ಸಾಲಬಾಧೆಯಿಂದ ಬಾರ್ ಮಾಲೀಕ ಆತ್ಮಹತ್ಯೆ

ಮೈಸೂರು: ಸಾಲಬಾಧೆಯಿಂದ ಬಾರ್ ಓನರ್ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮೈಸೂರಿನಲ್ಲಿ ನಡೆದಿದೆ.

ಮೈಸೂರಿನ ಕುವೆಂಪುನಗರದ ವಾಸಿ ಶಿವಲಿಂಗೇಗೌಡ (38) ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಶಿವಲಿಂಗೇಗೌಡ ಅವರು ಕೆಲವು ಬಾರ್ ನಡೆಸುತ್ತಿದ್ದರು. ಈ ವೇಳೆ ವ್ಯವಹಾರಗಳಲ್ಲಿ ನಷ್ಟವಾಗಿ ಕೋಟ್ಯಾಂತರ ರೂಪಾಯಿ ಸಾಲ ಮಾಡಿಕೊಂಡಿದ್ದರು.

ಕುವೆಂಪುನಗರದ ತಮ್ಮ ನಿವಾಸದಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಪ್ರಕರಣ ಕುವೆಂಪುನಗರ ಪೋಲಿಸ್ ಠಾಣೆಯಲ್ಲಿ ದಾಖಲಾಗಿದೆ.

× Chat with us