ನವದೆಹಲಿ : ವರ್ಲ್ಡ್ ಕಪ್ 2023ರಲ್ಲಿ ಆಸ್ಟ್ರೇಲಿಯಾ ತಂಡ ಭಾರತವನ್ನು ಬಗ್ಗುಬಡಿದು ಗೆಲುವಿನ ನಗೆ ಬೀರಿತ್ತು. ಇದರ ಬೆನ್ನಲ್ಲೇ ಆಸ್ಟ್ರೇಲಿಯಾ ತಂಡದ ಆಟಗಾರನ ವಿರುದ್ಧ ಸಾರ್ವಜನಿಕ ವಲಯದಲ್ಲಿ ಭಾರೀ ಆಕ್ರೋಶ ವ್ಯಕ್ತವಾಗುತ್ತಿದೆ.
ವರ್ಲ್ಡ್ ಕಪ್‌ಗೆ ಆಸ್ಟ್ರೇಲಿಯಾ ಗೆಲುವಿನ ಮುತ್ತಿಟ್ಟ ಬೆನ್ನಲ್ಲೇ ತಂಡದ ಆಟಗಾರ ಮಿಚೇಲ್ ಮಾರ್ಷ್, ವರ್ಲ್ಡ್ ಕಪ್ ಟ್ರೋಫಿ ಮೇಲೆ ಕಾಲಿಟ್ಟು ಕುಳಿತಿರುವುದು ಇದೀಗ ಜನರ ಗೆಂಗಣ್ಣಿಗೆ ಗುರಿಯಾಗಿದೆ. ಸಧ್ಯ ಈ ಫೋಟೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ. ಮಿಚೆಲ್ ಅವರ ಈ ನಡೆಯನ್ನು ಜನ ತೀವ್ರವಾಗಿ ಖಂಸುತ್ತಿದ್ದು, ಹಿಗ್ಗಾಮುಗ್ಗಾ ತರಾಟೆಗೆ ತೆಗೆದುಕೊಂಡಿದ್ದಾರೆ.
ವೈರಲ್ ಆಗುತ್ತಿರುವ ಫೋಟೋದಲ್ಲಿ ಮಿಚೆಲ್ ಅವರು ಎರಡೂ ಕಾಲುಗಳನ್ನು ವರ್ಲ್ಡ್‌ಕಪ್ ಟ್ರೋಫಿಯ ಮೇಲಿಟ್ಟು ಯಾವುದೋ ಪಾನೀಯವನ್ನು ಕೈಯಲ್ಲಿ ಹಿಡಿದುಕೊಂಡಿದ್ದಾರೆ. ಇನ್ನು ಈ ಫೋಟೋವನ್ನು ತಂಡದ ನಾಯಕ ಕಮ್ಮಿನ್ಸ್ ಅವರು ಸಾಮಾಜಿಕ ಜಾಲತಾಣದಲ್ಲಿ ಶೇರ್ ಮಾಡಿದ್ದಾರೆ. ಇದನ್ನು ಗಮನಿಸಿದ ನೆಟ್ಟಿಗರು ಮಿಚೆಲ್ ಅವರು ವರ್ಲ್ಡ್‌ಕಪ್ ಗೆ ಅಗೌರವ ತೋರಿದ್ದಾರೆ ಎಂದು ಆಕ್ರೋಶ ವ್ಯಕ್ತ ಪಡಿಸಿದ್ದಾರೆ.
ಈ ಫೋಟೋ ಬಗ್ಗೆ ಸಾರ್ವಜನಿಕ ವಲಯದಲ್ಲಿ ಖಂಡನೆ ವ್ಯಕ್ತವಾಗುತ್ತಿದ್ದಂತೆ ಕಮ್ಮಿನ್ಸ್ ಅವರು ತಮ್ಮ ಪೊಸ್ಟನ್ನು ಡಿಲೀಟ್ ಮಾಡಿದ್ದಾರೆ.
ನೆನ್ನೆ ಅಹಮದಾಬಾದ್‌ನ ನರೇಂದ್ರ ಮೋದಿ ಸ್ಟೇಡಿಯಂ ನಲ್ಲಿ ನಡೆದ ವರ್ಲ್ಡ್‌ಕಪ್ ಏಕದಿನ ಕ್ರಿಕೇಟ್‌ನ ಅಂತಿಮ ಪಂದ್ಯಾವಳಿಯಲ್ಲಿ ಭಾರತ ಮತ್ತೊಮ್ಮೆ ಮುಗ್ಗರಿಸಿದ್ದು, ತವರಿನಲ್ಲಿ ಎರಡನೇ ಬಾರಿಗೆ ಹಾಗೂ ವರ್ಲ್ಡ್‌ಕಪ್ ನಲ್ಲಿ ಮೂರನೇ ಬಾರಿಗೆ ಟ್ರೋಫಿ ಗೆಲ್ಲುವ ಅವಕಾಶದಿಂದ ವಂಚಿತವಾಯಿತು. ವರ್ಲ್ಡ್ ಕಪ್ 2023ರಲ್ಲಿ ಆಸ್ಟ್ರೇಲಿಯಾ ತಂಡ ಭಾರತವನ್ನು ಬಗ್ಗುಬಡಿದು ಗೆಲುವಿನ ನಗೆ ಬೀರಿತ್ತು. ಇದರ ಬೆನ್ನಲ್ಲೇ ಆಸ್ಟ್ರೇಲಿಯಾ ತಂಡದ ಆಟಗಾರನ ವಿರುದ್ಧ ಸಾರ್ವಜನಿಕ ವಲಯದಲ್ಲಿ ಭಾರೀ ಆಕ್ರೋಶ ವ್ಯಕ್ತವಾಗುತ್ತಿದೆ.
ನಂಜನಗೂಡು: 5 ಸಾವಿರ ರೂ ಸಾಲ ಪಾವತಿಗಾಗಿ ಮಾನಸಿಕವಾಗಿ ಕಿರುಕುಳ ನೀಡಿದ ವ್ಯಕ್ತಿ ಮನೆ ಮುಂದೆ ಸೆಲ್ಫಿ ವಿಡಿಯೋ ಮಾಡಿ…
ಮಂಡ್ಯ: ಡಿವೈಡರ್‌ಗೆ ಡಿಕ್ಕಿ ಹೊಡೆದ ಕಾರು ಪಲ್ಟಿಯಾಗಿ ಬಿದ್ದ ಪರಿಣಾಮ ಸ್ಥಳದಲ್ಲೇ ಮೂವರು ಸಾವನ್ನಪ್ಪಿರುವ ಧಾರುಣ ಘಟನೆ ಮಂಡ್ಯದಲ್ಲಿ ನಡೆದಿದೆ.…
ಬೆಂಗಳೂರು: ರಾಜ್ಯದ ಕೆಲವು ಜಿಲ್ಲೆಗಳಲ್ಲಿ ಮುಂದಿನ ಮೂರು ದಿನಗಳ ಕಾಲ ಬೆಳಗಿನ ಜಾವ ದಟ್ಟವಾದ ಮಂಜು ಕವಿದ ವಾತಾವರಣ ಇರಲಿದೆ.…
ಕೊಳ್ಳೇಗಾಲ: ಮೇಯಲು ಬಿಟ್ಟಿದ್ದ ಮೇಕೆಗಳು ಯೂರಿಯಾ ಗೊಬ್ಬರ ತಿಂದು ಸಾವನ್ನಪ್ಪಿರುವ ಘಟನೆ ಚಾಮರಾಜನಗರ ಜಿಲ್ಲೆ ಕೊಳ್ಳೇಗಾಲ ತಾಲ್ಲೂಕಿನ ಜಾಗೇರಿ ಹಳೆ…
ಚಾಮರಾಜನಗರ: ಪಾದಾಚಾರಿಗಳ ಮೇಲೆ ಏಕಾಏಕಿ ಹುಚ್ಚುನಾಯಿ ದಾಳಿ ನಡೆಸಿದ ಪರಿಣಾಮ 7 ಮಂದಿ ಗಾಯಗೊಂಡಿರುವ ಘಟನೆ ಯಳಂದೂರು ಪಟ್ಟಣದಲ್ಲಿ ನಡೆದಿದೆ.…
ಮಡಿಕೇರಿ: ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ತಮ್ಮ ವಸ್ತುಗಳು ಏನೇ ಇದ್ದರೂ ಅಫಿಡವಿಟ್‌ನಲ್ಲಿ ತೋರಿಸಿದ್ದರೆ ಯಾವುದೇ ಸಮಸ್ಯೆ ಆಗಲ್ಲ. ಈ ಹಿಂದೆ…