ನವದೆಹಲಿ : ಪ್ರಾಥಮಿಕ ಶಾಲೆಯ ಶಿಕ್ಷಕರಾಗಲು ಬಿ.ಇಡಿ. ಅರ್ಹತೆ ಹೊಂದಿರಬೇಕು ಎಂದು ಕೇಂದ್ರ ಸರ್ಕಾರ ಕೈಗೊಂಡ ನಿರ್ಧಾರವು ಸ್ವೇಚ್ಛೆಯಿಂದ ಕೂಡಿದೆ ಮತ್ತು ಅತಾರ್ಕಿಕವಾಗಿದೆ ಎಂದು ಸುಪ್ರೀಂ ಕೋರ್ಟ್ ಹೇಳಿದ್ದು, BEd ಕಡ್ಡಾಯವಲ್ಲ ಎಂದು ಹೇಳಿ ಸರ್ಕಾರದ ಆದೇಶವನ್ನು ವಜಾಗೊಳಿಸಿದೆ.
ಮಕ್ಕಳಿಗೆ ಉಚಿತ, ಕಡ್ಡಾಯ ಮತ್ತು ಗುಣಮಟ್ಟದ ಶಿಕ್ಷಣ ನೀಡುವುದಕ್ಕಾಗಿ ರೂಪಿಸಲಾದ ಶಿಕ್ಷಣ ಹಕ್ಕು ಕಾಯ್ದೆಗೂ ಈ ನಿರ್ಧಾರಕ್ಕೂ ಸಂಬಂಧ ಇಲ್ಲ. ಪ್ರಾಥಮಿಕ ಶಾಲಾ ಶಿಕ್ಷಕರಾಗಲು ಬಿ.ಇಡಿ. ಅನ್ನು ಅರ್ಹತೆಯಾಗಿ ನಿಗದಿ ಮಾಡಬೇಕು ಎಂದು ಎನ್‌ಸಿಟಿಇ 2018ರ ಜೂನ್ 28ರಂದು ಹೊರಡಿಸಿದ್ದ ಅಧಿಸೂಚನೆಯನ್ನು ಸುಪ್ರೀಂ ಕೋರ್ಟ್ ರದ್ದು ಮಾಡಿದೆ.
ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಮೂರ್ತಿಗಳಾದ ಅನಿರುದ್ಧ ಬೋಸ್ ಮತ್ತು ಸುಧಾಂಶು ಧುಲಿಯಾ ಅವರಿದ್ದ ಪೀಠವು, ಪ್ರಾಥಮಿಕ ಹಂತದ ತರಗತಿಗಳಲ್ಲಿ ಕಲಿಸಲು ಬಿ.ಇಡಿ. ಅರ್ಹತೆಯ ಅಗತ್ಯ ಇಲ್ಲ. ಈ ತರಗತಿಗಳಲ್ಲಿ ಕಲಿಸಲು ಭಿನ್ನವಾದ ಅರ್ಹತೆ ಅಗತ್ಯ ಇದೆ. ಪ್ರಾಥಮಿಕ ತರಗತಿಗಳಿಗೆ ಬೋಧಿಸಲು ಬಿ.ಇಡಿ. ವಿದ್ಯಾರ್ಹತೆ ಇರುವವರು ಆಯ್ಕೆ ಆಗಿದ್ದರೆ ನೇಮಕವಾಗಿ ಎರಡು ವರ್ಷಗಳೊಳಗೆ ಬೋಧನೆಗೆ ಸಂಬಂಧಿಸಿದ ಕೋರ್ಸ್ ಒಂದನ್ನು ಪೂರ್ಣಗೊಳಿಸಬೇಕು ಎಂದು ಬೋಧನಾ ಶಿಕ್ಷಣ ರಾಷ್ಟ್ರೀಯ ಪರಿಷತ್ ಹೇಳಿರುವುದು ಇದನ್ನು ಪುಷ್ಟೀಕರಿಸುತ್ತದೆ ಎಂದು ಹೇಳಿದೆ.
ಪ್ರಾಥಮಿಕ ಶಾಲೆಯ ಶಿಕ್ಷಕರಾಗಲು ಬಿ.ಇಡಿ. ಅನ್ನು ಅರ್ಹತೆಯಾಗಿ ನಿಗದಿ ಮಾಡುವ ಮೂಲಕ ಸರ್ಕಾರವು ಸಂವಿಧಾನ ಮತ್ತು ಕಾನೂನುಗಳನ್ನು ಉಲ್ಲಂಘಿಸಿದೆ. ಶಿಕ್ಷಕರಿಗೆ ಸಂಬಂಧಿಸಿದಂತೆ ಬೋಧನಾ ಕೌಶಲವು ಅತ್ಯಂತ ಮಹತ್ವದ್ದಾಗಿದೆ. ಬಿ.ಇಡಿ. ಅನ್ನು ಅರ್ಹತೆಯಾಗಿ ನಿಗದಿ ಮಾಡಲು ಸರ್ಕಾರ ನೀಡಿರುವ ಒಂದೇ ಒಂದು ಸಮರ್ಥನೆ ಏನೆಂದರೆ, ಇದು ಉನ್ನತ ಅರ್ಹತೆ ಎಂಬುದಾಗಿದೆ. ನೀತಿಗೆ ಸಂಬಂಧಿಸಿದ ನಿರ್ಧಾರ ಎಂದು ಪರಿಗಣಿಸಿದರೂ ಇದು ಸರಿಯಾದ ಕ್ರಮ ಅಲ್ಲ ಎಂದು ಕೋರ್ಟ್ ಹೇಳಿದೆ.
ಅಂತೆಯೇ ಪ್ರಾಥಮಿಕ ಶಾಲೆಯಲ್ಲಿ ಬೋಧಿಸಲು ಪ್ರಾಥಮಿಕ ಶಿಕ್ಷಣ ಡಿಪ್ಲೊಮಾವೇ (ಡಿ.ಎಡ್.) ಅರ್ಹತೆಯೇ ಹೊರತು ಬಿ.ಇಡಿ. ಅಲ್ಲ ಎಂದು ಸುಪ್ರೀಂ ಕೋರ್ಟ್ ಹಲವು ಬಾರಿ ಹೇಳಿದ್ದಾಗಿಯೂ ಪೀಠ ತನ್ನ ಆದೇಶದಲ್ಲಿ ಉಲ್ಲೇಖಿಸಿದೆ.
ಮದ್ದೂರು : ತಾಲ್ಲೂಕಿನ ನಿಡಘಟ್ಟದ ಬೆಂಗಳೂರು-ಮೈಸೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಚಲಿಸುತ್ತಿದ್ದ ಕಾರಿನಲ್ಲಿ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡು ಕಾರು ಸುಟ್ಟುಹೋಗಿದ್ದು, ಅದೃಷ್ಟವಶಾತ್…
ಮೈಸೂರು : ಇತ್ತೀಚಿನ ದಿನಗಳಲ್ಲಿ ಸಾಂಪ್ರದಾಯಿಕ ಅಡುಗೆ ಎಣ್ಣೆಗಳು, ಅವುಗಳ ಆರೋಗ್ಯ ಲಾಭಗಳ ಕಾರಣದಿಂದ ಮತ್ತೆ ಹೆಚ್ಚಿನ ಮಹತ್ವ ಪಡೆದುಕೊಳ್ಳುತ್ತಿವೆ.…
ಬೆಂಗಳೂರು : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಇಂದು (ಜ.8) ನಡೆದ 2026ನೇ ಸಾಲಿನ 2ನೇ ಸಚಿವ ಸಂಪುಟದ ಸಭೆಯಲ್ಲಿ…
ಮಂಡ್ಯ : ನಗರಕ್ಕೆ ಹೈಟೆಕ್ ಸ್ಪರ್ಶ ನೀಡಲು ಮುಂದಾಗಿರುವ ಶಾಸಕ ಪಿ. ರವಿಕುಮಾರಗೌಡ ಅವರು, ಒಕ್ಕಲಿಗ ಜನಾಂಗದ ಹಲವು ವರ್ಷಗಳ…
ಮೈಸೂರು : ಸಾಂಸ್ಕೃತಿಕ ನಗರಿ ಮೈಸೂರಿನ ಸ್ವಚ್ಛತೆಯನ್ನು ಕಾಪಾಡುವ ನಿಟ್ಟಿನಲ್ಲಿ ನಗರದಲ್ಲಿ ಬೀದಿಬದಿ ವ್ಯಾಪಾರಿಗಳ ವಲಯ ನಿರ್ಮಿಸಲು ಆದ್ಯತೆ ನೀಡಲಾಗುವುದು…
ಬೆಂಗಳೂರು : ಹಣಕಾಸು ಇಲಾಖೆ ಅನುಮತಿ ನೀಡಿದ ತಕ್ಷಣವೇ 2025ರ ಫೆಬ್ರವರಿ ಹಾಗೂ ಮಾರ್ಚ್ ತಿಂಗಳ ಗೃಹಲಕ್ಷ್ಮೀ ಯೋಜನೆಯ ಹಣವನ್ನು…