್ತಿದೆ, ನಿಮ್ಮ ಸಾಧನೆಯನ್ನು ಎಷ್ಟೇ ಕೊಂಡಾಡಿದರೂ ಅದು ಕಡಿಮೆಯೇ. ಚಂದ್ರನ ಮೇಲೆ ಪ್ರಜ್ಞಾನ್​ ಪರಾಕ್ರಮ ಕಂಡು ಖುಷಿಯಾಗಿದೆ. ಇಡೀ ವಿಶ್ವವೇ ಭಾರತದ ವಿಜ್ಞಾನ, ತಂತ್ರಜ್ಞಾನವನ್ನು ಒಪ್ಪಿಕೊಂಡಿದೆ ಎಂದು ಇಸ್ರೋ ಕಮಾಂಡ್​ ಸೆಂಟರ್​ನಲ್ಲಿ ಪ್ರಧಾನಿ ಮೋದಿ ಹೇಳಿದರು.

ವಿಶ್ವದ ದೊಡ್ಡ ದೊಡ್ಡ ಸಮಸ್ಯೆಗಳಿಗೆ ಭಾರತ ಪರಿಹಾರ ಕಂಡಿದೆ. ನಿಮ್ಮೆಲ್ಲರ ಈ ಸಾಧನೆ ಇತರರಿಗೆ ಸ್ಪೂರ್ತಿದಾಯಕವಾಗಿದೆ. ನೀವೆಲ್ಲರೂ ಸೇರಿ ಭಾರತದ ಕನಸನ್ನು ನನಸು ಮಾಡಿದ್ದೀರಿ. ನಾನು ವಿದೇಶದಲ್ಲಿದ್ದೆ, ಆದರೆ ನನ್ನ ಹೃದಯವು ಎಲ್ಲಾ ಸಮಯದಲ್ಲೂ ಸಂಪೂರ್ಣವಾಗಿ ನಿಮ್ಮೊಂದಿಗೆ ಇತ್ತು ಎಂದು ವಿಜ್ಞಾನಿಗಳನ್ನು ಉದ್ದೇಶಿಸಿ ಮೋದಿ ಹೇಳಿದರು.

ತಿರಂಗಾ: ಚಂದ್ರಯಾನ-2 ಪತನಗೊಂಡ ಸ್ಥಳಕ್ಕೆ ‘ತಿರಂಗಾ’ ಎಂದು ಹೆಸರಿಸೋಣ. ಭಾರತ ಚಂದ್ರಯಾನ ಹಾಗೂ ಮಂಗಳಯಾನದಲ್ಲಿ ಯಶಸ್ಸನ್ನು ಗಳಿಸಿ ಮಾನವಸಹಿತ ಗಗನಯಾನಕ್ಕೆ ಸಿದ್ಧತೆ ನಡೆಸುತ್ತಿದೆ. ಈ ಮೂಲಕ ಭಾರತೀಯ ನೆಲ, ಇಲ್ಲಿನ ಜನರ ಮನ ಹಾಗೂ ಚಂದ್ರನಲ್ಲೂ ತಿರಂಗಾ ಮನೆ ಮಾಡಿದೆ ಎಂದು ಅವರು ಹೇಳಿದರು.

ಈ ಯಶಸ್ಸು ಭಾರತದ ವೈಜ್ಞಾನಿಕ ಶಂಕನಾದವಾಗಿದೆ. ಚಂದ್ರಯಾನದಿಂದ ಮನುಕುಲ ಅಭಿವೃದ್ಧಿ ಸಾಧ್ಯವಿದೆ. ಹಿಮಾಲಯದಿಂದ ಕನ್ಯಾಕುಮಾರಿ ವರೆಗೂ ಜೋಡಿಸುವ ಸಾಮರ್ಥ್ಯ ಇದೆ. ಶಿವನಲ್ಲಿ ಮಾನವನ ಅಭಿವೃದ್ಧಿ ಇದೆ. ಚಂದ್ರಯಾನ-3 ರ ಯಶಸ್ಸಿನಿಂದಾಗಿ ಮೇಕ್ ಇನ್ ಇಂಡಿಯಾದ ಮೇಲೆ ಬಲವಾದ ನಂಬಿಕೆ ಮೂಡುತ್ತಿದೆ ಎಂದು ಮೋದಿ ಅಭಿಪ್ರಾಯಪಟ್ಟರು.

andolanait

Recent Posts

ಮರ ಕಡಿಯದೆಯೇ ಕಾಗದ ತಯಾರಿಸುವ ಪೇಪರ್‌ ಪವಾರ್‌

ಕೀರ್ತಿ ಇದನ್ನು ನೀವು ಊಹಿಸಲೂ ಸಾಧ್ಯವಿಲ್ಲ. ಚಹ ಮಾಡಿದ ನಂತರ ಉಳಿದ ಜೊಗಟು, ಈರುಳ್ಳಿ ಸಿಪ್ಪೆ, ಚಿಂದಿ ಬಟ್ಟೆ, ಹರಿದ…

19 mins ago

ಲಿಫ್ಟ್‌ನಲ್ಲಿ ಸಿಲುಕಿಕೊಂಡ ಕನ್ನಡದ ಲೇಖಕಿ

ಅಮೆರಿಕದ ಸಿಯಾಟಲ್‌ನಲ್ಲಿ ಮಗನಿಗೆ ಹೊಸ ಕೆಲಸ ಸಿಕ್ಕಿತ್ತು. ಮನೆ ಮಾಡಿದ. ಅಲ್ಲಿ ಮನೆ ಶಿಫ್ಟ್ ಮಾಡುವುದೆಂದರೆ ನಾವೇ ಸಕಲವೂ ಆಗಿರುವುದರಿಂದ…

32 mins ago

ಹಳೆಯ ಪುಸ್ತಕಗಳ ನಡುವೆ ನಗುವ ಆನಂದರಾಯರು

ಮುಂಚೆ ಕಾಲವೊಂದಿತ್ತು. ಸಮಯ ಕಳೆಯಲು ಎಲ್ಲರೂ ಪುಸ್ತಕದ ಮೊರೆ ಹೋಗು ತ್ತಿದ್ದರು. ಮನೆ ಹತ್ತಿರದ ಪುಸ್ತಕ ದಂಗಡಿ, ಗ್ರಂಥಾಲಯ, ಸ್ನೇಹಿತರ…

39 mins ago

ಓದುಗರ ಪತ್ರ | ರೇಣುಕಾ ಇತರರಿಗೆ ಮಾದರಿ

ತೃತೀಯ ಲಿಂಗಿಯೊಬ್ಬರು ವಿಜಯನಗರದ ಶ್ರೀ ಕೃಷ್ಣದೇವರಾಯ ವಿಶ್ವವಿದ್ಯಾನಿಲಯಕ್ಕೆ ಕನ್ನಡ ಸಹಾಯಕ ಪ್ರಾಧ್ಯಾಪಕಿ ಯಾಗಿ ಆಯ್ಕೆಯಾಗಿರುವುದು ರಾಜ್ಯದ ಇತಿಹಾಸ ದಲ್ಲೇ ಮೊದಲಾಗಿದ್ದು,…

2 hours ago

ನುಡಿ ಜಾತ್ರೆಗೆ ದಿಢೀರ ಮಳೆ ಸಿಂಚನ

ಒಂದೆಡೆ ತಂಪಿನ ವಾತಾವರಣ : ಮತ್ತೊಂದೆಡೆ ಕಿರಿಕಿರಿ ಉಂಟುಮಾಡುವ ಕೆಸರುಮಯ ತಾಣ ಜಿ. ತಂಗಂ ಗೋಪಿನಾಥಂ ಮಂಡ್ಯ: ಕಳೆದ ಎರಡು…

2 hours ago

ರಿಯಾಯಿತಿ ಮಾರಾಟ; ಇಷ್ಟದ ಪುಸ್ತಕಕ್ಕೆ ಹುಡುಕಾಟ

ಚಿರಂಜೀವಿ ಸಿ. ಹುಲ್ಲಹಳ್ಳಿ ಮಂಡ್ಯ: ಕೃಷಿಯಲ್ಲಿ ಪ್ರಾಮುಖ್ಯತೆ ಪಡೆದಿರುವ ಮಂಡ್ಯ ಜಿಲ್ಲೆಯಲ್ಲಿ ಸಾಹಿತ್ಯಾಸಕ್ತರು ಮತ್ತು ಸಾಹಿತಿಗಳು ಕಡಿಮೆ ಏನಿಲ್ಲ ಎಂಬುದನ್ನು…

3 hours ago