ಬೆಂಗಳೂರು : “ಅಗ್ನಿ ಅನಾಹುತದಿಂದ ಗಾಯಗೊಂಡಿದ್ದ ಬಿಬಿಎಂಪಿ ಮುಖ್ಯ ಇಂಜಿನಿಯರ್ ಶಿವಕುಮಾರ್ ಅವರ ಆರೋಗ್ಯ ಸ್ಥಿತಿ ಚಿಂತಾಜನಕವಾಗಿದೆ. ವೈದ್ಯರು ಉತ್ತಮ ಚಿಕಿತ್ಸೆ ನೀಡುತ್ತಿದ್ದಾರೆ. ಅವರು ಆದಷ್ಟು ಬೇಗ ಗುಣಮುಖರಾಗಲಿ ಎಂದು ಪ್ರಾರ್ಥಿಸುತ್ತೇನೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ.
ಶೇಷಾದ್ರಿಪುರದ ಅಪೋಲೋ ಆಸ್ಪತ್ರೆಗೆ ಭೇಟಿ ನೀಡಿ ಮುಖ್ಯ ಇಂಜಿನಿಯರ್ ಅವರ ಆರೋಗ್ಯ ವಿಚಾರಿಸಿದ ಬಳಿಕ ಮಾಧ್ಯಮ ಪ್ರತಿನಿಧಿಗಳ ಜತೆ ಸೋಮವಾರ ಅವರು ಮಾತನಾಡಿದರು.
“ನಾನು ಈ ಹಿಂದೆ ಮುಖ್ಯ ಇಂಜಿನಿಯರ್ ಶಿವಕುಮಾರ್ ಅವರ ಆರೋಗ್ಯ ವಿಚಾರಿಸಲು ಭೇಟಿ ಮಾಡಿದಾಗ ಅವರ ಆರೋಗ್ಯ ಸುಧಾರಿಸುತ್ತಿರುವಂತೆ ಕಂಡಿತ್ತು. ಅವರಿಗೆ ಉತ್ತಮ ಚಿಕಿತ್ಸೆ ಕೊಡಿಸಬೇಕು ಎಂಬ ಕಾರಣಕ್ಕೆ ಈ aಪ್ರತಿಷ್ಠಿತ ಆಸ್ಪತ್ರೆಗೆ ದಾಖಲಿಸಲಾಗಿದೆ. ನಾನು ಕೂಡ 2-3 ಬಾರಿ ಇದೇ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದೆ. ಇಲ್ಲಿನ ವೈದ್ಯರು ಎಲ್ಲಾ ರೀತಿಯ ಚಿಕಿತ್ಸೆ ನೀಡಿ ಅವರ ಆರೋಗ್ಯ ಸುಧಾರಿಸಲು ಪ್ರಯತ್ನಿಸುತ್ತಿದ್ದಾರೆ. ಮತ್ತೊರ್ವ ಸಿಬ್ಬಂದಿ ಜ್ಯೋತಿ ಅವರಲ್ಲಿ ಚೇತರಿಕೆ ಕಾಣುತ್ತಿದ್ದು, ಸುಟ್ಟ ಗಾಯಗಳಿವೆ” ಎಂದು ತಿಳಿಸಿದರು.
ಅಗ್ನಿ ಅನಾಹುತದ ಬಗ್ಗೆ ತನಿಖೆ ಎಲ್ಲಿಯವರೆಗೆ ಬಂದಿದೆ ಎಂದು ಕೇಳಿದ ಪ್ರಶ್ನೆಗೆ, ‘ನಾನು ಈ ತನಿಖೆಯಲ್ಲಿ ಹಸ್ತಕ್ಷೇಪ ಮಾಡುವುದಿಲ್ಲ. ತನಿಖೆ ವರದಿಗಳು ಬರಲಿ. ಪೊಲೀಸ್, ಬಿಬಿಎಂಪಿ ಅಧಿಕಾರಿಗಳು ತನಿಖೆ ಮಾಡುತ್ತಿದ್ದು, ಅದು ಪೂರ್ಣಗೊಳ್ಳಲಿ, ಆಮೇಲೆ ಮಾತನಾಡುತ್ತೇನೆ’ ಎಂದು ತಿಳಿಸಿದರು.
ಚೆನ್ನೈ : ತಮಿಳುನಾಡು ರಾಜಕಾರಣದಲ್ಲಿ ತಮ್ಮದೇ ಆದ ಕ್ರೇಜ್ ಸೃಷ್ಟಿಸಿಕೊಂಡಿರುವ ಟಿವಿಕೆ ಪಕ್ಷದ ಅಧ್ಯಕ್ಷ, ನಟ ʼದಳಪತಿʼ ವಿಜಯ್ ಅವರನ್ನು…
ಮೈಸೂರು : ಜನರು ವಿಪರೀತ ಸೆಕೆಯಿಂದಾಗಿ ತತ್ತರಿಸಿ ಹೋಗಿರುವ ನಡುವೆ ಕೆಲ ಜಿಲ್ಲೆಗಳಲ್ಲಿ ಇಂದು(ಮಾರ್ಚ್.15) ಸಂಜೆ ಅಕಾಲಿಕವಾಗಿ ಮಳೆ ಸುರಿದು…
ಮಂಡ್ಯ : ಮಂಡ್ಯ ವಿಧಾನಸಭಾ ಕ್ಷೇತ್ರ ಅಭಿವೃದ್ಧಿಗೆ ಸಮಗ್ರ ಯೋಜನೆ ರೂಪಿಸಲಾಗಿದ್ದು, ಬಸರಾಳು ಭಾಗದ ಹೇಮಾವತಿ ನಾಲೆ ಅಭಿವೃದ್ಧಿಗೆ 350…
ಮಂಡ್ಯ : ನಾನು ಯಾವಾಗ ಮಾತನಾಡಿದರೂ ವಿವಾದ ಆಗುತ್ತೆ. ನನ್ನ ಮಾತಿನಿಂದ ನೋವಾಗಿದ್ದರೆ, ಡಾ.ನಿರ್ಮಲಾನಂದನಾಥ ಸ್ವಾಮೀಜಿ ಅವರ ಕ್ಷಮೆ ಯಾಚಿಸುತ್ತೇನೆ…
ಎಚ್.ಡಿ.ಕೋಟೆ : ಎರಡು ಬೈಕುಗಳ ನಡುವೆ ಮುಖಾಮುಖಿ ಡಿಕ್ಕಿಯಾಗಿ ಬೈಕ್ ಸವಾರ ಸಾವಿಗೀಡಾಗಿರುವ ಘಟನೆ ತಾಲ್ಲೂಕಿನಲ್ಲಿ ನಡೆದಿದೆ. ತಾಲ್ಲೂಕಿನ ಹೆರಿಗೆ…
ಚಿತ್ರದುರ್ಗ : ಚಳ್ಳಕೆರೆ ಸಮೀಪದ ಹೆಗ್ಗೆರೆ ಗೇಟ್ ಬಳಿ ಸಂಭವಿಸಿದ ಭೀಕರ ಅಪಘಾತದಲ್ಲಿ ಮೂವರು ಪೊಲೀಸ್ ಅಧಿಕಾರಿಗಳು ಮೃತಪಟ್ಟಿದ್ದಾರೆ. ಇಬ್ಬರು…