ಬೆಂಗಳೂರು : ಬಿಲ್ಲವ, ಈಡಿಗ ಸಮಾವೇಶದಲ್ಲಿ ನಾನು ಹೇಳಿದ ಮಾತಿಗೆ ಬದ್ಧನಾಗಿದ್ದೇನೆ. ಕಾದು ನೋಡಿ ರಾಜಕಾರಣ ಏನೇನು ಆಗುತ್ತದೆ ಎಂದು ಹಿರಿಯ ಕಾಂಗ್ರೆಸ್ ಮುಖಂಡ ಬಿಕೆ ಹರಿಪ್ರಸಾದ್ ಹೇಳಿದರು.
ಬೆಂಗಳೂರಿನಲ್ಲಿ ಶನಿವಾರ ಮಾತನಾಡಿದ ಅವರು, ” ಅಸಮಾಧಾನದ ಬಗ್ಗೆ ನಾನು ಮಾತನಾಡುವುದಿಲ್ಲ. ಆದರೆ, ಶುಕ್ರವಾರ ನಾನು ಹೇಳಿದ್ದು ನಿಜ ಒಪ್ಪಿಕೊಳ್ಳುತ್ತೇನೆ ” ಎಂದರು.
” ನಾನು ಒಂದು ಸರಿ ಹೇಳಿದ ಮಾತು ವಾಪಾಸ್ ತಗೆದುಕೊಳ್ಳೋದಿಲ್ಲ. ನಾನು ಹೇಳಿದ ಮಾತಿಗೆ ಬದ್ದನಾಗಿರುತ್ತೇನೆ. ನಾನು ಹೇಳದ ಮೇಲೆ ನನ್ನ ಮಾತಲ್ಲ. ಹಾಗಿದ್ದರೂ,ನಾನು ಹೇಳಿದ ಮೇಲೆ ನನ್ನ ಮಾತಿಗೆ ಬದ್ದನಾಗಿರುತ್ತೇನೆ ” ಎಂದರು.
ಶುಕ್ರವಾರ ಸಭೆಗೆ ಕರೆದಿದ್ದರು ಹೋಗಿದ್ದೆ ಅಷ್ಟೇ. ಅಲ್ಲಿ ಕ್ಯಾಮೆರಾಗಳು ಇರಲಿಲ್ಲ ಮಾತಾಡಿದ್ದೇನೆ. ಕ್ಯಾಮೆರಾಗಳು ಇದ್ದಿದ್ದರೆ ಮಾತಾಡುತ್ತಿರಲಿಲ್ಲ. ನಾವು ಹಿಂದುಳಿದವರು ಅಷ್ಟೆಲ್ಲಾ ಗಮನಿಸಿಲ್ಲ. ಯಾರೋ ವಿಡಿಯೋವನ್ನು ಹಾಕಿರುತ್ತಾರೆ” ಎಂದು ಹೇಳಿದರು.
ಬೆಂಗಳೂರಿನ ಖಾಸಗಿ ಹೋಟೆಲ್‌ನಲ್ಲಿ ಈಡಿಗ, ಬಿಲ್ಲವ, ದೀವರ ಮುಖಂಡರ ಸಭೆಯಲ್ಲಿ ಮಾತನಾಡಿದ್ದ ಬಿಕೆ ಹರಿಪ್ರಸಾದ್, ಪರೋಕ್ಷವಾಗಿ ಸಿಎಂ ಸಿದ್ದರಾಮಯ್ಯ ವಿರುದ್ಧ ವಾಗ್ದಾಳಿ ನಡೆಸಿದ್ದರು. ನನಗೆ ಸಿಎಂ ಮಾಡುವುದು ಗೊತ್ತಿದೆ. ಅವರನ್ನು ಅಧಿಕಾರದಿಂದ ಕೆಳಕ್ಕೆ ಇಳಿಸುವುದು ಗೊತ್ತಿದೆ ಎಂದು ಬಿ.ಕೆ ಹರಿಪ್ರಸಾದ್ ಹೇಳಿಕೆ ನೀಡಿದ್ದರು.
ಸಿದ್ದರಾಮಯ್ಯ ಅವರು ಹಿಂದುಳಿದ ವರ್ಗಕ್ಕೆ ಸೇರಿದವರು. ಎಲ್ಲರೂ ಒಟ್ಟಿಗೆ ಸೇರಬೇಕು ಎಂದು ನಾವು 2013 ರಲ್ಲಿ ಬೆಂಬಲ ಕೊಟ್ಟಿದ್ದೆವು. ಆದರೆ, ಉಡುಪಿ ಜಿಲ್ಲೆಯ ಕಾರ್ಕಳ ಕೋಟಿ ಚೆನ್ನಯ್ಯ ಪಾರ್ಕ್‌ಗೆ 5 ಕೋಟಿ ಕೊಡಿ ಎಂದು ಕೇಳಿದ್ದೆವು. ಸಿದ್ದರಾಮಯ್ಯ ಕೊಡುತ್ತೇವೆ ಎಂದು ಹೇಳಿದರೂ ಅದನ್ನು ಕೊಟ್ಟಿಲ್ಲ ಎಂದು ಆರೋಪ ಮಾಡಿದ್ದರು.
ಬೆಂಗಳೂರು: ಖ್ಯಾತ ಉದ್ಯಮಿ ಮತ್ತು ಕಾನ್ಪಿಡೆಂಟ್ ಗ್ರೂಪ್ ಸಂಸ್ಥಾಪಕ ಹಾಗೂ ಅಧ್ಯಕ್ಷರಾಗಿದ್ದ ಸಿ.ಜೆ.ರಾಯ್ ಅವರು ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದು,…
ಮೈಸೂರು ನಗರದಲ್ಲಿ ಮಳೆನೀರು ಕೊಯ್ಲು ಥೀಮ್ ಪಾರ್ಕ್ ಸ್ಥಾಪಿಸುವ ಹಿಂದಿನ ಹಾಗೂ ಈಗಿನ ಸರ್ಕಾರಗಳ ಭರವಸೆ ಇನ್ನೂ ಕನ್ನಡಿಯೊಳಗಿನ ಗಂಟಾಗಿಯೇ…
ಮಂಡ್ಯ ಜಿಲ್ಲೆಯ ಪಾಂಡವಪುರ ತಾಲ್ಲೂಕಿನ ಹರಳಹಳ್ಳಿಯ ಪುಸ್ತಕ ಪ್ರೇಮಿ ೭೮ ವರ್ಷದ ಅಂಕೇಗೌಡ ಅವರಿಗೆ ಪದ್ಮಶ್ರೀ ಪ್ರಶಸ್ತಿ ಲಭಿಸಿರುವುದು ಕನ್ನಡ…
ಮೈಸೂರಿನ ರಾಮಕೃಷ್ಣನಗರ ಮಾರ್ಗಕ್ಕೆ ಪ್ರತಿದಿನ ನಗರ ಸಾರಿಗೆ ಬಸ್ಸುಗಳು ಸಂಚರಿಸುತ್ತವೆ. ಆದರೆ ಈ ಮಾರ್ಗದಲ್ಲಿ ಓಡಾಡುವ ಬಸ್ಸುಗಳ ಸಂಖ್ಯೆ ಮಾತ್ರ…
ಸರಗೂರು: ಪಟ್ಟಣದಲ್ಲಿ ಗ್ರಾಮದೇವತೆ ಶ್ರೀ ಸಂತೆ ಮಾಸ್ತಮ್ಮನವರ ೩೧ನೇ ಜಾತ್ರಾ ಮಹೋತ್ಸವ ಹಾಗೂ ಕೊಂಡೋತ್ಸವ ಶುಕ್ರವಾರ ವಿಜೃಂಭಣೆಯಿಂದ ನೆರವೇರಿತು. ಜಾತ್ರಾ…
ರೆಸಾರ್ಟ್‌ಗಳು, ಹೋಂಸ್ಟೇಗಳಿಗೆ ಅಕ್ರಮ ರೆಸಾರ್ಟ್‌ಗಳ ತನಿಖಾ ಸಮಿತಿಯವರ ದಿಢೀರ್ ಭೇಟಿ ಹೆಚ್.ಡಿ.ಕೋಟೆ: ತಾಲ್ಲೂಕಿನ ಕಬಿನಿ ಹಿನ್ನೀರಿನ ನಾಗರಹೊಳೆ ಮತ್ತು ಬಂಡೀಪುರ…