ಇಂದು ( ಡಿಸೆಂಬರ್ 12 ) ನಡೆದ ರಾಜಸ್ಥಾನ ಬಿಜೆಪಿ ಶಾಸಕಾಂಗ ಸಭೆಯಲ್ಲಿ ರಾಜ್ಯದ ಮುಂದಿನ ಮುಖ್ಯಮಂತ್ರಿಯ ಹೆಸರನ್ನು ಘೋಷಣೆ ಮಾಡಲಾಗಿದೆ. ರಾಜಸ್ಥಾನದ ನೂತನ ಮುಖ್ಯಮಂತ್ರಿಯಾಗಿ ಭಜನ್‌ಲಾಲ್ ಶರ್ಮಾ ಆಯ್ಕೆಯಾಗಿದ್ದಾರೆ. ವಸುಂದರಾ ರಾಜೇ ಅವರು ಭಜನ್‌ಲಾಲ್ ಶರ್ಮಾ ಅವರ ಹೆಸರನ್ನು ಘೋಷಣೆ ಮಾಡಿದ್ದಾರೆ.
ಸಂಗನೇರ್ ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧೆ ಮಾಡಿದ್ದ ಭಜನ್‌ಲಾಲ್ ಶರ್ಮಾ ಬರೋಬ್ಬರಿ 48000 ಮತಗಳ ಅಂತರದಿಂದ ಜಯ ಸಾಧಿಸಿದ್ದರು. ಪಕ್ಷದ ಪರ 4 ಬಾರಿ ರಾಜ್ಯ ಪ್ರಧಾನ ಕಾರ್ಯದರ್ಶಿಯಾಗಿ ಕೆಲಸ ನಿರ್ವಹಿಸಿರುವ ಭಜನ್‌ಲಾಲ್ ಇದೀಗ ಮುಖ್ಯಮಂತ್ರಿಯಾಗಿ ಹೊಸ ಇನ್ನಿಂಗ್ಸ್ ಆರಂಭಿಸಲಿದ್ದಾರೆ. ಇನ್ನು ಉಪಮುಖ್ಯಮಂತ್ರಿಗಳನ್ನಾಗಿ ಪ್ರೇಮ್‌ಚಂದ್ ಭೈರ್ವಾ ಹಾಗೂ ದಿಯಾ ಕುಮಾರಿ ಅವರನ್ನು ಆಯ್ಕೆ ಮಾಡಿದ್ದಾರೆ.
ಭಜನ್‌ಲಾಲ್ ಶರ್ಮಾ ಚುನಾವಣಾ ಆಯೋಗಕ್ಕೆ ಸಲ್ಲಿಸಿರುವ ಅಫಿಡವಿಟ್ ಪ್ರಕಾರ ಅವರಿಗೆ 56 ವರ್ಷ ವಯಸ್ಸಾಗಿದ್ದು, ಸ್ನಾತಕೋತ್ತರ ಪದವೀಧರನಾಗಿದ್ದಾರೆ. ಅವರು ಒಟ್ಟು 1.5 ಕೋಟಿ ಆಸ್ತಿಯನ್ನು ಘೋಷಣೆ ಮಾಡಿದ್ದು, ಇದರಲ್ಲಿ 43.6 ಲಕ್ಷ ರೂಪಾಯಿಗಳ ಚರಾಸ್ತಿ ಹಾಗೂ 1 ಕೋಟಿಯ ಚಿರಾಸ್ತಿಗಳು ಸೇರಿವೆ.
ಚಾಮರಾಜನಗರ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಿಂದ ತಾಲ್ಲೂಕಿನ ಅಂಗನವಾಡಿ ಕೇಂದ್ರಗಳಿಗೆ ಕೋಳಿಮೊಟ್ಟೆ ವಿತರಣೆಗಾಗಿ ನೀಡಲಾಗುವ ಅನುದಾನ ಕಳೆದ ೬ತಿಂಗಳಿಂದ…
ಗುತ್ತಲು ಕೆರೆ, ಕಾಳೇನಹಳ್ಳಿ ಘನ ತ್ಯಾಜ್ಯ ವಿಲೇವಾರಿ ಘಟಕಕ್ಕೆ ಜಿಲ್ಲಾಧಿಕಾರಿ ಡಾ.ಕುಮಾರ ಭೇಟಿ ಮಂಡ್ಯ: ನಗರದ ಗುತ್ತಲು ಕೆರೆಗೆ ತ್ಯಾಜ್ಯ…
ಪ್ರಶಾಂತ್ ಎಸ್. ಆರು ತಿಂಗಳಿನಿಂದ ಶುದ್ಧ ಕುಡಿಯುವ ನೀರಿನ ಘಟಕ ಸ್ಥಗಿತ ನೀರಿನ ಘಟಕ ನಿರ್ವಹಣೆ ಮಾಡುವಲ್ಲಿ ಕೆಎಸ್‌ಆರ್‌ಟಿಸಿ ವಿಫಲ…
ಗಿರೀಶ್ ಹುಣಸೂರು ಹೊಸ ವರ್ಷಾಚರಣೆ, ಕ್ರಿಸ್‌ಮಸ್ ರಜೆ ನಿರೀಕ್ಷೆಯಲ್ಲಿ ವ್ಯಾಪಾರಸ್ಥರು, ಉದ್ಯಮಿಗಳು ಮೈಸೂರು: ೨೦೨೫ನೇ ವರ್ಷಕ್ಕೆ ವಿದಾಯ ಹೇಳಿ, ೨೦೨೬ರ…
ಮಂಡ್ಯ : ಕೊಬ್ಬರಿ ಶೆಡ್ ಗೆ ಬೆಂಕಿ ಬಿದ್ದು ಲಕ್ಷಾಂತರ ರೂ. ಮೌಲ್ಯದ ಕೊಬ್ಬರಿ ನಾಶವಾಗಿರುವ ಘಟನೆ ತಾಲೂಕಿನ ಗುನ್ನಾಯಕನಹಳ್ಳಿಯಲ್ಲಿ…