ಬೆಂಗಳೂರು : ಬಿಬಿಎಂಪಿ ಗುತ್ತಿಗೆದಾರರ ಸಂಘದ ಪದಾಧಿಕಾರಿಗಳು ಮಂಗಳವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಸಿಎಂ ಗೃಹ ಕಚೇರಿ ಕೃಷ್ಣಾದಲ್ಲಿ ಭೇಟಿ ಮಾಡಿ ಬಾಕಿ ಬಿಲ್ ಬಿಡುಗಡೆ ಮಾಡುವಂತೆ ಮನವಿ ಸಲ್ಲಿಕೆ ಮಾಡಿದ್ದಾರೆ.
ʼಬಿಬಿಎಂಪಿ ವ್ಯಾಪ್ತಿಯಲ್ಲಿ ಕಳೆದ 28 ತಿಂಗಳ ಹಿಂದೆ ಪೂರ್ಣಗೊಳಿಸಿರುವ ಕಾಮಗಾರಿಗಳ ಬಿಲ್ ಪಾವತಿ ಬಾಕಿ ಇದೆ. ಚುನಾವಣೆ, ಹೊಸ ಸರ್ಕಾರ ರಚನೆ ಹೀಗೆ 8 ತಿಂಗಳಿನಿಂದ ಬಾಕಿ ಮೊತ್ತ ಬಿಡುಗಡೆ ಆಗಿರುವದಿಲ್ಲ. ಇದರಿಂದ ಗುತ್ತಿಗೆದಾರರು ತೀವ್ರ ಆರ್ಥಿಕ ಸಂಕಷ್ಟಕ್ಕೆ ಗುರಿಯಾಗಿದ್ದಾರೆ. ಪರಿಸ್ಥಿತಿ ಹೀಗೆಯೇ ಮುಂದುವರಿದರೆ ಗುತ್ತಿಗೆದಾರರು ಆತ್ಮಹತ್ಯೆ ಮಾಡಿಕೊಳ್ಳುವ ಪರಿಸ್ಥಿತಿ ಎದುರಾಗುತ್ತದೆ ಎಂಬ ವಿಚಾರವನ್ನು ಮುಖ್ಯಮಂತ್ರಿಗಳ ಗಮನಕ್ಕೆ ತರಲಾಗಿದೆʼ ಎಂದು ಸಂಘದ ಅಧ್ಯಕ್ಷ ಆರ್. ಅಂಬಿಕಾಪತಿ ತಿಳಿಸಿದ್ದಾರೆ.
ಸರಕಾರದಿಂದ ಬಿಡುಗಡೆ ಆಗಿರುವ ಅನುದಾನ ಪಾಲಿಕೆಯ ಖಜಾನೆಯಲ್ಲಿ ಇದ್ದರೂ ಗುತ್ತಿಗೆದಾರರಿಗೆ ಬಾಕಿ ಬಿಡುಗಡೆ ಆಗುತ್ತಿಲ್ಲ ಎಂಬುದನ್ನು ಗಮನಕ್ಕೆ ತಂದಾಗ, ಮುಖ್ಯಮಂತ್ರಿಗಳು ಸಕಾರಾತ್ಮಕವಾಗಿ ಸ್ಪಂದಿಸಿ, ಬಿಲ್ ಪಾವತಿ ಸಂಬಂಧ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಮತ್ತು ಮತ್ತು ಮುಖ್ಯ ಆಯುಕ್ತರೊಂದಿಗೆ ಚರ್ಚಿಸಿ ಆದಷ್ಟೂ ತ್ವರಿತವಾಗಿ ಬಾಕಿ ಬಿಡುಗಡೆ ಮಾಡುವುದಾಗಿ ಭರವಸೆ ನೀಡಿದರು ಅವರು ಮಾಹಿತಿ ನೀಡಿದರು.
ಈ ಸಂದರ್ಭದಲ್ಲಿ ಸಂಘದ ಪದಾಧಿಕಾರಿಗಳಾದ ಜಿ.ಎಂ. ರವೀಂದ್ರ, ನಂದಕುಮಾರ್ ಜಿ.ಎಂ. ಡಿ.ಎಂ.ನಾಗರಾಜ್, ಹನುಮಂತಯ್ಯ ಮೊದಲಾದವರು ಉಪಸ್ಥಿತರಿದ್ದರು.
ಬೆಂಗಳೂರು: ಕೆಜಿಎಫ್-2 ಯಶಸ್ಸಿನ ನಂತರ ಇಡೀ ದೇಶದ ಕಾತುರದಿಂದ ಕಾಯುತ್ತಿರುವ ಸಿನಿಮಾ ಎಂದರೆ ಅದು ರಾಕಿಂಗ್ ಸ್ಟಾರ್ ಯಶ್ ಅಭಿನಯದ…
ತುಮಕೂರು: ರಾಜ್ಯ ಕಾಂಗ್ರೆಸ್‌ನಲ್ಲಿ ಅಧಿಕಾರ ಹಸ್ತಾಂತರ ಚರ್ಚೆ ನಡುವೆಯೇ ಮಾಜಿ ಸಚಿವ ಕೆ.ಎನ್.ರಾಜಣ್ಣ ಮತ್ತೆ ದಲಿತ ಸಿಎಂ ವಿಚಾರ ಪ್ರಸ್ತಾಪಿಸಿದ್ದಾರೆ.…
ರಾಯಚೂರು: ರಾಯಚೂರು ಪ್ರವಾಸದಲ್ಲಿದ್ದ ರಾಜನಹಳ್ಳಿ ವಾಲ್ಮೀಕಿ ಗುರುಪೀಠದ ಜಗದ್ಗುರು ಡಾ.ವಾಲ್ಮೀಕಿ ಪ್ರಸನ್ನಾನಂದ ಪುರಿ ಸ್ವಾಮೀಜಿಗೆ ಲಘು ಹೃದಯಾಘಾತವಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ.…
ಚಾಮರಾಜನಗರ: ಕಳೆದ ಮೂರು ತಿಂಗಳಿನಿಂದಲೂ ಬಂದ್ ಆಗಿದ್ದ ನಾಗರಹೊಳೆ ಹಾಗೂ ಬಂಡೀಪುರ ಸಫಾರಿ ಆರಂಭಕ್ಕೆ ಸರ್ಕಾರ ಗ್ರೀನ್ ಸಿಗ್ನಲ್ ನೀಡಿದೆ.…
ಹಾಸನ: ಫ್ಯಾಕ್ಟರಿ ಕೆಲಸಕ್ಕೆ ಹೋಗಿದ್ದ ಯುವಕ ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಘಟನೆ ಹಾಸನ ಹೊರವಲಯದ ಹನುಮಂತಪುರ ಬಳಿ ನಡೆದಿದೆ. 27 ವರ್ಷ…
ಬೆಂಗಳೂರು: ರಾಜ್ಯದಲ್ಲಿ ಇಂದಿನಿಂದ ತಾಪಮಾನ ಹೆಚ್ಚಾಗಿದ್ದು, ಬಿಸಿಲ ಝಳ ಆರಂಭವಾಗಿದೆ. ಹಲವು ಜಿಲ್ಲೆಗಳಲ್ಲಿ ಗರಿಷ್ಠ ತಾಪಮಾನ ಏರಿಕೆಯಾಗುವ ಸಾಧ್ಯತೆಯಿದೆ. ಕರಾವಳಿ…