BREAKING NEWS

ವರ್ಲ್ಡ್‌ ಕಪ್‌ ಟ್ರೋಫಿ ಮೇಲೆ ಕಾಲಿಟ್ಟು ಕುಳಿತ ಆಸ್ಟ್ರೇಲಿಯಾ ತಂಡದ ಆಟಗಾರ

ನವದೆಹಲಿ : ವರ್ಲ್ಡ್‌ ಕಪ್‌ 2023ರಲ್ಲಿ ಆಸ್ಟ್ರೇಲಿಯಾ ತಂಡ ಭಾರತವನ್ನು ಬಗ್ಗುಬಡಿದು ಗೆಲುವಿನ ನಗೆ ಬೀರಿತ್ತು. ಇದರ ಬೆನ್ನಲ್ಲೇ ಆಸ್ಟ್ರೇಲಿಯಾ ತಂಡದ ಆಟಗಾರನ ವಿರುದ್ಧ ಸಾರ್ವಜನಿಕ ವಲಯದಲ್ಲಿ ಭಾರೀ ಆಕ್ರೋಶ ವ್ಯಕ್ತವಾಗುತ್ತಿದೆ.

ವರ್ಲ್ಡ್‌ ಕಪ್‌ಗೆ ಆಸ್ಟ್ರೇಲಿಯಾ ಗೆಲುವಿನ ಮುತ್ತಿಟ್ಟ ಬೆನ್ನಲ್ಲೇ ತಂಡದ ಆಟಗಾರ ಮಿಚೇಲ್‌ ಮಾರ್ಷ್‌, ವರ್ಲ್ಡ್‌ ಕಪ್‌ ಟ್ರೋಫಿ ಮೇಲೆ ಕಾಲಿಟ್ಟು ಕುಳಿತಿರುವುದು ಇದೀಗ ಜನರ ಗೆಂಗಣ್ಣಿಗೆ ಗುರಿಯಾಗಿದೆ. ಸಧ್ಯ ಈ ಫೋಟೋ ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗುತ್ತಿದೆ. ಮಿಚೆಲ್‌ ಅವರ ಈ ನಡೆಯನ್ನು ಜನ ತೀವ್ರವಾಗಿ ಖಂಸುತ್ತಿದ್ದು, ಹಿಗ್ಗಾಮುಗ್ಗಾ ತರಾಟೆಗೆ ತೆಗೆದುಕೊಂಡಿದ್ದಾರೆ.

ವೈರಲ್‌ ಆಗುತ್ತಿರುವ ಫೋಟೋದಲ್ಲಿ ಮಿಚೆಲ್‌ ಅವರು ಎರಡೂ ಕಾಲುಗಳನ್ನು ವರ್ಲ್ಡ್‌ಕಪ್‌ ಟ್ರೋಫಿಯ ಮೇಲಿಟ್ಟು ಯಾವುದೋ ಪಾನೀಯವನ್ನು ಕೈಯಲ್ಲಿ ಹಿಡಿದುಕೊಂಡಿದ್ದಾರೆ. ಇನ್ನು ಈ ಫೋಟೋವನ್ನು ತಂಡದ ನಾಯಕ ಕಮ್ಮಿನ್ಸ್‌ ಅವರು ಸಾಮಾಜಿಕ ಜಾಲತಾಣದಲ್ಲಿ ಶೇರ್‌ ಮಾಡಿದ್ದಾರೆ. ಇದನ್ನು ಗಮನಿಸಿದ ನೆಟ್ಟಿಗರು ಮಿಚೆಲ್‌ ಅವರು ವರ್ಲ್ಡ್‌ಕಪ್‌ ಗೆ ಅಗೌರವ ತೋರಿದ್ದಾರೆ ಎಂದು ಆಕ್ರೋಶ ವ್ಯಕ್ತ ಪಡಿಸಿದ್ದಾರೆ.

ಈ ಫೋಟೋ ಬಗ್ಗೆ ಸಾರ್ವಜನಿಕ ವಲಯದಲ್ಲಿ ಖಂಡನೆ ವ್ಯಕ್ತವಾಗುತ್ತಿದ್ದಂತೆ ಕಮ್ಮಿನ್ಸ್‌ ಅವರು ತಮ್ಮ ಪೊಸ್ಟನ್ನು ಡಿಲೀಟ್‌ ಮಾಡಿದ್ದಾರೆ.

ನೆನ್ನೆ ಅಹಮದಾಬಾದ್‌ನ ನರೇಂದ್ರ ಮೋದಿ ಸ್ಟೇಡಿಯಂ ನಲ್ಲಿ ನಡೆದ ವರ್ಲ್ಡ್‌ಕಪ್‌ ಏಕದಿನ ಕ್ರಿಕೇಟ್‌ನ ಅಂತಿಮ ಪಂದ್ಯಾವಳಿಯಲ್ಲಿ ಭಾರತ ಮತ್ತೊಮ್ಮೆ ಮುಗ್ಗರಿಸಿದ್ದು, ತವರಿನಲ್ಲಿ ಎರಡನೇ ಬಾರಿಗೆ ಹಾಗೂ ವರ್ಲ್ಡ್‌ಕಪ್‌ ನಲ್ಲಿ ಮೂರನೇ ಬಾರಿಗೆ ಟ್ರೋಫಿ ಗೆಲ್ಲುವ ಅವಕಾಶದಿಂದ ವಂಚಿತವಾಯಿತು. ವರ್ಲ್ಡ್‌ ಕಪ್‌ 2023ರಲ್ಲಿ ಆಸ್ಟ್ರೇಲಿಯಾ ತಂಡ ಭಾರತವನ್ನು ಬಗ್ಗುಬಡಿದು ಗೆಲುವಿನ ನಗೆ ಬೀರಿತ್ತು. ಇದರ ಬೆನ್ನಲ್ಲೇ ಆಸ್ಟ್ರೇಲಿಯಾ ತಂಡದ ಆಟಗಾರನ ವಿರುದ್ಧ ಸಾರ್ವಜನಿಕ ವಲಯದಲ್ಲಿ ಭಾರೀ ಆಕ್ರೋಶ ವ್ಯಕ್ತವಾಗುತ್ತಿದೆ.

lokesh

Recent Posts

ತಂತ್ರಜ್ಞಾನ ಶಸ್ತ್ರಾಸ್ತ್ರೀಕರಣದ ಬಗ್ಗೆ ಕಳವಳಗಳ ವ್ಯಕ್ತಪಡಿಸಿದ ಪ್ರಧಾನಿ ಮೋದಿ

ನವದೆಹಲಿ : ಹೆಚ್ಚುತ್ತಿರುವ ಭೌಗೋಳಿಕ ರಾಜಕೀಯ ಉದ್ವಿಗ್ನತೆಗಳು ಜಾಗತಿಕವಾಗಿ ಸಾಮಾನ್ಯ ಜೀವನದ ಮೇಲೆ ಪ್ರತಿಕೂಲ ಪರಿಣಾಮ ಬೀರುತ್ತಿದೆ ಎಂದು ಪ್ರಧಾನಿ…

10 hours ago

ಭಾನುವಾರದ ಹಾಡುಪಾಡು | ಹೊರಗೆ ನಗುವಿನ ಮೇಕಪ್‌, ಒಳಗೆ ಕುದಿಯುವ ಬೇಗುದಿ

ಮೇಘನ ಕೆ.ಆರ್‌ ಕೇರಳಿಗಳಾದ ನನಗೆ ವರ್ಷಕ್ಕೆರಡು ಹಬ್ಬ-ಓಣಂ, ವಿಶು ಮಾತ್ರ ತಿಳಿದಿತ್ತು. ದೀಪಾವಳಿಗೆ ದನಗಳಿಗೆ ಪೂಜೆ ಮಾಡಿ ಅಮ್ಮ ಕೆಲಸಕ್ಕೆ…

14 hours ago

ಭಾನುವಾರದ ಹಾಡುಪಾಡು | ಮಳೆ ತರುವ ತಾಯಯಿ ಈ ಪುಟ್ಟ ಗೌರಿ

ಡಾ. ಶಿಲಿನಾ ಕೋಟೆ ಎನ್.‌ ಭಾರತೀಯ ಸಂಸ್ಕೃತಿಯಲ್ಲಿ ಹಬ್ಬಗಳು ಕೇವಲ ಧಾರ್ಮಿಕ ಆಚರಣೆ ಗಳಲ್ಲ; ಅವು ಪ್ರಕೃತಿ, ಕೃಷಿ, ಮಳೆ,…

14 hours ago

ಗೌರಮ್ಮ ಭೂಮಿಗೆ ಬರುವ ದಿನ

ಶುಭಮಂಗಳ ರಾಮಾಪುರ ಗೌರಿಹಬ್ಬವೆಂದ ಕೂಡಲೇ ಸಂಭ್ರಮದ ನೆನಪು ಒಂದೆಡೆಯಾದರೆ ಕೆಲಸದ ಹೊರೆ ಮತ್ತೊಂದೆಡೆ. ನನ್ನೂರಿನಲ್ಲಂತೂ ಗೌರಿಹಬ್ಬಕ್ಕೆ ಮಡಿ ಮಾಡುವುದೇ ದೊಡ್ಡ…

14 hours ago

ಮಗಳು ಗೌರಿ, ದೇವತೆಯೂ ಗೌರಿ, ಮಳೆಯು ಗೌರಿ, ಬೆಂಕಿಯೂ ಗೌರಿ

ನಾಳಿನ ಗೌರಿ ಗಣೇಶ ಸಂಭ್ರಮಕ್ಕೆ ಬರಹಗಳ ಬಾಗಿನ ಡಾ.ಶುಭಶ್ರೀ ಪ್ರಸಾದ್‌, ಮಂಡ್ಯ ‘ಮಗಳು’ಎಂದ ಕ್ಷಣ ಕಣ್ಮುಂದೆ ಬರುವುದು ಜರಿ ಲಂಗ,…

14 hours ago

ಗೌರಿ-ಗಣೇಶ ಹಬ್ಬಕ್ಕೆ ಸಕಲ ಸಿದ್ಧತೆ

ಅರಮನೆ ನಗರಿಯ ಮಾರುಕಟ್ಟೆಗಳಲ್ಲಿ ಖರೀದಿ ಭರಾಟೆ ಜೋರು ಸೇವಂತಿಗೆ ಹೂವು, ಏಲಕ್ಕಿ ಬಾಳೆಹಣ್ಣು ಸೇರಿ ಇನ್ನಿತರೆ ಹಣ್ಣುಗಳ ಬೆಲೆ ಹೆಚ್ಚಳ…

14 hours ago