ನಟ, ಬಿಗ್‌ಬಾಸ್‌-13ರ ವಿಜೇತ ಸಿದ್ದಾರ್ಥ್‌ ಶುಕ್ಲಾ ನಿಧನ

ಮುಂಬೈ: ಜನಪ್ರಿಯ ಕಿರುತೆರೆ ನಟ ಮತ್ತು ಬಿಗ್‌ಬಾಸ್-13ರ ವಿಜೇತ ಸಿದ್ಧಾರ್ಥ್ ಶುಕ್ಲಾ ಹೃದಯಾಘಾತದಿಂದ ಮುಂಬೈನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು. ಅವರಿಗೆ 40 ವರ್ಷ ವಯಸ್ಸಾಗಿತ್ತು.

ಬಾಲಿವುಡ್ ಸಿನಿಮಾಗಳಲ್ಲೂ ನಟಿಸಿರುವ ಸಿದ್ಧಾರ್ಥ್ ಅವರಿಗೆ ಗುರುವಾರ ಬೆಳಗ್ಗೆ ತೀವ್ರ ಹೃದಯಾಘಾತವಾಯಿತು. ತಕ್ಷಣ ಅವರನ್ನು ಕೂಪರ್ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಚಿಕಿತ್ಸೆ ಫಲಕಾರಿಯಾಗದೇ ಅವರು ಕೊನೆಯುಸಿರೆಳೆದರು. ತಾಯಿ ಮತ್ತು ಇಬ್ಬರು ಸಹೋದರರನ್ನು ಅವರು ಅಗಲಿದ್ದಾರೆ.

ಕಿರುತೆರೆಯ ಬಾಲಿಕಾ ವಧು ಧಾರಾವಾಹಿಯಲ್ಲಿ ಪ್ರಮುಖ ಪಾತ್ರ ನಿರ್ವಹಿಸಿದ್ದ ಸಿದ್ದಾರ್ಥ್, ಕೆಲವು ಹಿಂದಿ ಸಿನಿಮಾಗಳಲ್ಲೂ ನಟಿಸಿದ್ದರು.

ಸಿದ್ಧಾರ್ಥ್ ಶುಕ್ಲಾ ನಿಧನಕ್ಕೆ ಬಾಲಿವುಡ್ ತಾರೆಯರು ಮತ್ತು ತಂತ್ರಜ್ಞರು ಸಂತಾಪ ಸೂಚಿಸಿದ್ದಾರೆ.

× Chat with us