Mysore
17
clear sky

Social Media

ಸೋಮವಾರ, 23 ಡಿಸೆಂಬರ್ 2024
Light
Dark

ನಕಲಿ ವೋಟರ್ ಐಡಿ ತಯಾರಿಕೆ ಭೈರತಿ ಸುರೇಶ್ ಆಪ್ತ ಸಿಸಿಬಿ ವಶಕ್ಕೆ

ಬೆಂಗಳೂರು : ಲೋಕಸಭಾ ಚುನಾವಣೆ ಹೊತ್ತಲ್ಲಿ ನಕಲಿ ವೋಟರ್ ಐಡಿ ತಯಾರಿಸುತ್ತಿದ್ದ ಸಚಿವ ಭೈರತಿ ಸುರೇಶ್ ಆಪ್ತನನ್ನು ಸಿಸಿಬಿ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ.

ಸಚಿವರ ಆಪ್ತನಾದ ಮೌನೇಶ್ ಕುಮಾರ್‌ನನ್ನು ವಶಕ್ಕೆ ಪಡೆಯಲಾಗಿದೆ. ಅಲ್ಲದೇ ಈತನ ಜೊತೆಗೆ ಶಾಮೀಲಾಗಿದ್ದ ಭಗತ್ ಹಾಗೂ ರಾಘವೇಂದ್ರ ಎಂಬವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ. ಆರೋಪಿಗಳು ಹಣ ಕೊಟ್ಟರೆ ನಕಲಿ ವೋಟರ್ ಐಡಿ, ಆಧಾರ್ ಕಾರ್ಡ್ ಹಾಗೂ ಡಿಎಲ್‍ನ್ನು ಮಾಡಿಕೊಡುತ್ತಿದ್ದರು ಎಂದು ಆರೋಪಿಸಲಾಗಿದೆ.

ಆರೋಪಿಗಳು ಯಾವುದೇ ಕ್ಷೇತ್ರದ ವೋಟರ್ ಐಡಿ ಹಾಗೂ ಯಾವುದೇ ಆಧಾರ್ ಕೇಳಿದರೂ ಮಾಡಿಕೊಡುತ್ತಿದ್ದರು. ಈ ಬಗ್ಗೆ ಮಾಹಿತಿ ಪಡೆದು ಕನಕನಗರದಲ್ಲಿರುವ ಎಂಎಸ್‍ಎಲ್ ಟೆಕ್ನೊ ಸಲ್ಯೂಷನ್ ಕಂಪನಿ ಮೇಲೆ ದಾಳಿ ನಡೆಸಲಾಗಿದೆ. ಪೊಲೀಸರು ಆರೋಪಿಗಳನ್ನು ತೀವ್ರ ವಿಚಾರಣೆ ನಡೆಸುತ್ತಿದ್ದಾರೆ.

ಈ ಸಂಬಂಧ ಹೆಬ್ಬಾಳ ಪೊಲೀಸ್ ಠಾಣೆಯಲ್ಲಿ ಎಫ್‍ಐಆರ್ ದಾಖಲಾಗಿದೆ.

Tags:

ಸುದ್ದಿ ಬಗ್ಗೆ ನಿಮ್ಮ ಅಭಿಪ್ರಾಯ ತಿಳಿಸಿ