BREAKING NEWS

ಕಾವೇರಿ ವಿಚಾರದಲ್ಲಿ ಕರ್ನಾಟಕಕ್ಕೆ ದೊಡ್ಡ ಅನ್ಯಾಯವಾಗಿದೆ : ಎಚ್‌ಡಿಡಿ

ನವದೆಹಲಿ : ಕಾವೇರಿ ನೀರು ವಿಚಾರದಲ್ಲಿ ನಮ್ಮ ರಾಜ್ಯ ಸರ್ಕಾರ ತೆಗೆದುಕೊಂಡ ನಿರ್ಣಯ ದುರಂತ. ಯಾವ ಆಧಾರದಲ್ಲಿ ನಿರ್ಧಾರ ತೆಗೆದುಕೊಂಡರು ಗೊತ್ತಿಲ್ಲ ಎಂದು ಮಾಜಿ ಪ್ರಧಾನಿ ಎಚ್‌ಡಿ ದೇವೇಗೌಡರು ಹೇಳಿದ್ದಾರೆ.

ತಮಿಳುನಾಡಿಗೆ ನಿತ್ಯ 5,000 ಕ್ಯೂಸೆಕ್ ನೀರು ಹರಿಸಲು ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ ಆದೇಶ ವಿಚಾರವಾಗಿ ನವದೆಹಲಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕರ್ನಾಟಕಕ್ಕೆ ದೊಡ್ಡ ಅನ್ಯಾಯವಾಗಿದೆ. ಇವತ್ತಿನ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರದ ಆದೇಶ ಮಹತ್ತರವಾದ ಪೆಟ್ಟು. ಬೆಂಗಳೂರಿಗೆ ಕುಡಿಯುವ ನೀರು ಬೇಕು. ಮುಂದೇನು ಆಗುತ್ತೆ ಗೊತ್ತಿಲ್ಲ ಎಂದು ಬೇಸರ ವ್ಯಕ್ತಪಡಿಸಿದರು.

ನಾವು ಎಲ್ಲೋ ಒಂದು ಕಡೆ ಎಡವಿದ್ದೇವೆ. ನಮ್ಮ ರಾಜ್ಯದಲ್ಲಿ ಆಗುತ್ತಿರುವ ಅನ್ಯಾಯಕ್ಕೆ ಮೊದಲು ಧರಣಿ ಮಾಡಿದ್ದೆ. ಧರಣಿ ಕೂತು ಸಮಸ್ಯೆಗೆ ಪರಿಹಾರ ಕಂಡುಕೊಂಡಿದ್ದೇವೆ. ಇಂದು ಸದನದಲ್ಲಿ ಕಾವೇರಿ ವಿಚಾರ ಎತ್ತಿದ್ದೇನೆ. ಕರ್ನಾಟಕ, ತಮಿಳುನಾಡಿಗೆ ಸಂಬಂಧ ಇಲ್ಲದ ಅಧಿಕಾರಿಗಳನ್ನು ಗ್ರೌಂಡ್‌ಗೆ ಕಳುಹಿಸಲಿ. ವಾಸ್ತವಿಕ ವರದಿಯನ್ನು ಅಧಿಕಾರಿಗಳ ತಂಡ ಸಲ್ಲಿಸಲಿ. ನಾವು ಒಪ್ಪಿಕೊಳ್ಳುತ್ತೇವೆ, ಆದರೆ ತಮಿಳುನಾಡು ಒಪ್ಪಿಕೊಳ್ಳುತ್ತಿಲ್ಲ. ತಮಿಳುನಾಡಿನ ರಾಜಕಾರಣಿಗಳಲ್ಲಿ ಒಗ್ಗಟ್ಟು ಇದೆ. ನಮ್ಮ ರಾಜಕಾರಣಿಗಳಲ್ಲಿ ಇಲ್ಲ ಎಂದು ಹೇಳಿದರು.

ಬಿಜೆಪಿ-ಜೆಡಿಎಸ್ ಮೈತ್ರಿ ವಿಚಾರವಾಗಿ ಪ್ರತಿಕ್ರಿಯಿಸಿದ ಅವರು, ನಾನ್ಯಾವತ್ತೂ ಪ್ರತ್ಯೇಕವಾಗಿ ಪ್ರಧಾನಿಯನ್ನು ಭೇಟಿಯಾಗಲ್ಲ. ಇಂಡಿಯಾ ಸಭೆಗೆ ಕರೆಯುವುದೇ ಬೇಡ ಎಂದು ಸಿದ್ದರಾಮಯ್ಯ ಹೇಳಿದ್ದಾರೆ. ನಿತೀಶ್ ಕುಮಾರ್‌ಗೆ ಸಿದ್ದರಾಮಯ್ಯ ಹೇಳಿದ್ದಾರೆ. ಬಿಜೆಪಿ ಮೈತ್ರಿ ವಿಚಾರವಾಗಿ ನಾನು ಯಾರನ್ನೂ ಭೇಟಿಯಾಗಲ್ಲ. ಚರ್ಚೆಗೆ ಬಂದಾಗ ಮಾತನಾಡುತ್ತೇವೆ. ಈಗ ಎಲ್ಲಿದ್ದೇವೆ ಅಲ್ಲೇ ಇರುತ್ತೇವೆ. ಈಗ ಮೈತ್ರಿ ಬಗ್ಗೆ ಯಾವುದೇ ಚರ್ಚೆ ಇಲ್ಲ ಎಂದರು.

lokesh

Recent Posts

ಕಾಪಿರೈಟ್‌ ಉಲ್ಲಂಘನೆ ಆರೋಪ ಪ್ರಕರಣ: ನಟ ರಕ್ಷಿತ್‌ ಶೆಟ್ಟಿಗೆ 25 ಲಕ್ಷ ರೂ ದಂಡ ವಿಧಿಸಿ ಹೈಕೋರ್ಟ್‌ ಆದೇಶ

ಬೆಂಗಳೂರು: ಕಾಪಿ ರೈಟ್‌ ಉಲ್ಲಂಘನೆ ಆರೋಪ ಪ್ರಕರಣದಲ್ಲಿ ನಟ ರಕ್ಷಿತ್‌ ಶೆಟ್ಟಿ ಅವರಿಗೆ ದೆಹಲಿ ಹೈಕೋರ್ಟ್‌ 25 ಲಕ್ಷ ದಂಡ…

42 mins ago

ಹನೂರು| ಪೊನ್ನಾಚಿ ಗ್ರಾಮದಲ್ಲಿ ಜರುಗಿದ ಕುಳ್ಳುಮಾರಮ್ಮ ಹಾಗೂ ಬಸವೇಶ್ವರ ಸ್ವಾಮಿ ಕೊಂಡೋತ್ಸವ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಪೊನ್ನಾಚಿ ಗ್ರಾಮದಲ್ಲಿ ಗ್ರಾಮ ದೇವತೆ ಹಬ್ಬದ ಅಂಗವಾಗಿ ಶ್ರೀ…

53 mins ago

ಹನೂರು| ಹಿಟಾಚಿ ವಾಹನಗಳಲ್ಲಿ ಬ್ಯಾಟರಿ, ಡೀಸೆಲ್‌ ಕಳ್ಳತನ: ದೂರು ದಾಖಲು

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಮಹಾಲಿಂಗನ ಕಟ್ಟೆ ಬಸ್ ನಿಲ್ದಾಣದ ಬಳಿ ನಿಲ್ಲಿಸಿದ್ದ ಹಿಟಾಚಿ ವಾಹನಗಳಲ್ಲಿ…

59 mins ago

ಪಂಜುಗಂಗೊಳ್ಳಿ ಅವರ ವಾರದ ಅಂಕಣ: ಅಪಹರಣ ಸಂತ್ರಸ್ತೆಯರ ಕಡಿದ ಬದುಕನ್ನು ಜೋಡಿಸುವ ನಸೀಮಾ

ನಾಲ್ಕು ಸಾವಿರಕ್ಕೂ ಹೆಚು ಜನರಿಗೆ ಬದುಕು ರೂಪಿಸಿದ ಉತ್ಥಾನ್ ಕಲೆಕ್ಟಿವ್ ‘ಉತ್ಥಾನ್ ಕಲೆಕ್ಟಿವ್’ ಎಂಬುದು ಅಪಹರಣ ಸಂತ್ರಸ್ತೆಯರಿಗೆ ಆಶ್ರಯ ನೀಡಿ,…

1 hour ago

ಚಾಮರಾಜನಗರ ಜಿಲ್ಲೆಯಲ್ಲಿ ಜಾನುವಾರುಗಳಿಗೆ ನೀರು, ಲಸಿಕೆಗೆ ಸಜ್ಜು

ಬೇಸಿಗೆ ಕಾರಣ ಗ್ರಾಮಮಟ್ಟದ ಸಿಮೆಂಟ್ ತೊಟ್ಟಿಗಳಿಗೆ ನೀರು ತುಂಬಿಸಲು ಜಿಲ್ಲಾಧಿಕಾರಿ, ಸಿಇಒ ಸೂಚನೆ  ಚಾಮರಾಜನಗರ: ಬೇಸಿಗೆಯ ಈ ದಿನಗಳಲ್ಲಿ ಜಾನುವಾರುಗಳಿಗೆ…

1 hour ago

ಮೈಸೂರು ಜಿಲ್ಲೆಯಲ್ಲಿ ಹಾವು ಕಡಿತ ಪ್ರಕರಣಗಳ ಸಂಖ್ಯೆ ಹೆಚ್ಚಳ

ಮೈಸೂರು: ಗ್ರಾಮಾಂತರ ಪ್ರದೇಶದ ಸಾರ್ವಜನಿಕರು ಹಾಗೂ ಕೃಷಿ ಚಟುವಟಿಕೆಯಲ್ಲಿ ತೊಡಗುವ ರೈತರಿಗೆ ಹಾವುಗಳಿಂದ ರಕ್ಷಣೆ ಪಡೆಯುವ ಅರಿವಿನ ಕೊರತೆ ಕಾರಣದಿಂದ…

2 hours ago