BREAKING NEWS

ದಸರಾ ಜಂಬೂ ಸವಾರಿಯಲ್ಲಿ 14 ಬಾರಿ ಅಂಬಾರಿ ಹೊತ್ತಿದ್ದ ಬಲರಾಮ ಇನ್ನಿಲ್ಲ

ಹುಣಸೂರು: ವಿಶ್ವ ವಿಖ್ಯಾತ ಮೈಸೂರು ದಸರೆಯಲ್ಲಿ 14 ಬಾರಿ ಅಂಬಾರಿ ಹೊತ್ತಿದ್ದ ಬಲರಾಮ ಭಾನುವಾರ ಕೊನೆಯುಸಿರೆಳೆದಿದ್ದಾನೆ. ತೀವ್ರ ಅಸ್ವಸ್ಥಗೊಂಡಿದ್ದ ಬಲರಾಮ ಆನೆಗೆ ನಾಗರಹೊಳೆ ಉದ್ಯಾನದ ಹುಣಸೂರು ರೇಂಜ್‌ನ ಭೀಮನಕಟ್ಟೆ ಆನೆ ಶಿಬಿರದಲ್ಲಿ ಪಶು ವೈದ್ಯರು ಚಿಕಿತ್ಸೆ ನೀಡುತ್ತಿದ್ದರು.

ಬಲರಾಮನಿಗೆ ಸುಮಾರು 67 ವರ್ಷ ಪ್ರಾಯವಾಗಿತ್ತು ಕಳೆದ ಕಳೆದ ಹತ್ತು ದಿನಗಳಿಂದ ಬಾಯಿಯಲ್ಲಿ ಹುಣ್ಣಾಗಿ ನಿತ್ರಾಣಗೊಂಡಿದ್ದ, ಬಲರಾಮನಿಗೆ ಟಿ.ಬಿ.(ಕ್ಷಯ) ಇರಬಹುದೆಂದು ವೈದ್ಯರು ಶಂಕಿಸಿದ್ದರು., ವೈದ್ಯಕೀಯ ವರದಿ ಬಂದ ನಂತರವಷ್ಟೆ ಕಾಯಿಲೆ ಕುರಿತು ನಿಖರವಾಗಿ ತಿಳಿಯಲಿದೆ.

ಸ್ಥಳದಲ್ಲೇ ಬೀಡು ಬಿಟ್ಟಿದ್ದರು
ಆಹಾರ ಸೇವಿಸಲು, ನೀರು ಕುಡಿಯಲು ಆಗದಂತಹ ಸ್ಥಿತಿ ಉಂಟಾಗಿದ್ದರಿಂದ ನಾಗರಹೊಳೆ ಪಶುವೈದ್ಯ ಡಾ.ರಮೇಶ್ ಸ್ಥಳದಲ್ಲೇ ಮೊಕ್ಕಾಂ ಹೂಡಿ ಚಿಕಿತ್ಸೆ ನೀಡುತ್ತಿದ್ದರು. ನಾಗರಹೊಳೆ ಮುಖ್ಯಸ್ಥ ಹರ್ಷಕುಮಾರ್ ಚಿಕ್ಕನರಗುಂದ ಮಾರ್ಗದರ್ಶನದಲ್ಲಿ ಆರ್‌ಎಫ್‌ಓ ರತ್ನಾಕರ್, ಡಿಆರ್‌ಎಫ್‌ಓ ಸಿದ್ದರಾಜು ನೇತೃತ್ವದ ತಂಡ ಹಾಗೂ ಬಲರಾಮನ ಮಾವುತ ತಿಮ್ಮ, ಕವಾಡಿ ಮಂಜನಾಥ ಹಾಗೂ ಸಿಬಂದಿ ಸ್ಥಳದಲ್ಲೇ ಇದ್ದು, ಅಸ್ವಸ್ಥ ಬಲರಾಮನ ಆರೈಕೆಯಲ್ಲಿ ತೊಡಗಿಸಿಕೊಂಡಿದ್ದರು.

andolanait

Recent Posts

ಮೈಸೂರು ದಸರಾ | ಯುವ ಸಂಭ್ರಮ ಉದ್ಘಾಟನೆಗೆ ವಿಜಯಪ್ರಕಾಶ್‌

ಮೈಸೂರು : ದಸರಾ ಮಹೋತ್ಸವಕ್ಕೆ ಆರಂಭದ ಮುನ್ನುಡಿಯಂತಿರುವ ಯುವ ಸಂಭ್ರಮಕ್ಕೆ ಈ ಬಾರಿ ಮೈಸೂರಿನ ಮನೆ ಮಗ ಖ್ಯಾತ ಗಾಯಕ…

4 hours ago

ಕೊಡಗು: ಕೆಲಸಕ್ಕೆ ತೆರಳುತ್ತಿದ್ದ ಕಾರ್ಮಿಕರ ಮೇಲೆ ಕಾಡಾನೆ ದಾಳಿ

ಕೊಡಗು: ಜಿಲ್ಲೆಯ ನೆಲ್ಯಹುದಿಕೇರಿ ಸಮೀಪದ ಅತ್ತಿಮಂಗಲದಲ್ಲಿ ಕೆಲಸಕ್ಕೆ ತೆರಳುತ್ತಿದ್ದ ಕಾರ್ಮಿಕರ ಮೇಲೆ ಕಾಡಾನೆ ದಾಳಿ ನಡೆಸಿದೆ. ಸ್ಕೂಟರ್‌ನಲ್ಲಿ ತೆರಳುತ್ತಿದ್ದ 60…

9 hours ago

ಓದುಗರ ಪತ್ರ: ಗ್ರಹಣ..!

ಗ್ರಹಣ..! ಸೂರ್ಯ-ಚಂದ್ರರ ನಡುವೆ ಭೂಮಿ ಬಂದರೆ ಚಂದ್ರ ಗ್ರಹಣ ! ಭಾರತ-ರಷ್ಯಾ ನಡುವೆ ಅಮೆರಿಕ ಬಂದರೆ ‘ಸುಂಕ ’ ಗ್ರಹಣ…

13 hours ago

ಓದುಗರ ಪತ್ರ: ಪೆಟ್ರೋಲ್ ಬಂಕ್‌ಗಳಲ್ಲಿ ಮೋಸ: ಗರಿಷ್ಟ ಕ್ರಮ ಕೈಗೊಳ್ಳಲಿ

ರಾಜ್ಯದ ೮೦೫ ಪೆಟ್ರೋಲ್ ಬಂಕ್‌ಗಳ ತಪಾಸಣೆಯಲ್ಲಿ ಬರೋಬ್ಬರಿ ೭೬೮ ಬಂಕ್‌ಗಳಲ್ಲಿ (ಶೇ. ೮೫ ರಷ್ಟು) ಅಳತೆಯಲ್ಲಿ ಮೋಸ ಕಂಡುಬಂದಿರುವುದು ಸಾರ್ವಜನಿಕರಿಗೆ…

13 hours ago

ಓದುಗರ ಪತ್ರ: ಉದ್ಯೋಗ ಸೃಷ್ಟಿ : ಫ್ಲಿಪ್‌ಕಾರ್ಟ್ ನಡೆ ಸ್ವಾಗತಾರ್ಹ

ಒಂದು ಕಡೆ ಒರಾಕಲನಂತಹ ಕಂಪೆನಿಗಳು ತಮ್ಮ ನೌಕರರನ್ನು ಯಾವುದೇ ಮುನ್ಸೂಚನೆ ನೀಡದೇ ಕೇವಲ ಒಂದೇ ಒಂದು ಇ ಮೇಲ್ ಸಂದೇಶದ…

13 hours ago

ಸುಗಮ ಸಂಗೀತದ ಅದ್ಬುತ ಗಾಯಕ ಮಡಿಕೇರಿ ನಾಗೇಂದ್ರ

ಡಾ.ಕೆ.ವಿ.ಲಕ್ಷ್ಮೀದೇವಿ, ಗುರುಕೃಪಾ ಸಂಗೀತ ಕೇಂದ್ರ, ಮೈಸೂರು ಇಂದು ಗುರು ನಮನ ಮಡಿಕೇರಿ ನಾಗೇಂದ್ರರೆಂದೇ ಪ್ರಖ್ಯಾತರಾದ ‘ಗುರು ಕೃಪಾ ಸಂಗೀತ ಕೇಂದ್ರ’ದ…

16 hours ago