ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡುವುದಾಗಿ ಬಿ.ಎಸ್‌.ಯಡಿಯೂರಪ್ಪ ಘೋಷಣೆ

ಬೆಂಗಳೂರು: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡುವುದಾಗಿ ಬಿ.ಎಸ್‌.ಯಡಿಯೂರಪ್ಪ ಘೋಷಣೆ ಮಾಡಿದರು.

ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ನೇತೃತ್ವದ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದು ಎರಡು ವರ್ಷಗಳಾಗುತ್ತಿರುವ ಪ್ರಯುಕ್ತ ವಿಧಾನಸೌಧದ ಬ್ಯಾಂಕ್ವೆಟ್ ಹಾಲ್ ನಲ್ಲಿ ಸೋಮವಾರ ಸಾಧನಾ ಸಮಾರಂಭ ನಡೆಯುತ್ತಿದೆ. ಈ ವೇಳೆ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡುವುದಾಗಿ ಯಡಿಯೂರಪ್ಪ ತಿಳಿಸಿದರು.

ಭಾಷಣದ ವೇಳೆ ಕಣ್ಣೀರಿಟ್ಟ ಯಡಿಯೂರಪ್ಪ, ʻರಾಜ್ಯಪಾಲರ ಭವನಕ್ಕೆ ತೆರಳಿ ರಾಜ್ಯಪಾಲರಿಗೆ ರಾಜೀನಾಮೆ ಪತ್ರ ಸಲ್ಲಿಸುತ್ತೇನೆ. ದುಃಖದಿಂದ ಅಲ್ಲ, ಖುಷಿಯಿಂದಲೇ ರಾಜೀನಾಮೆ ಸಲ್ಲಿಸುತ್ತಿದ್ದೇನೆʼ ಎಂದು ಹೇಳಿದರು.

ಯಡಿಯೂರಪ್ಪ ಅವರೊಂದಿಗೆ ಉಪ ಮುಖ್ಯಮಂತ್ರಿಗಳಾದ ಗೋವಿಂದ ಎಂ. ಕಾರಜೋಳ, ಡಾ.ಸಿ.ಎನ್. ಅಶ್ವತ್ಥನಾರಾಯಣ ಮತ್ತು ಲಕ್ಷ್ಮಣ ಸವದಿ ವೇದಿಕೆಯಲ್ಲಿದ್ದಾರೆ. ಸಚಿವರು, ಶಾಸಕರು ಮತ್ತು ಅಧಿಕಾರಿಗಳು ಸಮಾರಂಭದಲ್ಲಿ ಪಾಲ್ಗೊಂಡಿದ್ದಾರೆ.

× Chat with us