ಕರ್ನಾಟಕದ ಸರ್ಕಾರಿ ಮಹಿಳಾ ನೌಕರರಿಗೆ ಗುಡ್‌ನ್ಯೂಸ್‌… 180 ದಿನ ಶಿಶುಪಾಲನಾ ರಜೆ

ಬೆಂಗಳೂರು: ರಾಜ್ಯ ಸರ್ಕಾರಿ ಮಹಿಳಾ ನೌಕರರಿಗೆ ಅವರ ಸೇವಾವಧಿಯಲ್ಲಿ ಮಕ್ಕಳ ಸಂಖ್ಯೆಯನ್ನು ಪರಿಗಣಿಸಿದೆ 180 ದಿನಗಳು ಶಿಶು ಪಾಲನಾ ರಜೆ ನೀಡುವ ಸಂಬಂಧ ಸರ್ಕಾರ ಆದೇಶ ಹೊರಡಿಸಿದೆ.

ಮಹಿಳಾ ನೌಕರರು ಹೊಂದಿರುವ ಮಕ್ಕಳಲ್ಲಿ ಕಿರಿಯ ಮಗು 18 ವರ್ಷ ತುಂಬುವವರೆಗೆ ಈ ರಜೆ ಸೌಲಭ್ಯವನ್ನು ಬಳಸಿಕೊಳ್ಳಬಹುದು. ಪ್ರತಿ ಬಾರಿ ರಜೆ ತೆಗೆದುಕೊಳ್ಳುವಾಗ ಕನಿಷ್ಠ 15 ದಿನಗಳಿಗೂ ಕಡಿಮೆ ಇಲ್ಲದಂತೆ ರಜೆ ಪಡೆಯಬೇಕು ಎಂದು ಆದೇಶದಲ್ಲಿ ತಿಳಿಸಲಾಗಿದೆ.

ʻಮಕ್ಕಳ ಆರೈಕೆ, ಪಾಲನೆ, ಪೋಷಣೆಗೆ ಶಿಶುಪಾಲನಾ ರಜೆ ನೀಡುವಂತೆ ರಾಜ್ಯ ಸರ್ಕಾರಿ ನೌಕರರ ಸಂಘ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರಿಗೆ ಮನವಿ ಸಲ್ಲಿಸಿತ್ತು. 2020ರಲ್ಲಿ ಯಡಿಯೂರಪ್ಪ ಅವರು ಮಂಡಿಸಿದ ಆಯವ್ಯಯದ ಭಾಷಣದಲ್ಲಿ ಈ ಸೌಲಭ್ಯ ಕಲ್ಪಿಸುವುದಾಗಿ ಭರವಸೆ ನೀಡಿದ್ದರು. ಈಗ ಸರ್ಕಾರಿ ಆದೇಶ ಹೊರಡಿಸಲಾಗಿದೆ. ಸರ್ಕಾರದ ಈ ನಿರ್ಧಾರದಿಂದ ಶೇ 75 ರಷ್ಟು ಮಹಿಳಾ ನೌಕರರಿಗೆ ಇದರ ಪ್ರಯೋಜನ ಸಿಗಲಿದೆ. ಸರ್ಕಾರದ ಈ ಮಹತ್ವದ ಆದೇಶಕ್ಕೆ ರಾಜ್ಯ ಸರ್ಕಾರಿ ನೌಕರರ ಪರವಾಗಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರಿಗೆ ಧನ್ಯವಾದ ಸಲ್ಲಿಸುತ್ತೇನೆ’ ಎಂದು ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಸಿ.ಎಸ್.ಷಡಾಕ್ಷರಿ ತಿಳಿಸಿದ್ದಾರೆ.

× Chat with us