ಪಾಟ್ನಾ: ನಿತೀಶ್ ಕುಮಾರ್ ನೇತೃತ್ವದ ಮಹಾಘಟಬಂಧನ್ ಸರ್ಕಾರಕ್ಕೆ ನೀಡಿದ್ದ ಬೆಂಬಲವನ್ನು ಹಿಂಪಡೆಯುವುದಾಗಿ ಬಿಹಾರ ಮಾಜಿ ಮುಖ್ಯಮಂತ್ರಿ ಜಿತನ್ ರಾಮ್ ಮಾಂಝಿ ಅವರ ಹಿಂದೂಸ್ತಾನಿ ಅವಾಮ್ ಮೋರ್ಚಾ(ಎಚ್‌ಎಎಂ) ಸೋಮವಾರ ಘೋಷಿಸಿದೆ.
ಬಿಹಾರ ಸರ್ಕಾರ ನೀಡಿದ್ದ ಬೆಂಬಲ ಹಿಂತೆಗೆದುಕೊಳ್ಳುವ ಪತ್ರ ನೀಡಲು ರಾಜ್ಯಪಾಲ ರಾಜೇಂದ್ರ ಅರ್ಲೇಕರ್ ಅವರಿಗೆ ಅಪಾಯಿಂಟ್ಮೆಂಟ್ ಕೇಳಿರುವುದಾಗಿ ಎಚ್ಎಎಂ ರಾಷ್ಟ್ರೀಯ ಅಧ್ಯಕ್ಷರಾದ ಮಾಂಝಿ ಅವರ ಪುತ್ರ ಸಂತೋಷ್ ಸುಮನ್ ಅವರು ಹೇಳಿದ್ದಾರೆ.
ನಿತೀಶ್ ಕುಮಾರ್ ಅವರ ಜೆಡಿಯು, ತಮ್ಮ ಪಕ್ಷವನ್ನು ವಿಲೀನಗೊಳಿಸಲು ಒತ್ತಡ ಹೇರುತ್ತಿದೆ ಎಂದು ಆರೋಪಿಸಿ ಸುಮನ್ ಅವರು ಕಳೆದ ವಾರ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು.
ಪಕ್ಷದ ಮುಂದಿನ ಕ್ರಮದ ಬಗ್ಗೆ ನಿರ್ಧಾರ ತೆಗೆದುಕೊಳ್ಳಲು ಇಂದು ನಡೆದ ಎಚ್ಎಎಂ ರಾಷ್ಟ್ರೀಯ ಕಾರ್ಯಕಾರಿ ಮಂಡಳಿಯ ಸಭೆಯ ನಂತರ ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಸುಮನ್ ಮುಂದಿನ ಆಯ್ಕೆಗಳ ಬಗ್ಗೆ ಚರ್ಚಿಸಲು ದೆಹಲಿಗೆ ಭೇಟಿ ನೀಡುತ್ತಿದ್ದು, ಬಿಜೆಪಿ ನೇತೃತ್ವದ ಎನ್‌ಡಿಎನಿಂದ ಆಹ್ವಾನ ಬಂದರೆ ಅದನ್ನು “ಪರಿಗಣಿಸಲು” ಸಿದ್ಧ ಎಂದು ಹೇಳಿದ್ದಾರೆ.
ಮಡಿಕೇರಿ : ಕೊಡಗು ಜಿಲ್ಲೆಯ ಅತ್ಯುನ್ನತ ಶಿಖರವಾದ ತಾಡಿಯಂಡಮೋಳ್ ಬೆಟ್ಟಕ್ಕೆ ಟ್ರೆಕ್ಕಿಂಗ್ ಮಾಡಲು ಹೊರಟಿದ್ದ 36 ವರ್ಷದ ಮಹಿಳೆ ಶರಣ್ಯ…
ಹನೂರು : ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟಕ್ಕೆ ತೆರಳುತ್ತಿದ್ದ ಭಕ್ತರಿಗೆ ರಸ್ತೆ ಬದಿಯಲ್ಲಿಯೇ ಚಿರತೆ ಕಾಣಿಸಿಕೊಂಡಿದೆ. ವಾಹನ ಮುಂದೆ…
ಸಿದ್ದಾಪುರ : ಮಾಲ್ದಾರೆ ಗ್ರಾಮ ಪಂಚಾಯತ್ ವ್ಯಾಪ್ತಿಯ ಮಾಲ್ದಾರೆ–ಗುಡ್ಲೂರು ರಸ್ತೆ ಹಾಗೂ ಮೈಲಾಪುರ–ಗುಡ್ಲೂರು ರಸ್ತೆ ಕಾಮಗಾರಿಗಳು ಪೂರ್ಣಗೊಂಡಿದ್ದರೂ, ಕಾಮಗಾರಿಯಲ್ಲಿ ಬಳಸಿದ…
ಬೆಂಗಳೂರು : ಪಶ್ಚಿಮ ಕೊಲ್ಲಿ ರಾಷ್ಟ್ರಗಳ ಯುದ್ಧದಿಂದಾಗಿ ಇದೀಗ ದೇಶದಲ್ಲಿ ಅನಿಲ ಬಿಕ್ಕಟ್ಟು ಎದುರಾಗಿದೆ. ಬೆಂಗಳೂರು ಸೇರಿದಂತೆ ರಾಜ್ಯದ ಇತರೆ…
24ನೇ ವರ್ಷದ ಕ್ರಿಕೆಟ್ ಪಂದ್ಯಾವಳಿಗೆ ಬೇತ್ರಿ ಮುಕ್ಕಾಟೀರ ಕುಟುಂಬಸ್ಥರಿಂದ ಸಿದ್ದತೆ; 24 ದಿನಗಳ ಕಾಲ ಕ್ರಿಕೆಟ್ ಹಬ್ಬ ಪುನೀತ್ ಮಡಿಕೇರಿ…
ಮುರ್ಖರ ದಿನ ವಾದ ಏಪ್ರಿಲ್ ಒಂದರಂದು ( ಬುಧವಾರ), ಕೆಲವು ಜಾಲತಾಣಗಳಲ್ಲಿ ದೇಶದ ರಾಷ್ಟ್ರೀಯ ಲಾಂಛನದ ಅಡಿಯಲ್ಲಿ,(ಸಿಂಹ ಮತ್ತು ಅಶೋಕ…