ಭಾರತದ ಹುಲಿ ಸಂರಕ್ಷಿತ ಪ್ರದೇಶಗಳ ನಿರ್ವಹಣೆ ಕುರಿತು ನಡೆಸಿರುವ ಮ್ಯಾನೇಜ್‌ಮೆಂಟ್ ಎಫೆಕ್ಟಿವ್‌ನೆಸ್ ಎವಲ್ಯೂಷನ್‌ನಲ್ಲಿ ಬಂಡೀಪುರ ಉನ್ನತ ಅಂಕಗಳನ್ನು ಗಳಿಸಿ ಮತ್ತೊಮ್ಮೆ ಅತ್ಯುತ್ತಮ ಹುಲಿ ಸಂರಕ್ಷಿತ ವಲಯ ಎಂಬ ಬಿರುದನ್ನು ತನ್ನದಾಗಿಸಿಕೊಂಡಿದಕ್ಕೆ ಬಂಡೀಪುರ ಸಿಎಫ್ ಡಾ.ರಮೇಶ್ ಕುಮಾರ್ ಅವರಿಗೆ ಎನ್‌ಟಿಸಿಎ ಅಧಿಕಾರಿಗಳು ಅಭಿನಂದನ ಪತ್ರ ನೀಡಿದ್ದಾರೆ
ರಾಷ್ಟ್ರೀಯ ಹುಲಿ ಸಂರಕ್ಷಣಾ ಪ್ರಾಧಿಕಾರ ಮತ್ತು ಭಾರತೀಯ ವನ್ಯಜೀವಿ ಸಂಸ್ಥೆಯ ತಜ್ಞರ ತಂಡವು 4 ವರ್ಷಗಳಿಗೊಮ್ಮೆ ನಿರ್ವಹಣೆಯ ಕುರಿತು ಮೌಲ್ಯಮಾಪನವನ್ನು ಮಾಡುತ್ತದೆ ಇದರಲ್ಲಿ ಬಂಡೀಪುರ ಹುಲಿ ಸಂರಕ್ಷಿತ ವಲಯ ಶೇ.95.5ರಷ್ಟು ಅಂಕಗಳನ್ನು ಪಡೆದಿದೆ.
ಇದು ರಾಜ್ಯದಲ್ಲಿಯೇ ಅತ್ಯಧಿಕವಾಗಿದೆ ದೇಶದ ಇತರ ಹುಲಿ ಸಂರಕ್ಷಿತ ಪ್ರದೇಶಗಳು ಶೇ.94 ಗಳಿಸಿವೆ. ಬಂಡೀಪುರವನ್ನು ದೇಶದಲ್ಲಿ ಎರಡನೆಯ ಉತ್ತಮ ಹುಲಿ ಸಂರಕ್ಷಿತ ಪ್ರದೇಶವಾಗಿತ್ತು.
ರಾಷ್ಟ್ರೀಯ ಹುಲಿ ಸಂರಕ್ಷಣಾ ಪ್ರಾಧಿಕಾರ ಮತ್ತು ಭಾರತೀಯ ವನ್ಯಜೀವಿ ಸಂಸ್ಥೆ ಪರಿಸರ ಅರಣ್ಯ ಮತ್ತು ಹವಾಮಾನ ಬದಲಾವಣೆ ಸಚಿವಾಲಯದ ಸ್ವಾಯತ್ತ ಸಂಸ್ಥೆಯಿಂದ ಈ ಮೌಲ್ಯಮಾಪನವನ್ನು ಮಾಡಲಾಗಿದೆ
ವಿಜ್ಞಾನಿಗಳು ನಿವೃತ್ತ ಐಎಫ್‌ಎಸ್ ಅಧಿಕಾರಿಗಳು ಮತ್ತು ವನ್ಯಜೀವಿ ತಜ್ಞರ ತಂಡವು ಪ್ರತಿ 4 ವರ್ಷಗಳಿಗೊಮ್ಮೆ ಮೌಲ್ಯಮಾಪನ ನಡೆಸುತ್ತದೆ. ಹುಲಿ ಸಂರಕ್ಷಿತ ಪ್ರದೇಶದ ನಿರ್ವಹಣೆಯ ಆಧಾರದ ಮೇಲೆ ಅಂಕಗಳನ್ನು ನೀಡಲಾಗುತ್ತದೆ.
ಬಂಡೀಪುರ ಹುಲಿ ಅಭಯಾರಣ್ಯದ ನಿರ್ವಹಣೆಯನ್ನು ಮುನ್ನಡೆಸುವಾಗ ಮಾಡಿದ ಯಶಸ್ಸು ಮತ್ತು ಪರಿಣಾಮಕಾರಿ ಸುಧಾರಣೆಗಾಗಿ ನಮ್ಮ ಕೃತಜ್ಞತಾಪೂರ್ವಕ ಧನ್ಯವಾದ ಮತ್ತು ನಿಮ್ಮ ಉತ್ತಮ ಪ್ರಯತ್ನಗಳು ಶ್ಲಾಘನೀಯ ಎಂದು ಇನ್ಸ್‌ಪೆಕ್ಟರ್ ಜನರಲ್ ಆಫ್ ಫಾರೆಸ್ಟ್ ಡಾ. ಅಮಿತ್ ಮಲ್ಲಿಕ್ ತಿಳಿಸಿದ್ದಾರೆ.
ಮೈಸೂರು: ರಾಜ್ಯ ರಾಜಕಾರಣದಲ್ಲಿ ಕುರ್ಚಿ ಕಾದಾಟ ತೀವ್ರಗೊಳ್ಳುತ್ತಿದ್ದಂತೆ, ಅಹಿಂದ ಸಮಾವೇಶದ ಹೆಸರಿನಲ್ಲಿ ಭಾರೀ ರಾಜಕೀಯ ಚಟುವಟಿಕೆಗಳಿಗೆ ವೇಗ ಸಿಕ್ಕಿದೆ. ಮುಖ್ಯಮಂತ್ರಿ…
ಮೈಸೂರು: ಚಿರತೆಯೊಂದು ರಾತ್ರೋರಾತ್ರಿ ಬೀದಿ ನಾಯಿಯನ್ನು ಹೊತ್ತೊಯ್ದಿರುವ ಘಟನೆ ಮೈಸೂರಿನ ಹೊರವಲಯದ ಬೆಳಗಾವಿ ಗ್ರಾಮದಲ್ಲಿ ನಡೆದಿದೆ. ಮೈಸೂರು ಜಿಲ್ಲೆಯಲ್ಲಿ ಕಾಡು…
ಬೆಂಗಳೂರು,- ನಿರಂತರ ಏರಿಕೆಯಿಂದಾಗಿ ಚಿನ್ನ, ಬೆಳ್ಳಿ ಬೆಲೆಯು ಸಾರ್ವಕಾಲಿಕ ದಾಖಲೆ ಸೃಷ್ಟಿಸಿದೆ. ಇಂದು ಪ್ರತೀ ಗ್ರಾಂ ಚಿನ್ನಕ್ಕೆ (24 ಕ್ಯಾರೆಟ್)…
ಅಮೇರಿಕಾ: ಯುವ ರೋಗಿಯನ್ನು ಹಾಗೂ ಇತರ ಏಳು ಜನರನ್ನು ಸಾಗಿಸುತ್ತಿದ್ದ ಮೆಕ್ಸಿಕ್ನ ನೌಕಾಪಡೆಯ ಸಣ್ಣ ವಿಮಾನವು ಗಾಲ್ವೆಸ್ಟನ್ ಬಳಿ ಪತನಗೊಂಡು…
ಬೆಂಗಳೂರು: 17ನೇ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವಕ್ಕೆ ರಾಯಭಾರಿಯಾಗಿ ನಟ ಪ್ರಕಾಶ್ ರಾಜ್ ಅವರನ್ನು ಆಯ್ಕೆ ಮಾಡಲಾಗಿದೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.…
ಬೆಂಗಳೂರು: ನಾಯಕತ್ವದ ಬದಲಾವಣೆಯ ವಿಚಾರವಾಗಿ ಹೈಕಮಾಂಡ್ ನಾಯಕರು ಹೇಳಿದಂತೆ ನಡೆದುಕೊಳ್ಳುತ್ತೇವೆ. ಸ್ಥಳೀಯ ನಾಯಕರೇ ಗೊಂದಲಗಳನ್ನು ಬಗೆಹರಿಸಿಕೊಳ್ಳಬೇಕು ಎಂದು ಎಐಸಿಸಿ ಅಧ್ಯಕ್ಷ…