Mysore
22
overcast clouds

Social Media

ಗುರುವಾರ, 19 ಡಿಸೆಂಬರ್ 2024
Light
Dark

ಸಂತ್ರಸ್ತೆ ಅಪಹರಣ ಪ್ರಕರಣ: ಭವಾನಿ ರೇವಣ್ಣಗೆ ನಿರೀಕ್ಷಣಾ ಜಾಮೀನು ಮಂಜೂರು

ಬೆಂಗಳೂರು: ಹಾಸನ ಮಾಜಿ ಸಂಸದ ಪ್ರಜ್ವಲ್‌ ರೇವಣ್ಣ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಕೆ.ಆರ್‌ ನಗರ ಸಂತ್ರಸ್ತೆ ಮಹಿಳೆ ಅಪಹರಣ ಪ್ರಕರಣದಲ್ಲಿ ಭವಾನಿ ರೇವಣ್ಣ ಅವರಿಗೆ ಜಾಮೀನು ಮಂಜೂರಾಗಿದೆ.

ಮೈಸೂರಿನ ಕೆ.ಆರ್‌ ನಗರ ಮಹಿಳೆ ಅಪಹರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಎಚ್‌ಡಿ ರೇವಣ್ಣ ಅವರು ಜೈಲು ಪಾಲಾಗಿ ಬಳಿಕ ಹೊರಬಂದಿದ್ದರು. ಇನ್ನು ಭವಾನಿ ಅವರ ಪ್ರಕರಣವನ್ನು ಕಾಯ್ದಿರಿಸಿದ್ದ, ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದ ಕೃಷ್ಣ ಎಂ. ದೀಕ್ಷಿತ್‌ ಅವರಿದ್ದ ಏಕಪೀಠ ಸದಸ್ಯ ನ್ಯಾಯಾಪೀಠ ಇಂದು ತೀರ್ಪು ನೀಡಿದೆ.

ಭವಾನಿ ರೇವಣ್ಣ ಅವರನ್ನು ಅಪಹರಣಕ್ಕೆ ಸಂಬಂಧಿಸಿದಂತೆ ಏಪ್ರಿಲ್‌. 28ರಂದು ಪ್ರಕರಣ ದಾಖಲಿಸಲಾಗಿತ್ತು. ಇದೇ ಜೂನ್‌. 7ರಂದು ನಿರೀಕ್ಷಣಾ ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದರು. ಇನ್ನು ಇವರನ್ನು ಬಂಧಿಸದಂತೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಆದೇಶ ಹೊರಡಿಸಿ ಮಧ್ಯಂತರ ಜಾಮೀನು ನೀಡಿ, ತನಿಖೆಗೆ ಸಹಕರಿಸುವಂತೆ ಆದೇಶಿಸಿತ್ತು.

Tags: