BREAKING NEWS

ಬೆಂಗಳೂರು- ಮೈಸೂರು ಎಕ್ಸ್‌ಪ್ರೆಸ್‌ ವೇ: ಟೋಲ್ ದರ ಭಾರೀ ಹೆಚ್ಚಳ

ಬೆಂಗಳೂರು: ಟೋಲ್ ಸಂಗ್ರಹ ಆರಂಭವಾದ 17 ದಿನಗಳಲ್ಲೇ ಮತ್ತೆ ಟೋಲ್ ದರ ಹೆಚ್ಚಳವಾಗುವ ಮೂಲಕ ಬೆಂಗಳೂರು- ಮೈಸೂರು ದಶಪಥ ಹೆದ್ದಾರಿ ವಾಹನ ಸವಾರರಿಗೆ ಮತ್ತೆ ಬರೆ ಬಿದ್ದಿದೆ. ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ ವೇ ಸಂಚಾರ ಇದೀಗ ಮತ್ತಷ್ಟು ದುಬಾರಿಯಾಗಿದೆ.

ನಾಳೆಯಿಂದ(ಏ.01) ಶೇಕಡಾ 22ರಷ್ಟು ಟೋಲ್ ದರ ಹೆಚ್ಚಳ ಮಾಡಲಾಗಿದೆ. ರಾಷ್ಟ್ರೀಯ ಹೆದ್ದಾರಿ ಶುಲ್ಕ ನಿಯಮ 2008ರ ಪ್ರಕಾರ ದರ ಹೆಚ್ಚಳ ಮಾಡಲಾಗಿದೆ. ಟೋಲ್ ದರ ಹೆಚ್ಚಳಕ್ಕೆ ಸಾರ್ವಜನಿಕರಿಂದ ಭಾರೀ ಆಕ್ರೋಶ ವ್ಯಕ್ತವಾಗಿದೆ. ಹೆದ್ದಾರಿ ಪ್ರಾಧಿಕಾರ ಜನಸಾಮಾನ್ಯರನ್ನು ಲೂಟಿ ಮಾಡುತ್ತಿದೆ ಎಂದು ಕಿಡಿಕಾರಿದ್ದಾರೆ.

ಹೀಗಿರಲಿದೆ ಪರಿಷ್ಕೃತ ದರ:

ಕಾರು/ವ್ಯಾನ್/ಜೀಪ್: ಏಕಮುಖ ಸಂಚಾರ 165 ರೂ(30ರೂ ಹೆಚ್ಚಳ). ದ್ವಿಮುಖ ಸಂಚಾರ – 250 ರೂ(45ರೂ ಹೆಚ್ಚಳ).

ಲಘು ವಾಹನಗಳು/ಮಿನಿ ಬಸ್: ಏಕಮುಖ ಸಂಚಾರ 270 ರೂ.(50ರೂ ಹೆಚ್ಚಳ) ದ್ವಿಮುಖ ಸಂಚಾರ -405 ರೂ.(75 ರೂ. ಹೆಚ್ಚಳ)

ಟ್ರಕ್/ ಬಸ್/ಎರಡು ಆಕ್ಸೆಲ್ ವಾಹನ: ಏಕಮುಖ ಸಂಚಾರ 565 ರೂ(165 ರೂ ಹೆಚ್ಚಳ), ದ್ವಿಮುಖ ಸಂಚಾರ – 850 ರೂ(160 ರೂ.ಹೆಚ್ಚಳ)

ತ್ರಿ ಆಕ್ಸೆಲ್ ವಾಣಿಜ್ಯ ವಾಹನಗಳು: ಏಕಮುಖ ಸಂಚಾರ 615 ರೂ.(115ರೂ ಹೆಚ್ಚಳ), ದ್ವಿ ಮುಖಸಂಚಾರ – 925 ರೂ.( 225 ರೂ.ಹೆಚ್ಚಳ)

ಭಾರೀ ಕಟ್ಟಡ ನಿರ್ಮಾಣ ವಾಹಗನಳು/ಅರ್ಥ್ ಮೂವರ್ಸ್/4-6 ಆಕ್ಸೆಲ್ ವಾಹನಗಳು: ಏಕಮುಖ ಸಂಚಾರ 885 ರೂ.(165ರೂ ಹೆಚ್ಚಳ) ದ್ವಿಮುಖ ಸಂಚಾರ – 1,330 ರೂ. ಹೆಚ್ಚಳ(250ರೂ ಹೆಚ್ಚಳ)

7 ಅಥವಾ ಅದಕ್ಕಿಂತ ಎಕ್ಸೆಲ್ ವಾಹನಗಳು: ಏಕಮುಖ ಸಂಚಾರ 1,080 ರೂ.(200ರೂ ಹೆಚ್ಚಳ) ದ್ವಿಮುಖ ಸಂಚಾರ – 1,620 ರೂ.( 305 ರೂ.ಹೆಚ್ಚಳ)

ಟೋಲ್ ದರ ಹೆಚ್ಚಿಸೋದು ಸಾಮಾನ್ಯ: ದಶಪಥ ಹೆದ್ದಾರಿ ಟೋಲ್ ದರ ಹೆಚ್ಚಳ ವಿಚಾರಕ್ಕೆ ಸಂಬಂಧಿಸಿಂತೆ ಮೈಸೂರು-ಕೊಡಗು ಬಿಜೆಪಿ ಸಂಸದ ಸಂಸದ ಪ್ರತಾಪ್ ಸಿಂಹ ಪ್ರತಿಕ್ರಿಯೆ ನೀಡಿದ್ದು, ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಪ್ರತಿ ವರ್ಷ ಟೋಲ್ ದರ ಹೆಚ್ಚಿಸುವುದು ಸಾಮಾನ್ಯ. ದೇಶದ ಎಲ್ಲ ಟೋಲ್ ದರಗಳಲ್ಲೂ ಹೆಚ್ಚಳ ಆಗಿದೆ. ಆದರೆ ಮೈಸೂರು-ಬೆಂಗಳೂರು ಹೆದ್ದಾರಿ ಮಾರ್ಚ್ 14 ರಂದು ಪ್ರಾರಂಭ ಆಗಿದೆ. ನಾನು ಈಗಾಗಲೇ ಹೈವೇ ಅಥಾರಿಟಿಯ ಹಿರಿಯ ಅಧಿಕಾರಿಗಳ ಜತೆ ಮಾತಾಡಿದ್ದೇನೆ. ಹೀಗಾಗಿ ಈ ಹೆದ್ದಾರಿಗೆ ಟೋಲ್ ದರ ಹೆಚ್ಚಳ ನಿರ್ಧಾರ ಪರಾಮರ್ಶೆ ಮಾಡಬೇಕೆಂದು ವಿನಂತಿಸಿಕೊಂಡಿದ್ದೇನೆ. ಟೋಲ್ ದರ ಯಥಾಸ್ಥಿತಿ ಮುಂದುವರೆಸುವಂತೆ ಮನವಿ ಮಾಡಿದ್ದೇನೆ. ಇವತ್ತು ಸಂಜೆಯೊಳಗೆ ಹೈವೇ ಅಥಾರಿಟಿಯವರು ತಮ್ಮ ನಿರ್ಣಯವನ್ನ ತಿಳಿಸುತ್ತಾರೆ ಅಂತ ಹೇಳಿದ್ದಾರೆ.

andolanait

Recent Posts

ಗುಂಡ್ಲುಪೇಟೆ | ಉಪಟಳ ನೀಡುತಿದ್ದ ಹುಲಿ ಸೆರೆ ; ಮತ್ತೊಂದು ದರ್ಶನ

ಗುಂಡ್ಲುಪೇಟೆ : ತಾಲ್ಲೂಕಿನ ಬೊಮ್ಮಲಾಪುರ ಬಳಿ ಅನೇಕ ದಿನಗಳಿಂದ ರೈತರಿಗೆ ಉಪಟಳ ನೀಡಿ ಜಾನುವಾರುಗಳ ಮೇಲೆ ದಾಳಿ ನಡೆಸುತ್ತಿದ್ದ ಹುಲಿಯನ್ನು…

6 hours ago

ಬೆಳ್ತಂಗಡಿ | ಮಹೇಶ್‌ ಶೆಟ್ಟಿ ತಿಮರೋಡಿ ಮತ್ತೆ ಗಡಿಪಾರು

ಬೆಳ್ತಂಗಡಿ : ಧರ್ಮಸ್ಥಳ ವಿರುದ್ಧ ಹೋರಾಟ ನಡೆಸುತ್ತಿರುವ ಮಹೇಶ್ ಶೆಟ್ಟಿ ತಿಮರೋಡಿಗೆ ಎರಡನೇ ಬಾರಿಗೆ ಗಡಿಪಾರು ಮಾಡಿ ಪುತ್ತೂರು ಎ.ಸಿ.ಆದೇಶ…

6 hours ago

ಲೋಕಸಭೆ | ವಿಭಾ ಜಿರಾಮ್‌ ಮಸೂದೆ ಅಂಗೀಕಾಋ : ಪ್ರತಿಪಕ್ಷಗಳಿಂದ ಪ್ರತಿ ಹರಿದು ಆಕ್ರೋಶ

ಹೊಸದಿಲ್ಲಿ : ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಅಸ್ತಿತ್ವದಲ್ಲಿರುವ ‘ಮನ್ರೇಗಾ ಯೋಜನೆ’(ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆ)ಯಿಂದ…

7 hours ago

ಸಿಎಂ ಕುಟುಂಬ ನಿವೇಶನ ಪಡೆದ ಪ್ರಕರಣ : ಡಿ.23ಕ್ಕೆ ವಿಚಾರಣೆ ಮುಂದೂಡಿಕೆ

ಬೆಂಗಳೂರು : ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಅವರ ಕುಟುಂಬದ ಸದಸ್ಯರು ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಈಗ ಎಂಡಿಎ)ದಿಂದ ಕಾನೂನು ಬಾಹಿರವಾಗಿ…

7 hours ago

ಭಾರತ-ಒಮಾನ್‌ ಮುಕ್ತ ವ್ಯಾಪಾರ ಒಪ್ಪಂದ : ಉಭಯ ದೇಶಗಳಿಗೂ ಶಕ್ತಿ ; ಮೋದಿ ಬಣ್ಣನೆ

ಒಮಾನ್ : ಭಾರತ ಮತ್ತು ಒಮಾನ್ ನಡುವಿನ ಸಮಗ್ರ ಆರ್ಥಿಕ ಪಾಲುದಾರಿಕೆ ಒಪ್ಪಂದ (ಸಿಇಪಿಎ) ದ್ವಿಪಕ್ಷೀಯ ಸಂಬಂಧಗಳಿಗೆ ಹೊಸ ವಿಶ್ವಾಸ…

8 hours ago

ನೇಮಕಾತಿ ವಿಳಂಬ | ಪ್ರತಿಧ್ವನಿಸಿದ ಪ್ರತಿಭಟನೆಗಳು

ಬೆಳಗಾವಿ : ಸರ್ಕಾರದ ವಿವಿಧ ಹುದ್ದೆಗಳ ನೇಮಕಾತಿ ವಿಳಂಬ ಮತ್ತು ಉದ್ಯೋಗಾಕಾಂಕ್ಷಿಗಳ ಪ್ರತಿಭಟನೆಗಳು ವಿಧಾನಸಭೆಯಲ್ಲಿ ಪ್ರತಿಧ್ವನಿಸಿದವು. ಪ್ರತಿಪಕ್ಷದ ನಾಯಕ ಆರ್.ಅಶೋಕ್…

8 hours ago