BREAKING NEWS

ಬಿ ವೈ ವಿಜಯೇಂದ್ರಗೆ ಬಿಜೆಪಿ ರಾಜ್ಯಾಧ್ಯಕ್ಷ ಪಟ್ಟ

ಬೆಂಗಳೂರು : ಮಾಜಿ ಮುಖ್ಯಮಂತ್ರ ಬಿ.ಎಸ್‌. ಯಡಿಯೂರಪ್ಪ ಅವರ ಪುತ್ರ ಬಿ.ವೈ ವಿಜಯೇಂದ್ರ ಅವರಿಗೆ ಬಿಜೆಪಿ ರಾಜ್ಯಾಧ್ಯಕ್ಷ ಪಟ್ಟ ನೀಡಲಾಗಿದೆ.

ಪಕ್ಷದ ರಾಜ್ಯ ಉಪಾಧ್ಯಕ್ಷರಾಗಿದ್ದ ವಿಜಯೇಂದ್ರ ಅವರನ್ನು ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಅವರು ಈ ಕ್ಷಣದಿಂದಲೇ ಜಾರಿಗೆ ಬರುವಂತೆ ರಾಜ್ಯ ಅಧ್ಯಕ್ಷರನ್ನಾಗಿ ನೇಮಕ ಮಾಡಿ ಆದೇಶ ಹೊರಡಿಸಿದ್ದಾರೆ.

ಬಿಜೆಪಿ ರಾಜ್ಯಾಧ್ಯಕ್ಷ ನಳೀನ್‌ ಕುಮಾರ್‌ ಕಟೀಲ್‌ ಅವಧಿ ಕೊನೆಗೊಂಡಿದ್ದು, ಲೋಕಸಭಾ ಚುನಾವಣೆಗು ಮುನ್ನಾ ರಾಜ್ಯಾಧ್ಯಕ್ಷ ಸ್ಥಾನ ಯಾರಿಗೆ ಎಂಬ ಕುತೂಹಲವಿತ್ತು. ಬಹುಶಃ ಸಂಸದೆ ಶೋಭಾ ಕರಂದ್ಲಾಜೆಗೆ ರಾಜ್ಯಾಧ್ಯಕ್ಷ ಪಟ್ಟ ಎಂದು ನಂಬಲಾಗಿತ್ತು. ಆದರೆ, ಬಿ ವೈ ವಿಜಯೇಂದ್ರ ಆಯ್ಕೆ ಅಚ್ಚರಿ ತಂದಿದೆ.

ಲೋಕಸಭೆ ಚುನಾವಣೆಗೆ ಕೆಲವು ತಿಂಗಳು ಮುಂಚಿತವಾಗಿ ಆಗಿರುವ ಈ ಬದಲಾವಣೆ ಪಕ್ಷದ ಕಾರ್ಯಕರ್ತರಲ್ಲಿ ಸಂಚಲನ ಮೂಡಿಸಿದೆ.

andolanait

Recent Posts

ಕಾಡಾನೆ ದಾಳಿ: ವ್ಯಕ್ತಿ ಸಾವು

ಸರಗೂರು: ಆಸ್ಪತ್ರೆಗೆ ತೆರಳುತ್ತಿದ್ದ ವೇಳೆ ಕಾಡಾನೆ ದಾಳಿ ನಡೆಸಿದ ಪರಿಣಾಮ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಸರಗೂರು ತಾಲ್ಲೂಕಿನ ಕಾಡಗೆರೆ ಗ್ರಾಮದ…

2 hours ago

ಗಣೇಶ ವಿಸರ್ಜನೆ ಮೆರವಣಿಗೆ ರಾಜಕೀಯ ದಾಳವಾಗದಿರಲಿ…

ಬ್ರಿಟೀಷರ ವಿರುದ್ಧ ಸಮಾಜವನ್ನು ಅದರಲ್ಲೂ ಯುವಜನರನ್ನು ಸಂಘಟಿಸಿ, ದೇಶಭಕ್ತಿಯನ್ನು ಜಾಗೃತಿಗೊಳಿಸುವ ಮೂಲಕ ಅವರನ್ನು ಸ್ವಾತಂತ್ರ್ಯಸಂಗ್ರಾಮಕ್ಕೆ ಸಜ್ಜುಗೊಳಿಸುವ ಉದ್ದೇಶದಿಂದ ಆರಂಭವಾದ ಸಾರ್ವಜನಿಕ…

5 hours ago

ಕಾಂಗ್ರೆಸ್‌ನಲ್ಲೀಗ ಆತಂಕದ ಕಾರ್ಮೋಡ…

ಬೆಂಗಳೂರು ಡೈರಿ: ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ  ಕಳೆದ ಮೂರು ವರ್ಷಗಳಿಂದ ಅಧಿಕಾರ ಹಂಚಿಕೆಯ ಸಂಘರ್ಷದಲ್ಲಿ ಮುಳುಗಿದ್ದ ಆಡಳಿತಾರೂಢ ಕಾಂಗ್ರೆಸ್…

5 hours ago

ಕಸ್ತೂರಿ ರಂಗನ್ ವರದಿ: ದೇವರ ಕಾಡುಗಳಿಗೂ ಆತಂಕ

ಲಕ್ಷ್ಮೀ ಕಾಂತ್ ಕೊಮಾರಪ್ಪ ಕೃಷಿ, ಧಾರ್ಮಿಕ ಆಚರಣೆಗಳಿಗೆ ಧಕ್ಕೆ ಬಾರದಂತೆ ತಿದ್ದುಪಡಿ ತರಲು ಆಗ್ರಹ  ಸೋಮವಾರಪೇಟೆ: ಕೊಡಗು ಜಿಲ್ಲೆಯ ಅರ್ಧದಷ್ಟು…

5 hours ago

ರಸ್ತೆ ಡುಬ್ಬ ನಿರ್ಮಿಸಿ; ಅಪಘಾತ ತಪ್ಪಿಸಿ

ಪ್ರಶಾಂತ್ ಎಸ್. ಬೊಂತಗಳ್ಳಿ ಸೇತುವೆ, ತಂತಿಗುಳ್ಳು ತಿರುವಿನಲ್ಲಿ ಹಂಪ್, ಬ್ಯಾರಿಕೇಡ್‌ಗಳನ್ನು ಅಳವಡಿಸಲು ಗ್ರಾಮಸ್ಥರ ಆಗ್ರಹ  ಮೈಸೂರು: ಬನ್ನೂರು ಮುಖ್ಯ ರಸ್ತೆಯಲ್ಲಿನ…

5 hours ago

ಕಾಲ್ಚೆಂಡು ಮೈದಾನ ಈಗ ಬಿಡಾಡಿ ದನಗಳ, ವಾಹನಗಳ ತಂಗುದಾಣ

ಕೆ.ಬಿ.ರಮೇಶನಾಯಕ ಮೈದಾನ ಸಂರಕ್ಷಿಸಿಕೊಳ್ಳದ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ; ಅಧಿಕಾರಿಗಳ ನಿರ್ಲಕ್ಷ್ಯದಿಂದ ಕಾಲ್ಚೆಂಡು ಮೈದಾನ ಈಗ ಬಿಡಾಡಿ ದನಗಳ,…

5 hours ago