BREAKING NEWS

3 ತಿಂಗಳಲ್ಲಿ 242 ಭ್ರೂಣ ಹತ್ಯೆ; ಮಂಡ್ಯ ಭ್ರೂಣ ಹತ್ಯೆ ಜಾಲದ ಬಗ್ಗೆ ಹೆಚ್ಚಿನ ಮಾಹಿತಿ ಹಂಚಿಕೊಂಡ ಕಮಿಷನರ್‌

ಮೊನ್ನೆ ಮೈಸೂರು ಹಾಗೂ ಮಂಡ್ಯ ಪ್ರದೇಶದಲ್ಲಿ ಪತ್ತೆಯಾಗಿದ್ದ ಭ್ರೂಣ ಹತ್ಯೆ ಜಾಲದ ಬಗೆಗಿನ ಸುದ್ದಿ ಇಡೀ ರಾಜ್ಯವನ್ನೇ ಆತಂಕಕ್ಕೊಳಗಾಗುವಂತೆ ಮಾಡಿತ್ತು. ಜೀವ ಉಳಿಸಬೇಕಾದ ವೈದ್ಯರೇ ಇಂತಹ ಅಮಾನವೀಯ ಕೆಲಸಕ್ಕೆ ಕೈಹಾಕಿದ್ದು ಮನುಕುಲ ತಲೆ ತಗ್ಗಿಸುವಂತಹ ಕೃತ್ಯ ಇದಾಗಿತ್ತು.

ಬೆಂಗಳೂರಿನ ಬೈಯಪ್ಪನಹಳ್ಳಿ ಪೊಲೀಸರು ನಡೆಸಿದ ಈ ಕಾರ್ಯಾಚರಣೆಯಿಂದ ಬೆಳಕಿಗೆ ಬಂದ ಹಲವು ವರ್ಷಗಳ ಈ ದಂಧೆಯಲ್ಲಿ ಶಾಮೀಲಾಗಿದ್ದ ಒಟ್ಟು 9 ಜನರನ್ನು ಬಂಧಿಸಲಾಗಿದೆ. ಸದ್ಯ ಇವರೆಲ್ಲಾ ಪೊಲೀಸರ ಸೆರೆಯಲ್ಲಿದ್ದು, ಈ ಕುರಿತು ಇಂದು ( ನವೆಂಬರ್‌ 28 ) ಬೆಂಗಳೂರು ನಗರ ಕಮಿಷನರ್‌ ದಯಾನಂದ್‌ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ ಮತ್ತಷ್ಟು ಮಾಹಿತಿಗಳನ್ನು ಹಂಚಿಕೊಂಡಿದ್ದಾರೆ.

ಈ ಹೇಯ ಕೃತ್ಯವೆಸಗಿರುವ ಗುಂಪು ರಿಜಿಸ್ಟರ್‌ ಒಂದನ್ನು ಬಳಸಿದ್ದು, ಇದರಲ್ಲಿ ಕಳೆದ 3 ತಿಂಗಳಿನಲ್ಲಿಯೇ ಒಟ್ಟು 242 ಹೆಣ್ಣು ಭ್ರೂಣಗಳ ಹತ್ಯೆಯನ್ನು ಮಾಡಲಾಗಿದೆ ಎಂದು ದಯಾನಂದ್‌ ಮಾಹಿತಿ ನೀಡಿದ್ದಾರೆ. ಅಲ್ಲದೇ ಒಂದು ಭ್ರೂಣ ಹತ್ಯೆಗೆ 20ರಿಂದ 25 ಸಾವಿರ ರೂಪಾಯಿ ಹಣವನ್ನು ಪಡೆಯುತ್ತಿದ್ದರು, ಮೈಸೂರಿನ ಆಸ್ಪತ್ರೆ ಹಾಗೂ ಮಂಡ್ಯದ ಆಲೆಮನೆಯಲ್ಲಿ ಆಗಿರುವುದು ಇಲ್ಲಿಯವರೆಗಿನ ತನಿಖೆಯಲ್ಲಿ ಗೊತ್ತಾಗಿದೆ ಎಂದೂ ಸಹ ಮಾಹಿತಿ ನೀಡಿದ್ದಾರೆ.

ಇನ್ನು ಈ ಪ್ರಕರಣದ ತನಿಖೆಯಲ್ಲಿ ತಮಗೆ ಎರಡು ಸ್ಕ್ಯಾನಿಂಗ್‌ ಮಷಿನ್‌ ಸಿಕ್ಕಿರುವುದಾಗಿ ಹೇಳಿದ ದಯಾನಂದ್‌ ಒಂದು ಕೆಟ್ಟಿದೆ ಹಾಗೂ ಇನ್ನೊಂದು ಚೆನ್ನಾಗಿದೆ ಎಂದಿದ್ದಾರೆ. ಈ ರೀತಿ ಸ್ಕ್ಯಾನಿಂಗ್‌ ಮಷಿನ್‌ ಅವರಿಗೆ ಲಭಿಸಿದ್ದು, ಅಂತಹ ಸಲಕರಣೆಗಳನ್ನು ಪಡೆಯಬೇಕೆಂದರೆ ಡಿಎಚ್‌ಒ ಅವರ ಅನುಮತಿ ಬೇಕಿದ್ದು ಅವರೂ ಸಹ ಇದರಲ್ಲಿ ಶಾಮೀಲಾಗಿದ್ದಾರಾ ಎಂಬ ಪ್ರಶ್ನೆಗೆ ಉತ್ತರಿಸಿದ ದಯಾನಂದ್ ಈ ಸಾಧ್ಯತೆಗಳೂ ಸಹ ಇವೆ, ಅದರ ಬಗ್ಗೆ ಮುಂದಿನ ತನಿಖೆಯಲ್ಲಿ ತಿಳಿಯಲಿದೆ ಎಂದಿದ್ದಾರೆ. ಈ ಕೃತ್ಯದಲ್ಲಿ ಸದ್ಯ ಪೊಲೀಸರ ಅತಿಥಿಯಾಗಿರುವ ವೀರೇಶ್‌ ಹಾಗೂ ಸಿದ್ದೇಶ್‌ ಎಂಬುವವರು ಮೂಲತಃ ಹೊನ್ನಾಳಿಯವರಾಗಿದ್ದು ಈ ಹಿಂದೆ ಅವರು ಕಿಡ್ನಾಪ್‌ ಕೇಸ್‌ ಒಂದರಲ್ಲಿ ಆರೋಪಿಯಾಗಿದ್ದರು ಎಂದು ತಿಳಿಸಿದ್ದಾರೆ. ಸದ್ಯಕ್ಕೆ ಕಳೆದ ಮೂರು ತಿಂಗಳ ಮಾಹಿತಿ ಮೊದಲ ಹಂತದ ತನಿಖೆಯಲ್ಲಿ ಲಭಿಸಿದ್ದು ಅದರ ಹಿಂದಿನ ಕುರಿತ ತನಿಖೆ ನಡೆಯಲಿದೆ, ಎಲ್ಲಾ ಆರೋಪಿಗಳನ್ನೂ ಪೊಲೀಸ್‌ ಕಸ್ಟಡಿಗೆ ತೆಗೆದುಕೊಳ್ಳಲಾಗಿದ್ದು ವಿಚಾರಣೆ ನಡೆಯುತ್ತಿದೆ ಮತ್ತು ಕೆಲ ಪೋಷಕರನ್ನೂ ಸಹ ತನಿಖೆ ಮಾಡಲಿದ್ದೇವೆ ಎಂದು ದಯಾನಂದ್‌ ತಿಳಿಸಿದ್ದಾರೆ.

andolana

Recent Posts

ಮೈಸೂರು | ನಾಲ್ಕೇ ದಿನಕ್ಕೆ ಮುರಿದು ಬಿದ್ದ ದಸರಾ ದೀಪಾಲಂಕಾರ ಕಟೌಟ್

ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ದಸರಾ ದೀಪಾಲಂಕಾರ ಕಾಮಗಾರಿಯಲ್ಲೇ ಯಡವಟ್ಟಾಗಿದ್ದು, ನಗರದ ಗನ್ ಹೌಸ್ ವೃತ್ತದಲ್ಲಿ ಕಟ್ಟಲಾಗಿದ್ದ ದಸರಾ ದೀಪಾಲಂಕಾರದ…

21 mins ago

ಕಮಿಷನ್ ಆರೋಪ ಸುಳ್ಳು, ಎಸ್‌ಐಆರ್ ರದ್ದಾಗಬೇಕು: ಸಚಿವ ಪುಟ್ಟರಂಗಶೆಟ್ಟಿ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಶಾಸಕರು ಕಮಿಷನ್ ಕೇಳುತ್ತಿದ್ದಾರೆ ಎಂಬ ಗುತ್ತಿಗೆದಾರರ ಆರೋಪ ಸುಳ್ಳು,ಮತದಾರರ ಪಟ್ಟಿಯ…

1 hour ago

ಯಳಂದೂರು ತಾಲ್ಲೂಕಿನಲ್ಲಿ ವರುಣನ ಕೃಪೆ: ಭತ್ತದ ನಾಟಿಗೆ ಮುಂದಾದ ರೈತರು

ಯಳಂದೂರು: ತಾಲ್ಲೂಕಿನ ವಿವಿಧ ಗ್ರಾಮಗಳಲ್ಲಿ ಕಳೆದ ಕೆಲ ದಿನಗಳಿಂದ ಸತತವಾಗಿ ಮಳೆ ಸುರಿಯುತ್ತಿರುವ ಹಿನ್ನೆಲೆಯಲ್ಲಿ ರೈತರು ಭತ್ತದ ನಾಟಿ ಕಾರ್ಯದಲ್ಲಿ…

1 hour ago

ಕಾವೇರಿ ತೀರ್ಥೋದ್ಭವಕ್ಕೆ ದಿನಗಣನೆ: ಕಾವೇರಿ ನೀರಾವರಿ ನಿಗಮದಿಂದ 2 ಕೋಟಿ ರೂ ಬಿಡುಗಡೆ

ಮಡಿಕೇರಿ: ನಾಡಿನ ಜೀವನದಿ ಕಾವೇರಿ ಉಗಮಸ್ಥಾನ ತಲಕಾವೇರಿಯಲ್ಲಿ ನಡೆಯಲಿರುವ ಪವಿತ್ರ ತೀರ್ಥೋದ್ಭವಕ್ಕೆ ದಿನಗಣನೆ ಶುರುವಾಗಿದ್ದು, ಇನ್ನೇನು ಕೇವಲ 15 ದಿನಗಳಷ್ಟೇ…

2 hours ago

ಮಂಡ್ಯ | ಕೇಂದ್ರದ ಬರ ಅಧ್ಯಯನ ತಂಡದಿಂದ ಕೆಆರ್‌ಎಸ್‌ ಹಾಗೂ ಬರಪೀಡಿತ ಹಳ್ಳಿಗಳ ಪರಿಶೀಲನೆ

ಮಂಡ್ಯ: ರಾಜ್ಯದಲ್ಲಿ ಕಂಡು ಕೇಳರಿಯದ ಬರಗಾಲ ಆವರಿಸಿರುವ ಹಿನ್ನೆಲೆಯಲ್ಲಿ ಇಂದು ಕೇಂದ್ರ ಬರ ಅಧ್ಯಯನ ಸಮಿತಿ ಸದಸ್ಯರು ಮಂಡ್ಯಕ್ಕೆ ಆಗಮಿಸಿ…

2 hours ago

ಓದುಗರ ಪತ್ರ: ಐತಿಹಾಸಿಕ ಸಂಗತಿ!

ಐತಿಹಾಸಿಕ ಸಂಗತಿ! ಸರ್ಕಾರದ ನಿರ್ದೇಶನದ ಮೇರೆಗೆ ಬೆಳಗಾವಿ ನಗರಪಾಲಿಕೆ ‘ಗಡಿ ವಿಷಯದಲ್ಲಿ ಮಹಾಜನ್ ವರದಿಯೇ ಅಂತಿಮ’ಎಂಬ ನಿರ್ಣಯ ಅಂಗೀಕರಿಸಿರುವುದು ಐತಿಹಾಸಿಕ…

6 hours ago