BREAKING NEWS

ಪ್ರಣಾಳಿಕೆಯಲ್ಲಿ ಬಜರಂಗದಳ ಬ್ಯಾನ್ ಪ್ರಸ್ತಾಪ ‘ಕೈ’ ನಾಯಕರಲ್ಲೇ ಗೊಂದಲ : ನಿಷೇಧ ಕೈಬಿಡುವಂತೆ ಹಲವರಿಂದ ಒತ್ತಾಯ

ಬೆಂಗಳೂರು : ಕಾಂಗ್ರೆಸ್ ಪ್ರಣಾಳಿಕೆಯಲ್ಲಿ ಬಜರಂಗದಳ ನಿಷೇಧ ಪ್ರಸ್ತಾಪವಾಗುತ್ತಿದ್ದಂತೆ ಹಿಂದೂಪರ ಸಂಘಟನೆಗಳು ಸಿಡಿದೆದ್ದಿವೆ. ರಾಜ್ಯದ ಬಹುತೇಕ ಕಡೆಗಳಲ್ಲಿ ವ್ಯಾಪಕ ಟೀಕೆ ವ್ಯಕ್ತವಾಗುತ್ತಿದೆ. ಇದು ಚುನಾವಣೆಯ ದೃಷ್ಟಿಯಿಂದ ಕಾಂಗ್ರೆಸ್​ಗೆ ಹಿನ್ನೆಡೆ ಆಗಬಹುದು ಎಂದು ರಾಜಕೀಯ ಪಂಡಿತರು ಲೆಕ್ಕಾಚಾರ ಹಾಕಿದ್ದಾರೆ. ಇದೀಗ ಬಜರಂಗದಳ ನಿಷೇಧ ಮಾಡುತ್ತೇವೆ ಎಂದಿರುವುದಕ್ಕೆ ಕಾಂಗ್ರೆಸ್​ನ ಕೆಲ ಹಿರಿಯ ನಾಯಕರ ಅಸಮಾಧಾನಕ್ಕೆ ಕಾರಣವಾಗಿದ್ದು, ಸ್ವಪಕ್ಷೀಯರಿಂದಲೇ ವಿರೋಧ ವ್ಯಕ್ತವಾಗುತ್ತಿದೆ.

ಪ್ರಣಾಳಿಕೆ ಸಿದ್ಧಪಡಿಸುವ ವೇಳೆ ನಮ್ಮ ಅಭಿಪ್ರಾಯ ಸಂಗ್ರಹಿಸಬೇಕಿತ್ತು. ನಮ್ಮ ಸಲಹೆಗಳನ್ನು ಸ್ವೀಕರಿಸದೆ ಪ್ರಣಾಳಿಕೆ ಸಿದ್ಧಪಡಿಸಲಾಗಿದೆ. ಇದು ಚುನಾವಣೆಯ ಹೊತ್ತಿನಲ್ಲಿ ಬಿಜೆಪಿಗೆ ಲಾಭ ಮಾಡಿಕೊಟ್ಟಂತಾಗಿದೆ. ಕೆಲವು ಸೂಕ್ಷ್ಮ ವಿಚಾರಗಳನ್ನು ಗಮನಿಸದೆ ಪ್ರಣಾಳಿಕೆ ಸಿದ್ಧಪಡಿಸಿದರೆ ಇಂತಹ ಎಡವಟ್ಟು ಆಗುತ್ತದೆ ಎಂದು ಕೆಲ ಕಾಂಗ್ರೆಸ್​ನ ಹಿರಿಯ ನಾಯಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಬಜರಂಗದಳ ಬ್ಯಾನ್ ವಿಚಾರ ‘ಕೈ’ ನಾಯಕರಲ್ಲೇ ಅಸಮಾಧಾನ ಉಂಟಾಗಿರುವ ಹಿನ್ನೆಲೆ, ನಿಷೇಧ ಕೈಬಿಡಬೇಕೋ, ಉಳಿಸಿಕೊಳ್ಳಬೇಕೋ ಎಂಬ ಗೊಂದಲ ಇದೀಗ ಕಾಂಗ್ರೆಸ್ ವಲಯದಲ್ಲಿ ಏರ್ಪಟ್ಟಿದೆ. ಕೆಲ ಕಾಂಗ್ರೆಸ್ ಹಿರಿಯ ನಾಯಕರು ನಿಷೇಧ ಕೈಬಿಡುವಂತೆ ಒತ್ತಾಯಿಸಿದ್ದಾರೆ. ಆದರೆ ಇನ್ನು ಕೆಲ ನಾಯಕರು ಯಾವುದೇ ಕಾರಣಕ್ಕೂ ಪ್ರಣಾಳಿಕೆಯಲ್ಲಿ ತಿಳಿಸಿದ್ದ ಭರವಸೆಯನ್ನು ಕೈಬಿಡಬಾರದು ಎಂದು ಪಟ್ಟು ಹಿಡಿದಿದ್ದಾರೆ ಎನ್ನಲಾಗಿದೆ.

ವಿವಾದವನ್ನು ಸಮರ್ಥವಾಗಿ ಎದುರಿಸೋಣ : ಒಂದು ವೇಳೆ ಬಜರಂಗದಳ ಸಂಘಟನೆಯನ್ನು ನಿಷೇಧ ಮಾಡುತ್ತೇವೆ ಎಂದು ಹೇಳಿರುವುದನ್ನು ಹಿಂತೆಗೆದರೆ ಬಿಜೆಪಿ ಶರಣಾದಂತೆ ಆಗುತ್ತದೆ. ತಪ್ಪು ಮಾಡಿದ್ದೇವೆ ಎಂದು ಬಹಿರಂಗವಾಗಿ ಒಪ್ಪಿಕೊಂಡಿದ್ದೇವೆ ಎಂಬ ಸಂದೇಶ ರಾಜ್ಯದ ಜನತೆಗೆ ರವಾನೆಯಾಗಲಿದೆ. ಹೀಗಾಗಿ ಸದ್ಯ ವಿವಾದಕ್ಕೆ ಕಾರಣವಾಗಿರುವ ವಿಚಾರವನ್ನು ಸಮರ್ಥವಾಗಿ ಎದುರಿಸೋಣ ಎಂದು ಕೆಲ ಕಾಂಗ್ರೆಸ್ ನಾಯಕರು ಸೂಚನೆ ನೀಡಿದ್ದಾರೆ ಎಂದು ಹೇಳಲಾಗಿದೆ.

lokesh

Recent Posts

ಎಸ್ಐಆರ್ ಪ್ರಕ್ರಿಯೆ ರದ್ದಾಗಬೇಕು: ಸಚಿವ ಯತೀಂದ್ರ ಸಿದ್ದರಾಮಯ್ಯ

ಮೈಸೂರು: ರಾಜ್ಯದಲ್ಲಿ ನಡೆಯುತ್ತಿರುವ ಎಸ್ಐಆರ್ ಪ್ರಕ್ರಿಯೆ ರದ್ದಾಗಬೇಕು ಎಂದು ಸಚಿಚ ಯತೀಂದ್ರ ಸಿದ್ದರಾಮಯ್ಯ ಆಗ್ರಹಿಸಿದ್ದಾರೆ. ಈ ಬಗ್ಗೆ ಮೈಸೂರಿನಲ್ಲಿಂದು ಸುದ್ದಿಗಾರರ…

10 hours ago

ನಾಡಹಬ್ಬ ಮೈಸೂರು ದಸರಾ: ಸಂಪ್ರದಾಯದಂತೆ ಪ್ರಮೋದಾ ದೇವಿ ಒಡೆಯರ್ ಗೆ ಆಹ್ವಾನ

ಮೈಸೂರು: ಮೈಸೂರು ದಸರಾ ಮಹೋತ್ಸವ ರಂಗೇರುತ್ತಿದೆ. ರಾಜವಂಶಸ್ಥರಾದ ಪ್ರಮೋದಾ ದೇವಿ ಒಡೆಯರ್ ಅವರಿಗೆ ದಸರಾಗೆ ಆಹ್ವಾನಿಸಲಾಗಿದೆ. ಈ ಬಗ್ಗೆ ಮಾತನಾಡಿದ…

10 hours ago

ಕೊಡಗು: ಭಾರೀ ಗಾಳಿ ಮಳೆಗೆ ಪಿಕಪ್ ವಾಹನದ ಮೇಲೆ ಬಿದ್ದ ಮರ: ಕೂದಲೆಳೆಯಲ್ಲಿ ಪಾರಾದ ಚಾಲಕ

ಕೊಡಗು: ಭಾರೀ ಗಾಳಿ ಮಳೆಗೆ ಪಿಕಪ್ ವಾಹನದ ಮೇಲೆ ಮರ ಬಿದ್ದಿದ್ದು, ಕೂದಲೆಳೆ ಅಂತರದಲ್ಲಿ ಚಾಲಕ ಪಾರಾಗಿದ್ದಾನೆ. ಕೂಡುಮಂಗಳೂರು ದೊಡ್ಡಮ್ಮತಾಯಿ…

17 hours ago

ಓದುಗರ ಪತ್ರ: ಗೊಬ್ಬಳಿ ಮರ ಬಸ್‌ನಿಲ್ದಾಣದ ಆವರಣ ಸ್ವಚ್ಛವಾಗಿರಲಿ

ಸಾಂಸ್ಕೃತಿಕ ನಗರಿ ಮೈಸೂರಿನ ದಕ್ಷಿಣ ಭಾಗದ ಜೆ. ಪಿ. ನಗರದ ಅಕ್ಕಮಹಾದೇವಿ ರಸ್ತೆಯ ಗೊಬ್ಬಳಿ ಮರ ಬಸ್ ನಿಲ್ದಾಣವು ಪ್ರತಿನಿತ್ಯ…

17 hours ago

ಓದುಗರ ಪತ್ರ: ಮಹಾತ್ಮರ ರಾಮರಾಜ್ಯದ ಕಲ್ಪನೆಯ ಸಂದೇಶ ಸಾಕಾರಗೊಳ್ಳಲಿ

ಗಾಂಧಿ ಜಯಂತಿಯಾದ ಅ.೨ರಂದು ದೇಶಾದ್ಯಂತ ರಾಷ್ಟ್ರಪಿತ ಮಹಾತ್ಮ ಗಾಂಧಿಯವರನ್ನು ನೆನೆಯಲಾಗುತ್ತದೆ. ಬಾಪು ಎಂದೇ ಕರೆಯಲ್ಪಡುವ ಗಾಂಧೀಜಿ ಈ ದೇಶದ ಸ್ವಾತಂತ್ರಕ್ಕಾಗಿ…

17 hours ago

ಓದುಗರ ಪತ್ರ: ಇಬ್ಬರು ಮಹಾನ್ ನಾಯಕರ ಆಶಯ ಮುಂದಿನ ಪೀಳಿಗೆಗೆ ದಾಟಿಸಲಿ

ದೇಶದ ಇತಿಹಾಸದಲ್ಲಿ ಅಕ್ಟೋಬರ್ ೨ಕ್ಕೆ ವಿಶೇಷವಾದ ಸ್ಥಾನವಿದೆ. ಈ ದಿನ ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ ಜನ್ಮದಿನದ ಜೊತೆಗೆ, ಭಾರತದ ಮಾಜಿ…

17 hours ago