ಬೆಂಗಳೂರು : ಕಾಂಗ್ರೆಸ್ ಪ್ರಣಾಳಿಕೆಯಲ್ಲಿ ಬಜರಂಗದಳ ನಿಷೇಧ ಪ್ರಸ್ತಾಪವಾಗುತ್ತಿದ್ದಂತೆ ಹಿಂದೂಪರ ಸಂಘಟನೆಗಳು ಸಿಡಿದೆದ್ದಿವೆ. ರಾಜ್ಯದ ಬಹುತೇಕ ಕಡೆಗಳಲ್ಲಿ ವ್ಯಾಪಕ ಟೀಕೆ ವ್ಯಕ್ತವಾಗುತ್ತಿದೆ. ಇದು ಚುನಾವಣೆಯ ದೃಷ್ಟಿಯಿಂದ ಕಾಂಗ್ರೆಸ್ಗೆ ಹಿನ್ನೆಡೆ ಆಗಬಹುದು ಎಂದು ರಾಜಕೀಯ ಪಂಡಿತರು ಲೆಕ್ಕಾಚಾರ ಹಾಕಿದ್ದಾರೆ. ಇದೀಗ ಬಜರಂಗದಳ ನಿಷೇಧ ಮಾಡುತ್ತೇವೆ ಎಂದಿರುವುದಕ್ಕೆ ಕಾಂಗ್ರೆಸ್ನ ಕೆಲ ಹಿರಿಯ ನಾಯಕರ ಅಸಮಾಧಾನಕ್ಕೆ ಕಾರಣವಾಗಿದ್ದು, ಸ್ವಪಕ್ಷೀಯರಿಂದಲೇ ವಿರೋಧ ವ್ಯಕ್ತವಾಗುತ್ತಿದೆ.
ಪ್ರಣಾಳಿಕೆ ಸಿದ್ಧಪಡಿಸುವ ವೇಳೆ ನಮ್ಮ ಅಭಿಪ್ರಾಯ ಸಂಗ್ರಹಿಸಬೇಕಿತ್ತು. ನಮ್ಮ ಸಲಹೆಗಳನ್ನು ಸ್ವೀಕರಿಸದೆ ಪ್ರಣಾಳಿಕೆ ಸಿದ್ಧಪಡಿಸಲಾಗಿದೆ. ಇದು ಚುನಾವಣೆಯ ಹೊತ್ತಿನಲ್ಲಿ ಬಿಜೆಪಿಗೆ ಲಾಭ ಮಾಡಿಕೊಟ್ಟಂತಾಗಿದೆ. ಕೆಲವು ಸೂಕ್ಷ್ಮ ವಿಚಾರಗಳನ್ನು ಗಮನಿಸದೆ ಪ್ರಣಾಳಿಕೆ ಸಿದ್ಧಪಡಿಸಿದರೆ ಇಂತಹ ಎಡವಟ್ಟು ಆಗುತ್ತದೆ ಎಂದು ಕೆಲ ಕಾಂಗ್ರೆಸ್ನ ಹಿರಿಯ ನಾಯಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಬಜರಂಗದಳ ಬ್ಯಾನ್ ವಿಚಾರ ‘ಕೈ’ ನಾಯಕರಲ್ಲೇ ಅಸಮಾಧಾನ ಉಂಟಾಗಿರುವ ಹಿನ್ನೆಲೆ, ನಿಷೇಧ ಕೈಬಿಡಬೇಕೋ, ಉಳಿಸಿಕೊಳ್ಳಬೇಕೋ ಎಂಬ ಗೊಂದಲ ಇದೀಗ ಕಾಂಗ್ರೆಸ್ ವಲಯದಲ್ಲಿ ಏರ್ಪಟ್ಟಿದೆ. ಕೆಲ ಕಾಂಗ್ರೆಸ್ ಹಿರಿಯ ನಾಯಕರು ನಿಷೇಧ ಕೈಬಿಡುವಂತೆ ಒತ್ತಾಯಿಸಿದ್ದಾರೆ. ಆದರೆ ಇನ್ನು ಕೆಲ ನಾಯಕರು ಯಾವುದೇ ಕಾರಣಕ್ಕೂ ಪ್ರಣಾಳಿಕೆಯಲ್ಲಿ ತಿಳಿಸಿದ್ದ ಭರವಸೆಯನ್ನು ಕೈಬಿಡಬಾರದು ಎಂದು ಪಟ್ಟು ಹಿಡಿದಿದ್ದಾರೆ ಎನ್ನಲಾಗಿದೆ.
ವಿವಾದವನ್ನು ಸಮರ್ಥವಾಗಿ ಎದುರಿಸೋಣ : ಒಂದು ವೇಳೆ ಬಜರಂಗದಳ ಸಂಘಟನೆಯನ್ನು ನಿಷೇಧ ಮಾಡುತ್ತೇವೆ ಎಂದು ಹೇಳಿರುವುದನ್ನು ಹಿಂತೆಗೆದರೆ ಬಿಜೆಪಿ ಶರಣಾದಂತೆ ಆಗುತ್ತದೆ. ತಪ್ಪು ಮಾಡಿದ್ದೇವೆ ಎಂದು ಬಹಿರಂಗವಾಗಿ ಒಪ್ಪಿಕೊಂಡಿದ್ದೇವೆ ಎಂಬ ಸಂದೇಶ ರಾಜ್ಯದ ಜನತೆಗೆ ರವಾನೆಯಾಗಲಿದೆ. ಹೀಗಾಗಿ ಸದ್ಯ ವಿವಾದಕ್ಕೆ ಕಾರಣವಾಗಿರುವ ವಿಚಾರವನ್ನು ಸಮರ್ಥವಾಗಿ ಎದುರಿಸೋಣ ಎಂದು ಕೆಲ ಕಾಂಗ್ರೆಸ್ ನಾಯಕರು ಸೂಚನೆ ನೀಡಿದ್ದಾರೆ ಎಂದು ಹೇಳಲಾಗಿದೆ.
ರಾಮನಗರ: ಕಲ್ಲು ಕ್ವಾರಿಯಲ್ಲಿ ಬಂಡೆ ಕುಸಿದು 7 ಮಂದಿ ಕಾರ್ಮಿಕರು ಸಾವನ್ನಪ್ಪಿರುವ ಘಟನೆ ಬೆಂಗಳೂರು ದಕ್ಷಿಣ ತಾಲ್ಲೂಕಿನ ಮಾದಾಪಟ್ಟಣ ಬಳಿ…
ಮಡಿಕೇರಿ: ಕೊಡಗು ಜಿಲ್ಲೆಯಾದ್ಯಂತ ಕಳೆದ ಎರಡು ದಿನಗಳಿಂದ ಸಾಧಾರಣ ಮಳೆಯಾಗುತ್ತಿರುವ ಪರಿಣಾಮ ಹಾರಂಗಿ ಜಲಾಶಯಕ್ಕೆ ಒಳಹರಿವಿನ ಪ್ರಮಾಣ ಹೆಚ್ಚಾಗಿದೆ. ಜಲಾಶಯಕ್ಕೆ…
ಮಂಡ್ಯ ಜಿಲ್ಲೆಯ ಮುತ್ತತ್ತಿಯಲ್ಲಿ ಕಾವೇರಿ ನದಿ ನೀರಿಗೆ ಇಳಿದು ಸೆಲ್ಛಿ ತೆಗೆದುಕೊಳ್ಳಲು ಹೋದ ಒಂದೇ ಕುಟುಂಬದ ನಾಲ್ವರು ಹಾಗೂ ಕಾರು…
ಚಿಕ್ಕಬಳ್ಳಾಪುರ ಶಾಸಕರಾದ ಪ್ರದೀಪ್ ಈಶ್ವರ್ ಅವರ ಮೇಲೆ ಜಾ.ದಳ ಕಾರ್ಯಕರ್ತರೊಬ್ಬರು ಚಪ್ಪಲಿಯನ್ನು ಎಸೆದಿದ್ದು, ಈಗಾಗಲೇ ಆ ಕಾರ್ಯಕರ್ತನನ್ನು ಪೊಲೀಸರು ಬಂಧಿಸಿದ್ದಾರೆ.…
ಸರ್ಕಾರದ ಯಾವುದೇ ಯೋಜನೆ, ಕಾರ್ಯಕ್ರಮ, ಸವಲತ್ತು ಮೊದಲು ದಲಿತ, ದಮನಿತ, ಶೋಷಿತ ವರ್ಗಕ್ಕೆ ತಲುಪಬೇಕು. ಅವರು ಸಾಮಾಜಿಕವಾಗಿ, ಆರ್ಥಿಕವಾಗಿ ಮೇಲೆ…
ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಬಿಡದಿ ಟೌನ್ ಶಿಪ್ ನಿರ್ಮಾಣ ಮಾಡುವ ಮೊದಲು ಮತ್ತೊಮ್ಮೆ ಅದರ ಸಾಧಕ ಬಾಧಕಗಳ ಬಗ್ಗೆ ಯೋಚಿಸಿ…