ಬೆಂಗಳೂರು : ಲೋಕಸಭಾ ಚುನಾವಣೆ ಹೊತ್ತಲ್ಲಿ ನಕಲಿ ವೋಟರ್ ಐಡಿ ತಯಾರಿಸುತ್ತಿದ್ದ ಸಚಿವ ಭೈರತಿ ಸುರೇಶ್ ಆಪ್ತನನ್ನು ಸಿಸಿಬಿ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ.
ಸಚಿವರ ಆಪ್ತನಾದ ಮೌನೇಶ್ ಕುಮಾರ್‌ನನ್ನು ವಶಕ್ಕೆ ಪಡೆಯಲಾಗಿದೆ. ಅಲ್ಲದೇ ಈತನ ಜೊತೆಗೆ ಶಾಮೀಲಾಗಿದ್ದ ಭಗತ್ ಹಾಗೂ ರಾಘವೇಂದ್ರ ಎಂಬವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ. ಆರೋಪಿಗಳು ಹಣ ಕೊಟ್ಟರೆ ನಕಲಿ ವೋಟರ್ ಐಡಿ, ಆಧಾರ್ ಕಾರ್ಡ್ ಹಾಗೂ ಡಿಎಲ್‍ನ್ನು ಮಾಡಿಕೊಡುತ್ತಿದ್ದರು ಎಂದು ಆರೋಪಿಸಲಾಗಿದೆ.
ಆರೋಪಿಗಳು ಯಾವುದೇ ಕ್ಷೇತ್ರದ ವೋಟರ್ ಐಡಿ ಹಾಗೂ ಯಾವುದೇ ಆಧಾರ್ ಕೇಳಿದರೂ ಮಾಡಿಕೊಡುತ್ತಿದ್ದರು. ಈ ಬಗ್ಗೆ ಮಾಹಿತಿ ಪಡೆದು ಕನಕನಗರದಲ್ಲಿರುವ ಎಂಎಸ್‍ಎಲ್ ಟೆಕ್ನೊ ಸಲ್ಯೂಷನ್ ಕಂಪನಿ ಮೇಲೆ ದಾಳಿ ನಡೆಸಲಾಗಿದೆ. ಪೊಲೀಸರು ಆರೋಪಿಗಳನ್ನು ತೀವ್ರ ವಿಚಾರಣೆ ನಡೆಸುತ್ತಿದ್ದಾರೆ.
ಈ ಸಂಬಂಧ ಹೆಬ್ಬಾಳ ಪೊಲೀಸ್ ಠಾಣೆಯಲ್ಲಿ ಎಫ್‍ಐಆರ್ ದಾಖಲಾಗಿದೆ.
ಮುಂಬೈ: ಸಿಜೆಪಿ ಸಂಸ್ಥಾಪಕ ಅಭಿಜಿತ್ ದೀಪ್ಕೆ ಅವರನ್ನು ದೆಹಲಿ ಪೊಲೀಸರು ವಶಕ್ಕೆ ಪಡೆದ ಗಂಟೆಗಳಲ್ಲಿ ಅವರ ಅಜ್ಜಿ ನಿಧನರಾಗಿದ್ದಾರೆ. ದೀರ್ಘಕಾಲದ…
ಮೈಸೂರು: ಮೈಸೂರಿನ ದಸರಾ ಮಹೋತ್ಸವದ ಉದ್ಘಾಟನೆಗೆ ಚಾಮುಂಡಿಬೆಟ್ಟದಲ್ಲಿ ಭರ್ಜರಿ ಸಿದ್ಧತೆಗಳು ನಡೆಯುತ್ತಿವೆ. ಉದ್ಘಾಟನಾ ಸಮಾರಂಭಕ್ಕಾಗಿ ಬೃಹತ್ ವೇದಿಕೆ ನಿರ್ಮಾಣ ಕಾರ್ಯ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಮಹಾಲಯ ಅಮಾವಾಸ್ಯೆ ಪ್ರಯುಕ್ತ ತಾಲ್ಲೂಕಿನ ಶ್ರೀ ಕ್ಷೇತ್ರ ಮಲೆ ಮಹದೇಶ್ವರ…
ನವದೆಹಲಿ: ಅಭಿಜಿತ್ ದೀಪ್ಕೆ ಪೊಲೀಸ್ ವಶದಲ್ಲಿರುವ ಹಿನ್ನೆಲೆಯಲ್ಲಿ, ಜಂತರ್ ಮಂತರ್‌ನಲ್ಲಿ ನಡೆಯುತ್ತಿರುವ ಪ್ರತಿಭಟನೆಗೆ ಸಿಜೆಪಿಯ ಸಂಘಟನಾ ಉಸ್ತುವಾರಿ ಅಜಿಂಕ್ಯ ಶಿಂಧೆ…
ಚುನಾವಣಾ ಆಯೋಗದ ವಿರುದ್ಧ ವಿಪಕ್ಷಗಳು ಹಾಗೂ ಕೆಲವು ಸಂಘಟನೆಗಳು ಪ್ರತಿಭಟನೆಗಳನ್ನು ಮಾಡುತ್ತಿರುವುದು ಪ್ರಸ್ತುತ ರಾಜಕೀಯ ಮತ್ತು ಸಾಮಾಜಿಕ ವಾತಾವರಣ ದಲ್ಲಿ…
ಮೈಸೂರಿನಲ್ಲಿ ಇ-ಖಾತಾ ಹಾಗೂ ಸಿ ಆರ್ ವಿತರಣೆ ಸಂಬಂಧ ಸಾರ್ವಜನಿಕರಿಂದ ಕುಂದು ಕೊರತೆ ಆಲಿಸಿದ ನಂತರ ಮೈಸೂರು ನಗರ ಪಾಲಿಕೆಯ…