ಬೆಂಗಳೂರು : ಕಾವೇರಿ ಉಳಿವಿಗಾಗಿ ಬೆಂಗಳೂರು ಗ್ರಾಮಾಂತರ-ಬೆಂಗಳೂರು ಬಂದ್‍ನ ಪರಿಣಾಮ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಮೇಲೆ ಪರಿಣಾಮ ಬೀರಿದೆ.
ಬೆಂಗಳೂರು ಬಂದ್ ಹಿನ್ನೆಲೆಯಲ್ಲಿ ಕೊನೆ ಕ್ಷಣದಲ್ಲಿ ಪ್ರಯಾಣಿಕರು ಬೆಂಗಳೂರು ಪ್ರಯಾಣ ರದ್ದು ಮಾಡಿರುವ ಹಿನ್ನೆಲೆಯಲ್ಲಿ 13 ದೇಶೀಯ ವಿಮಾನಗಳ ಆಗಮನ ಕೊನೆ ಕ್ಷಣದಲ್ಲಿ ರದ್ದಾಗಿದೆ. ದೆಹಲಿ, ಕೊಚ್ಚಿ, ಮಂಗಳೂರು, ಮುಂಬೈ ಸೇರಿದಂತೆ ಇತರೆ 13 ವಿಮಾನಗಳ ಹಾರಾಟವನ್ನು ಏರ್ ಲೈನ್ಸ್ ನವರು ಕೊನೆ ಕ್ಷಣದಲ್ಲಿ ರದ್ದು ಮಾಡಿದ್ದಾರೆ.
ಹೀಗಾಗಿ ಸಹಜವಾಗಿ ಏರ್‌ಪೋರ್ಟ್ ನಲ್ಲಿ ಪ್ರಯಾಣಿಕರ ಸಂಖ್ಯೆಯಲ್ಲಿ ಕಡಿಮೆಯಾಗಿದ್ದು, ಪರೋಕ್ಷವಾಗಿ ಇದು ಕ್ಯಾಬ್ ಚಾಲಕರ ಮೇಲೂ ಪರಿಣಾಮ ಬೀರಿದೆ. ಪ್ರಯಾಣಿಕರಿಗಾಗಿ ಕ್ಯಾಬ್ ಚಾಲಕರು ಗಂಟೆಗಟ್ಟಲೆ ಕಾಯಬೇಕಾದ ಅನಿವಾರ್ಯತೆ ಎದುರಾಗಿದೆ.
ಇತ್ತ ಏರ್‌ಪೋರ್ಟ್‌ಗೆ ಆಗಮಿಸುವ ಹಾಗೂ ನಿರ್ಗಮಿಸುವ ಪ್ರಯಾಣಿಕರ ಸಂಖ್ಯೆಯಲ್ಲಿ ಕೊಂಚ ಕಡಿಮೆಯಾಗಿದೆ. ಬೆಂಗಳೂರು ಬಂದ್ ಹಿನ್ನೆಲೆಯಲ್ಲಿ ದೇಶದ ಬೇರೆ ಬೇರೆ ಭಾಗಗಳಿಂದ ಬೆಂಗಳೂರಿಗೆ ಬರುವವರ ಸಂಖ್ಯೆಯಲ್ಲಿ ಕಡಿತಗೊಂಡಿದೆ. ಏರ್‌ಪೋರ್ಟ್ ನಿಂದ ಬೇರೆ ಕಡೆಗೆ ತೆರಳುವವರ ಸಂಖ್ಯೆಯಲ್ಲಿ ಅಲ್ಪ ಪ್ರಮಾಣದ ಇಳಿಕೆಯಾಗಿದ್ದು, ಕ್ಯಾಬ್ ಚಾಲಕರ ಮೇಲೆ ಪರಿಣಾಮ ಬೀರಿದೆ.
ಸಹಜವಾಗಿ ಏರ್‌ಪೋರ್ಟ್ ನ ಟರ್ಮಿನಲ್ 1 ರಲ್ಲಿ ದೇಶದ ಇತರೆ ಭಾಗಗಳಿಂದ ಬರುವ ಪ್ರಯಾಣಿಕರ ಸಂಖ್ಯೆ ಸರಾಸರಿ 27-24 ಸಾವಿರ ಇದ್ದು ಆದ್ರೆ ಇಂದು 25000 ಕ್ಕೆ ಇಳಿದಿದೆ. ಹೀಗಾಗಿ ಸಹಜವಾಗಿ ಕ್ಯಾಬ್ ಚಾಲಕರಿಗೆ ಇದು ಹಿನ್ನೆಡೆಯಾಗಿದ್ದು ಪ್ರಯಾಣಿಕರು ಬಾರದೆ ಪ್ರಯಾಣಿಕರಿಗಾಗಿ ಕ್ಯಾಬ್ ಚಾಲಕರು ಕಾಯುವಂತಾಗಿದೆ.
ಹನೂರು: ತಾಲ್ಲೂಕಿನ ಮಹದೇಶ್ವರ ಬೆಟ್ಟಕ್ಕೆ ತೆರಳುತ್ತಿದ್ದ ಕಾರು ಚಾಲಕನ ನಿಯಂತ್ರಣ ತಪ್ಪಿ ಹಳ್ಳಕ್ಕೆ ಪಲ್ಟಿಯಾಗಿ ಇಬ್ಬರು ಗಾಯಗೊಂಡಿರುವ ಘಟನೆ ಜರುಗಿದೆ.…
ಕಲಬುರ್ಗಿ: ಸಂವಿಧಾನದ ವಿಧಿ 371 ( ಜೆ ) ಜಾರಿಗೆ ಬಂದ ನಂತರ ಕಲ್ಯಾಣ ಕರ್ನಾಟಕ ಭಾಗದಲ್ಲಿ ಶೈಕ್ಷಣಿಕ ಹಾಗೂ…
ಬೆಂಗಳೂರು: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ವಿರುದ್ಧ ಅವಾಚ್ಯ ಪದ ಬಳಕೆ ಪ್ರಕರಣ ವಿಚಾರವಾಗಿ ವಿಧಾನ ಪರಿಷತ್ ಸದಸ್ಯ ಸಿ.ಟಿ.ರವಿ ಅವರನ್ನು…
ಬೆಂಗಳೂರು: ಬಿಜೆಪಿ ವಿಧಾನ ಪರಿಷತ್ ಶಾಸಕ ಸಿ.ಟಿ.ರವಿ ಬಂಧನಕ್ಕೆ ಸಂಬಂಧಿಸಿದಂತೆ ಕರ್ನಾಟಕದಲ್ಲಿ ಪ್ರಜಾಪ್ರಭುತ್ವ ಕೊನೆಯುಸಿರೆಳೆಯುತ್ತಿದೆಯೇ ಎನ್ನುವುದು ನನ್ನ ಅನುಮಾನ ಎಂದು…
ಮಂಡ್ಯ: 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಉದ್ಘಾಟನೆ ಸಮಾರಂಭದಲ್ಲಿ ಮಾತನಾಡಿದ ಕೃಷಿ ಹಾಗೂ ಮಂಡ್ಯ ಜಿಲ್ಲಾ ಉಸ್ತುವಾರಿ…
ಮಂಡ್ಯ: ಸಕ್ಕರೆ ನಾಡು ಮಂಡ್ಯ ನಗರಿಯಲ್ಲಿ ಮೂರು ದಿನಗಳ ಕಾಲ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ನಡೆಯುತ್ತಿದ್ದು,…