ಬೆಂಗಳೂರು : ವಿಧಾನಪರಿಷತ್ ಮಾಜಿ ಸದಸ್ಯ ಆಯನೂರು ಮಂಜುನಾಥ್ ಅವರನ್ನು ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ (ಕೆಪಿಸಿಸಿ) ವಕ್ತಾರರನ್ನಾಗಿ ನೇಮಕ ಮಾಡಲಾಗಿದೆ. ಈ ಕುರಿತು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಅಧಿಕೃತ ಆದೇಶ ಹೊರಡಿಸಿದ್ದಾರೆ.
ಆಯನೂರು ಮಂಜುನಾಥ್ ಅವರು ದೃಶ್ಯ ಮಾಧ್ಯಮ, ಮುದ್ರಣ ಮಾಧ್ಯಮ ಮತ್ತು ಸಾಮಾಜಿಕ ಜಾಲತಾಣಗಳಲ್ಲಿ ಸಾರ್ವಜನಿಕವಾಗಿ ರಾಜಕೀಯ ಸಾಮಾಜಿಕ ವಿಷಯಗಳ ಬಗ್ಗೆ ಚರ್ಚೆಯಲ್ಲಿ ಹೆಚ್ಚು ಪ್ರಚಾರದಲ್ಲಿರುವುದನ್ನು ಗಮನಿಸಿ ಕಾಂಗ್ರೆಸ್ ಪಕ್ಷದ ವಿಚಾರಧಾರಣೆಗಳನ್ನು ಮತ್ತು ಸರ್ಕಾರದ ಯೋಜನೆಗಳನ್ನು ಪರಿಣಾಮಕಾರಿಯಾಗಿ ಮಾಧ್ಯಮಗಳಲ್ಲಿ ಬಿಂಬಿಸಲು ಕೆಪಿಸಿಸಿ ವಕ್ತಾರರನ್ನಾಗಿ ನೇಮಕ ಮಾಡಲಾಗಿದೆ ಎಂದು ಅವರು ಹೇಳಿದ್ದಾರೆ.
ಆಯನೂರು ಮಂಜುನಾಥ್ ಕಳೆದ ವಿಧಾನಸಭಾ ಚುನಾವಣೆಯಲ್ಲಿ ಟಿಕೆಟ್ ಸಿಗದೆ ಬಿಜೆಪಿ ತೊರೆದು ಜೆಡಿಎಸ್ ಸೇರ್ಪಡೆಯಾಗಿದ್ದರು. ಜೆಡಿಎಸ್ ವಿಧಾನಸಭೆ ಚುನಾವಣೆಗೆ ಟಿಕೆಟ್ ನೀಡಿತ್ತು. ಆದರೆ, ಮಂಜುನಾಥ್ ಸೋಲನುಭವಿಸಿದರು. ಬಳಿಕ ಕಳೆದ ಆಗಸ್ಟ್ 24ರಂದು ಡಿಸಿಎಂ ಡಿ.ಕೆ ಶಿವಕುಮಾರ್ ಸಮ್ಮುಖದಲ್ಲಿ ಕಾಂಗ್ರೆಸ್ ಸೇರ್ಪಡೆಯಾಗಿದ್ದರು. ಕಾಂಗ್ರೆಸ್ ಸೇರಿದ ಬೆನ್ನಲ್ಲೇ ಆಯನೂರು ಮಂಜುನಾಥ್ ಅವರಿಗೆ ಪಕ್ಷ ಉನ್ನತ ಸ್ಥಾನ ಕೊಟ್ಟಿದೆ.
ಮೈಸೂರು: ಮಾಗಿ ಉತ್ಸವದ ಅಂಗವಾಗಿ ಜಗತ್ಪ್ರಸಿದ್ಧ ಮೈಸೂರು ಅರಮನೆ ಆವರಣದಲ್ಲಿ ಇಂದು ಸಂಜೆ ಖ್ಯಾತ ಗಾಯಕ ವಿಜಯ್ ಪ್ರಕಾಶ್ ಅವರು…
ಚಾಮರಾಜನಗರ: ಬಿಆರ್‌ಟಿ ಹುಲಿ ಸಂರಕ್ಷಿತಾರಣ್ಯದಲ್ಲಿ ಪಶು ವೈದ್ಯರ ಕೊರತೆ ಎದ್ದು ಕಾಣುತ್ತಿದ್ದು, ಹೊರಗುತ್ತಿಗೆ ಆಧಾರದಲ್ಲಿ ವೈದ್ಯರ ಹುದ್ದೆಯ ನೇಮಕಾತಿಗೂ ಜಾಹೀರಾತು…
ಬೆಂಗಳೂರು: ರಾಜ್ಯದಲ್ಲಿ ಸಂಭವಿಸಿದ ಪ್ರಕೃತಿ ವಿಕೋಪದಿಂದ ಹಣ್ಣುಗಳ ರಾಣಿ ಎಂದು ಕರೆಯಿಸಿಕೊಳ್ಳುವ ಮಾವಿಗೆ ಅನೇಕ ರೋಗಗಳು ಕಾಣಿಸಿಕೊಂಡಿದ್ದು, ರೈತರಿಗೆ ಇಳುವರಿ…
ಗುಂಡ್ಲುಪೇಟೆ: ಗಡಿ ಜಿಲ್ಲೆ ಚಾಮರಾಜನಗರದ ಗುಂಡ್ಲುಪೇಟೆ ತಾಲ್ಲೂಕಿನಲ್ಲಿರುವ ರಾಷ್ಟ್ರೀಯ ಉದ್ಯಾನವನ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ ಕುಂದಕೆರೆ ವಲಯದ ಚಿಕ್ಕ…
ಲಕ್ನೋ: ಆಕರ್ಷಣೀಯ ಪ್ರವಾಸಿತಾಣಗಳ ಪಟ್ಟಿಯಲ್ಲಿ ಅಯೋಧ್ಯೆ ರಾಮಮಂದಿರವು ತಾಜ್‌ಮಹಲನ್ನು ಹಿಂದಿಕ್ಕಿ ನಂಬರ್ ಒನ್ ಪಟ್ಟ ಪಡೆದಿದೆ. ಈ ಮೂಲಕ ಈಗ…