Mysore
24
scattered clouds

Social Media

ಬುಧವಾರ, 15 ಜನವರಿ 2025
Light
Dark

ಬಿಹಾರ: ನಿತೀಶ್ ಸರ್ಕಾರಕ್ಕೆ ನೀಡಿದ ಬೆಂಬಲ ಹಿಂಪಡೆದ ಜಿತನ್ ರಾಮ್ ಮಾಂಝಿಯ

ಪಾಟ್ನಾ: ನಿತೀಶ್ ಕುಮಾರ್ ನೇತೃತ್ವದ ಮಹಾಘಟಬಂಧನ್ ಸರ್ಕಾರಕ್ಕೆ ನೀಡಿದ್ದ ಬೆಂಬಲವನ್ನು ಹಿಂಪಡೆಯುವುದಾಗಿ ಬಿಹಾರ ಮಾಜಿ ಮುಖ್ಯಮಂತ್ರಿ ಜಿತನ್ ರಾಮ್ ಮಾಂಝಿ ಅವರ ಹಿಂದೂಸ್ತಾನಿ ಅವಾಮ್ ಮೋರ್ಚಾ(ಎಚ್‌ಎಎಂ) ಸೋಮವಾರ ಘೋಷಿಸಿದೆ.

ಬಿಹಾರ ಸರ್ಕಾರ ನೀಡಿದ್ದ ಬೆಂಬಲ ಹಿಂತೆಗೆದುಕೊಳ್ಳುವ ಪತ್ರ ನೀಡಲು ರಾಜ್ಯಪಾಲ ರಾಜೇಂದ್ರ ಅರ್ಲೇಕರ್ ಅವರಿಗೆ ಅಪಾಯಿಂಟ್ಮೆಂಟ್ ಕೇಳಿರುವುದಾಗಿ ಎಚ್ಎಎಂ ರಾಷ್ಟ್ರೀಯ ಅಧ್ಯಕ್ಷರಾದ ಮಾಂಝಿ ಅವರ ಪುತ್ರ ಸಂತೋಷ್ ಸುಮನ್ ಅವರು ಹೇಳಿದ್ದಾರೆ.

ನಿತೀಶ್ ಕುಮಾರ್ ಅವರ ಜೆಡಿಯು, ತಮ್ಮ ಪಕ್ಷವನ್ನು ವಿಲೀನಗೊಳಿಸಲು ಒತ್ತಡ ಹೇರುತ್ತಿದೆ ಎಂದು ಆರೋಪಿಸಿ ಸುಮನ್ ಅವರು ಕಳೆದ ವಾರ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು.

ಪಕ್ಷದ ಮುಂದಿನ ಕ್ರಮದ ಬಗ್ಗೆ ನಿರ್ಧಾರ ತೆಗೆದುಕೊಳ್ಳಲು ಇಂದು ನಡೆದ ಎಚ್ಎಎಂ ರಾಷ್ಟ್ರೀಯ ಕಾರ್ಯಕಾರಿ ಮಂಡಳಿಯ ಸಭೆಯ ನಂತರ ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಸುಮನ್ ಮುಂದಿನ ಆಯ್ಕೆಗಳ ಬಗ್ಗೆ ಚರ್ಚಿಸಲು ದೆಹಲಿಗೆ ಭೇಟಿ ನೀಡುತ್ತಿದ್ದು, ಬಿಜೆಪಿ ನೇತೃತ್ವದ ಎನ್‌ಡಿಎನಿಂದ ಆಹ್ವಾನ ಬಂದರೆ ಅದನ್ನು “ಪರಿಗಣಿಸಲು” ಸಿದ್ಧ ಎಂದು ಹೇಳಿದ್ದಾರೆ.

Tags:

ಸುದ್ದಿ ಬಗ್ಗೆ ನಿಮ್ಮ ಅಭಿಪ್ರಾಯ ತಿಳಿಸಿ