BREAKING NEWS

ಬೀದರ್: ಕಾಂಗ್ರೆಸ್ ಸೇರಿದ ಸಂಜಯ್ ಖೇಣಿ

ಬೀದರ್: ಬೀದರ್ ಸಹಕಾರ ಸಕ್ಕರೆ ಕಾರ್ಖಾನೆಯ ಮಾಜಿ ಅಧ್ಯಕ್ಷ ಸಂಜಯ್ ಖೇಣಿ ಬಿಜೆಪಿ ತೊರೆದು ಕಾಂಗ್ರೆಸ್‍ಗೆ ಸೇರ್ಪಡೆಯಾದರು.
ನಗರದ ರಾಂಪುರೆ ಕಾಲೊನಿಯ ಬೀದರ್ ದಕ್ಷಿಣ ಕಾಂಗ್ರೆಸ್ ಘೋಷಿತ ಅಭ್ಯರ್ಥಿ ಅಶೋಕ ಖೇಣಿ ನಿವಾಸದಲ್ಲಿ ಅವರು ಪಕ್ಷ ಸೇರಿದರು.

ಅಶೋಕ ಖೇಣಿ ಅವರ ನಿವಾಸಕ್ಕೆ ನೂರಾರು ಕಾರ್ಯಕರ್ತರೊಂದಿಗೆ ಬಂದ ಅವರನ್ನು ಪಟಾಕಿ ಸಿಡಿಸಿ ಬರಮಾಡಿಕೊಳ್ಳಲಾಯಿತು. ಅಶೋಕ ಖೇಣಿ ಅವರು ಪುಷ್ಪಗುಚ್ಛ ನೀಡಿ ಸ್ವಾಗತಿಸಿ ಪಕ್ಷಕ್ಕೆ ಬರಮಾಡಿಕೊಂಡರು.

ಸಂಜಯ್ ಖೇಣಿ ಅವರು 2013 ರ ವಿಧಾನಸಭೆ ಚುನಾವಣೆಯಲ್ಲಿ ಅಶೋಕ ಖೇಣಿ ಅವರ ಗೆಲುವಿನಲ್ಲಿ ಪ್ರಮುಖ ಪಾತ್ರ ವಹಿಸಿದ್ದರು.
ಕಾಂಗ್ರೆಸ್ ಜಿಲ್ಲಾ ಘಟಕದ ಅಧ್ಯಕ್ಷ ಬಸವರಾಜ ಜಾಬಶೆಟ್ಟಿ, ಉಪಾಧ್ಯಕ್ಷ ಬಾಬುರಾವ್ ತುಂಬಾ, ಬೀದರ್ ದಕ್ಷಿಣ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಚಂದ್ರಶೇಖರ ಚನಶೆಟ್ಟಿ, ಕರೀಂಸಾಬ ಕಮಠಾಣ, ಲೋಕೇಶ ಕನಶೆಟ್ಟಿ ಮೊದಲಾದವರು ಇದ್ದರು.

andolanait

Recent Posts

ಮಾಲ್ದಾರೆ ಅರಣ್ಯ ಮಾರ್ಗದಲ್ಲಿ ಪ್ರವಾಸಿಗರಿಗೆ ಹುಲಿ ದರ್ಶನ

ಮಡಿಕೇರಿ: ಸಿದ್ದಾಪುರದಿಂದ ಮೈಸೂರಿಗೆ ಸಂಪರ್ಕ ಕಲ್ಪಿಸುವ ಮಾಲ್ದಾರೆ ಗ್ರಾಮ ಸಮೀಪದ ಕುಶಾಲನಗರ ಹಾಗೂ ದೇವಮತಿ ಅರಣ್ಯ ಪ್ರದೇಶದಲ್ಲಿ ಪ್ರವಾಸಿಗರಿಗೆ ಹುಲಿಯೊಂದು…

8 mins ago

ಬಿಜೆಪಿಗೆ ಮರಳುವ ಚಿಂತನೆ ಮಾಡಿಲ್ಲ: ಎಸ್.ಟಿ.ಸೋಮಶೇಖರ್‌

ಬೆಂಗಳೂರು: ನಾನು ಬಿಜೆಪಿಗೆ ಮರಳುವ ಚಿಂತನೆ ಮಾಡಿಲ್ಲ. ಕಾಂಗ್ರೆಸ್‌ಗೆ ಹೋಗುತ್ತೇನೆ ಎಂದು ಶಾಸಕ ಎಸ್.ಟಿ.ಸೋಮಶೇಖರ್‌ ಹೇಳಿದ್ದಾರೆ. ಈ ಬಗ್ಗೆ ಮಾಧ್ಯಮದವರೊಂದಿಗೆ…

1 hour ago

ಬಿಹಾರದ ನಳಂದಾ ದೇಗುಲದಲ್ಲಿ ಕಾಲ್ತುಳಿತ: 8 ಮಂದಿ ಸಾವು

ನಳಂದಾ: ಬಿಹಾರದ ನಳಂದಾ ಜಿಲ್ಲೆಯ ಶೀತಲಾ ದೇವಸ್ಥಾನದ ಧಾರ್ಮಿಕ ಸಮಾರಂಭವೊಂದರಲ್ಲಿ ಸಂಭವಿಸಿದ ಕಾಲ್ತುಳಿತದಲ್ಲಿ ಕನಿಷ್ಠ ಎಂಟು ಮಂದಿ ಮಹಿಳೆಯರು ಸಾವನ್ನಪ್ಪಿದ್ದಾರೆ.…

1 hour ago

ಕೌಟುಂಬಿಕ ಕಲಹ: ಬೆಂಗಳೂರಿನಲ್ಲಿ ಟೆಕ್ಕಿ ದಂಪತಿ ಆತ್ಮಹತ್ಯೆ

ಬೆಂಗಳೂರು: ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ಟೆಕ್ಕಿ ದಂಪತಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಕೊತ್ತನೂರು ಪೊಲೀಸ್‌ ಠಾಣೆ ವ್ಯಾಪ್ತಿಯ ಖಾಸಗಿ ಅಪಾರ್ಟ್‌ಮೆಂಟ್‌ನಲ್ಲಿ…

2 hours ago

ಉಜ್ವಲ ಹೋಯ್ತು, ಈಗ ಸೌದೆ ಯೋಜನೆ ಸ್ಟಾರ್ಟ್‌: ಡಿಸಿಎಂ ಡಿ.ಕೆ.ಶಿವಕುಮಾರ್‌ ವಾಗ್ದಾಳಿ

ಬೆಂಗಳೂರು: ಸೌದೆ ಮುಕ್ತ ಭಾರತ ಮಾಡ್ತೀವಿ ಎಂದು ಹೇಳಿ ಎಲ್ಲಾ ಕಡೆ ಗ್ಯಾಸ್‌ ತಂದರು. ಹಳ್ಳಿಗಳಲ್ಲೂ ಗ್ಯಾಸ್‌ ಬಂತು. ಈಗ…

2 hours ago

ಇರಾನ್‌ನ ಇಸ್ಫಹಾನ್‌ನಲ್ಲಿ ಸರಣಿ ಸ್ಫೋಟ

ಟೆಹರಾನ್:‌ ಇರಾನ್‌ ಮೇಲೆ ಅಮೇರಿಕಾ ಹಾಗೂ ಇಸ್ರೇಲ್‌ ತನ್ನ ಪ್ರತೀಕಾರ ಮುಂದುವರಿಸಿದೆ. ಇರಾನ್‌ನ ಇಸ್ಪಹಾನ್‌ ನಗರದಲ್ಲಿರುವ ಮಿಲಿಟರಿ ಕೇಂದ್ರದ ಮೇಲೆ…

3 hours ago