BREAKING NEWS

ಗೃಹಲಕ್ಷ್ಮೀಗೆ ಶಾಸಕರ ವೇತನ ಬಿಟ್ಟುಕೊಟ್ಟ ಬಸವರಾಜ ರಾಯರೆಡ್ಡಿ

ಬೆಂಗಳೂರು: ಕಾಂಗ್ರೆಸ್‌ ಸರ್ಕಾರದ ಮಹತ್ವಾಕಾಂಕ್ಷೆ ಗೃಹಲಕ್ಷ್ಮೀ ಯೋಜನೆ ಜಾರಿಯಾಗಿದ್ದು, ನೋಂದಣಿ ಪ್ರಕ್ರಿಯೆ ಆರಂಭವಾಗಿದೆ. ಈ ಯೋಜನೆಗೆ ತಮ್ಮ ಶಾಸಕ ಸ್ಥಾನದ ವೇತನವನ್ನು ಮಾಜಿ ಸಚಿವ ಹಾಗೂ ಯಲಬುರ್ಗಾ ಶಾಸಕ ಬಸವರಾಜ ರಾಯರೆಡ್ಡಿ ಬಿಟ್ಟುಕೊಟ್ಟಿದ್ದಾರೆ. ಈ ಮೂಲಕ ಇತರೆ ಶಾಸಕರು ಹಾಗೂ ಸಚಿವರಿಗೆ ಕಾಂಗ್ರೆಸ್‌ನ ಹಿರಿಯ ನಾಯಕ ಬಸವರಾಜ ರಾಯರೆಡ್ಡಿ ಮಾದರಿಯಾಗಿದ್ದಾರೆ.

ರಾಜ್ಯ ಸರ್ಕಾರ ಇಷ್ಟೊಂದು ದೊಡ್ಡ ಯೋಜನೆಯನ್ನು ಜಾರಿಗೆ ತಂದಿದೆ. ಆದ್ದರಿಂದ ಸರ್ಕಾರದೊಂದಿಗೆ ಕೈ ಜೋಡಿಸುವ ಪ್ರಯುಕ್ತ ತಮ್ಮ ಪ್ರತಿ ತಿಂಗಳ ಶಾಸಕರ ವೇತನವನ್ನು ಗೃಹಲಕ್ಷ್ಮೀ ಯೋಜನೆಗೆ ನೀಡುವಂತೆ ವಿಧಾನಸಭೆ ಕಾರ್ಯದರ್ಶಿಗೆ ಕಾಂಗ್ರೆಸ್‌ನ ಹಿರಿಯ ಶಾಸಕ ಬಸವರಾಜ ರಾಯರೆಡ್ಡಿ ಪತ್ರ ಬರೆದಿದ್ದಾರೆ.

ಈ ಬಗ್ಗೆ ಪ್ರತಿಕ್ರಿಯಿಸಿರುವ ಬಸವರಾಜ ರಾಯರೆಡ್ಡಿ ಅವರು, ಈ ಹಿಂದೆಯೂ ನಾನು ಶಾಸಕ ಸ್ಥಾನದ ವೇತನವನ್ನು ಪಡೆದಿಲ್ಲ. ಆಗಲೂ ಬೇರೆ ಯೋಜನೆಗೆ ಬಿಟ್ಟುಕೊಟ್ಟಿದ್ದೆ, ಈಗ ಗೃಹಲಕ್ಷ್ಮೀ ಯೋಜನೆಗೆ ನನ್ನ ವೇತನ ಬಿಟ್ಟುಕೊಡಲು ನಿರ್ಧರಿಸಿ ಪತ್ರ ಕೊಟ್ಟಿದ್ದೇನೆ ಎಂದು ತಿಳಿಸಿದ್ದಾರೆ. ಬಸವರಾಜ ರಾಯರೆಡ್ಡಿ ಅವರು ತೆಗೆದುಕೊಂಡ ನಿರ್ಧಾರವನ್ನು ಕಾಂಗ್ರೆಸ್‌ನ ಇತರೆ ಶಾಸಕರು ಹಾಗೂ ಸಚಿವರು ಅನುಸರಿಸುತ್ತಾರಾ ಎಂಬುದನ್ನು ನೋಡಬೇಕಿದೆ.

ಇನ್ನು, ಬರ ಅಥವಾ ಪ್ರವಾಹ ಪರಿಸ್ಥಿತಿ ಸೇರಿ ಕೆಲವು ಸಂದರ್ಭದಲ್ಲಿ ಶಾಸಕರು ಹಾಗೂ ಸಚಿವರು ತಮ್ಮ ಒಂದು ತಿಂಗಳ ವೇತನವನ್ನು ಸರ್ಕಾರಕ್ಕೆ ನೀಡಿರುವ ಉದಾಹರಣೆಗಳು ಹಲವು ಇವೆ. ಆದರೆ, ಶಾಸಕರ ಅವಧಿ ಇರುವ ತನಕ ತಮ್ಮ ಶಾಸಕ ಸ್ಥಾನದ ವೇತನವನ್ನು ಯೋಜನೆಯೊಂದಕ್ಕೆ ನೀಡುವಂತೆ ವಿಧಾನಸಭೆ ಕಾರ್ಯದರ್ಶಿಗೆ ಪತ್ರ ಬರೆದುಕೊಟ್ಟಿರುವುದು ಅಪರೂಪ ಎಂತಲೇ ಹೇಳಬಹುದು.

ಶಾಸಕರಿಗೆ ಎಷ್ಟಿದೆ ಸಂಬಳ?

ಸದ್ಯ ಕರ್ನಾಟಕದಲ್ಲಿನ ಶಾಸಕರ ಮೂಲ ವೇತನ ಮಾಸಿಕ 40 ಸಾವಿರ ರೂ. ಇದೆ. ಇದರ ಜೊತೆ ಕ್ಷೇತ್ರ ಭತ್ಯೆ 60 ಸಾವಿರ ರೂ., ಕ್ಷೇತ್ರ ಪ್ರಯಾಣ ಭತ್ಯೆ 60,000 ರೂ. ಇದೆ. ತಮ್ಮ ಆಪ್ತ ಸಹಾಯಕರಿಗೆ ವೇತನ ಸೇರಿ ಇತರ ವೆಚ್ಚಗಳಿಗೆ 20,000 ರೂ., 5 ಸಾವಿರ ರೂ. ಅಂಚೆ ವೆಚ್ಚ ಹಾಗೂ ಫೋನ್‌ ಭತ್ಯೆಯಾಗಿ 20 ಸಾವಿರ ರೂ. ಅನ್ನು ಶಾಸಕರು ಪಡೆಯುತ್ತಿದ್ದಾರೆ.

andolanait

Recent Posts

ಪ್ರಸ್ತುತ ದಲಿತ ರಾಜಕಾರಣದಲ್ಲಿ ಮಹದೇವಪ್ಪ ಎಂಬ ವಿದ್ಯಮಾನ

ರಮೇಶ್‌ ಎಚ್.ಕೆ. ಶಿವಮೊಗ್ಗ ಕರ್ನಾಟಕದಲ್ಲಿ ದಲಿತ ವರ್ಗಗಳ ರಾಜಕಾರಣ ಎಂದಾಕ್ಷಣ ಕೆ. ಹೆಚ್. ರಂಗನಾಥ್, ಬಿ. ರಾಚಯ್ಯ, ಎನ್. ರಾಚಯ್ಯ,…

35 mins ago

ಬೆಂ-ಮೈ ಹೆದ್ದಾರಿಯಲ್ಲಿ ಕಾರು-ಬಸ್ ಡಿಕ್ಕಿ ; ತಪ್ಪಿದ ಭಾರೀ ಅನಾಹುತ, ಪ್ರಯಾಣಿಕರು ಪಾರು

ಮಂಡ್ಯ : ಬೆಂಗಳೂರು-ಮೈಸೂರು ದಶಪಥ ರಾಷ್ಟ್ರೀಯ ಹೆದ್ದಾರಿಯಲ್ಲಿ ಸೋಮವಾರ ಬೆಳ್ಳಂಬೆಳಗ್ಗೆ ಕಾರು ಮತ್ತು ಬಸ್ ನಡುವೆ ಅಪಘಾತ ಸಂಭವಿಸಿದೆ. ಅದೃಷ್ಟವಶಾತ್…

56 mins ago

ಅಮೆರಿಕ ವಶವಾದ ಇರಾನ್‌ ಹಡಗು ; ಸಶಸ್ತ್ರ ಕಡಲ್ಗಳ್ಳತನ ಎಂದ ಇರಾನ್‌

ವಾಷಿಂಗ್ಟನ್ : ಇರಾನ್ ಧ್ವಜವಿರುವ ಸರಕು ಹಡಗನ್ನು (ಟೂಸ್ಕಾ) ಒಮಾನ್ ಕೊಲ್ಲಿಯಲ್ಲಿ (ಹಾರ್ಮುಜ್ ಜಲಸಂಧಿ ಸಮೀಪ) ನಮ್ಮ ಭದ್ರತಾ ಪಡೆಗಳು…

1 hour ago

ದಲಿತ ಚಿಂತಕ ಧೀಮಂತ ನಾಯಕ ಡಾ.ಎಚ್.ಸಿ.ಮಹದೇವಪ್ಪ ಅವರ ಹೋರಾಟದ ಕತೆ……

‘ಆಂದೋಲನ’ ವಿಶೇಷ ಸಂದರ್ಶನದಲ್ಲಿ ಸಮಾಜ ಕಲ್ಯಾಣ ಸಚಿವ ಡಾ. ಎಚ್.ಸಿ.ಮಹದೇವಪ್ಪ ಅವರ ಮನದಾಳದ ಮಾತು ಇಲ್ಲಿದೆ ನಿರೂಪಣೆ.. ಆರ್‌.ಟಿ.ವಿಠ್ಠಲಮೂರ್ತಿ ನಾನು…

2 hours ago

ಬಿಸಿ ಗಾಳಿ ; ಸಮವಸ್ತ್ರ ಕಡ್ಡಾಯಗೊಳಿಸದಂತೆ ಜಿಲ್ಲಾಧಿಕಾರಿ ಆದೇಶ

ಚಾಮರಾಜನಗರ : ತೀವ್ರ ಬಿಸಿ ಗಾಳಿ (ಹೀಟ್ ವೇವ್) ಇರುವುದರಿಂದ ಜಿಲ್ಲೆಯ ಎಲ್ಲಾ ಖಾಸಗಿ ಅನುದಾನಿತ, ಅನುದಾನರಹಿತ ಹಾಗೂ ಸರ್ಕಾರಿ…

5 hours ago

ಪಿರಿಯಾಪಟ್ಟಣ : ಈಜಲು ನೀರಿಗಿಳಿದಿ ಯುವಕರಿಬ್ಬರು ಸಾವು

ಪಿರಿಯಾಪಟ್ಟಣ : ಕಾವೇರಿ ನದಿಯಲ್ಲಿ ಈಜಲು ಹೋಗಿ ಇಬ್ಬರು ಯುವಕರು ಸಾವಿಗೀಡಾಗಿರುವ ಘಟನೆ ದೊಡ್ಡ ಹರವೆ ಬಳಿ ನಡೆದಿದೆ. ಪಿರಿಯಾಪಟ್ಟಣದಲ್ಲಿ…

5 hours ago