ಕೆ.ಆರ್.ಪೇಟೆ: ತಾಲ್ಲೂಕಿನ ಹಿರೀಕಳಲೆ ಬಳಿ ಭಾನುವಾರ ರಾತ್ರಿ ಹಿಟ್ ಅಂಡ್ ರನ್ ಅಪಘಾತ ಸಂಭವಿಸಿದ್ದು, ಇಬ್ಬರು ಬೈಕ್ ಸವಾರರ ಧಾರುಣ ಸಾವು ಉಂಟಾಗಿದೆ.
ಹಿರೀಕಳಲೆ ಗ್ರಾಮದ ಸಂದೇಶ್ ಮತ್ತು ಮರಡಹಳ್ಳಿಯ ಭರತ್ ಮೃತ ದುರ್ದೈವಿಗಳು.
ಎಳನೀರು ವ್ಯಾಪಾರ ಮಾಡಿ ತಮ್ಮ ಮನೆಯ ಸಂಸಾರಕ್ಕೆ ಆಸರೆಯಾಗಿದ್ದ ಯುವಕರಾಗಿದ್ದು, ಭಾನುವಾರ ರಾತ್ರಿ ಸುಮಾರು 10ಗಂಟೆ ಸಮಯದಲ್ಲಿ ಕೆ.ಆರ್.ಪೇಟೆ ಕಡೆಯಿಂದ ಊರಿನ ಕಡೆ ಹೋಗುವಾಗ ಅಪಘಾತ ಸಂಭವಿಸಿದೆ.
ಅಪರಿಚಿತ ವಾಹನ ಡಿಕ್ಕಿ ಹೊಡೆದು ಪರಾರಿಯಾಗಿರುವ ಶಂಕೆ ವ್ಯಕ್ತಪಡಿಸಿರುವ ಪೊಲೀಸರು ಅಪಘಾತ ನಡೆಸಿ ಪರಾರಿಯಾಗಿರುವ ವಾಹನ ಪತ್ತೆಗೆ ಸೂಕ್ತ ಕ್ರಮ ಕೈಗೊಂಡಿದ್ದಾರೆ.
ಘಟನೆ ಕುರಿತು ಕಿಕ್ಕೇರಿ ಪೋಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಮೈಸೂರು: ಮೈಸೂರಿನ ಸಮತಾ ಅಧ್ಯಯನ ಕೇಂದ್ರ(ರಿ)ವು ಸಂಸ್ಥಾಪಕ ಅಧ್ಯಕ್ಷೆ, ಖ್ಯಾತ ಸ್ತ್ರೀವಾದಿ ವಿಮರ್ಶಕಿ ಹಾಗೂ ಲೇಖಕಿ ಡಾ.ವಿಜಯಾ ದಬ್ಬೆ ಅವರ ಹೆಸರಿನಲ್ಲಿ 2022…
ಮಹೇಂದ್ರ ಹಸಗೂಲಿ: ಗುಂಡ್ಲುಪೇಟೆ ತಾಲ್ಲೂಕು ವರದಿಗಾರರು ಗುಂಡ್ಲುಪೇಟೆ: ತಾಲ್ಲೂಕಿನ ಬೊಮ್ಮಲಾಪುರ ಗ್ರಾಮದ ದೊರೆ ಎಂಬುವವರ ವಾಸದ ಮನೆಗೆ ನುಗ್ಗಿದ ಕಡವೆಯನ್ನು…
ಮಂಡ್ಯ: ಸಾಮಾಜಿಕವಾಗಿ, ಆರ್ಥಿಕವಾಗಿ, ಶೈಕ್ಷಣಿಕವಾಗಿ ಸಮಾಜದ ಮುಖ್ಯ ವಾಹಿನಿಗೆ ಬರಬೇಕು. ಸಮುದಾಯಗಳು ಮುಖ್ಯ ವಾಹಿನಿಗೆ ಬರಲು ಶಿಕ್ಷಣದಿಂದ ಮಾತ್ರ ಸಾಧ್ಯ…
ಮಂಡ್ಯ: ತಾಲ್ಲೂಕಿನ ಹೊಸ ಬೂದನೂರಿನಲ್ಲಿ ನೆಲೆಯಾಗಿರುವ ಕಾಶಿ ವಿಶ್ವನಾಥ ಹಾಗೂ ಅನಂತಪದ್ಮನಾಭಸ್ವಾಮಿ ಉತ್ಸವಕ್ಕೆ ದಿನಗಣನೆ ಆರಂಭವಾಗಿದೆ. ಈ ಬಾರಿ ಉತ್ಸವಕ್ಕೆ…
ಬೆಂಗಳೂರು: ಈ ವರ್ಷ ಚಳಿ ಪ್ರಮಾಣ ಹೆಚ್ಚಾಗಿದ್ದರಿಂದ ಬಿಸಿಲ ಝಳವೂ ಹೆಚ್ಚಾಗಿರಲಿದ್ದು, ಮುಂದಿನ ಬೇಸಿಗೆಯಲ್ಲಿ ವಿಪರೀತ ಬಿಸಿಲು ಹವಾಮಾನ ಇರಲಿದೆ…
ಬೆಂಗಳೂರು: ರಾಜ್ಯದಲ್ಲಿರುವ ಅಷ್ಟೂ ಗ್ರಾಮ ಪಂಚಾಯಿತಿಗಳಿಗೆ ಮಹಾತ್ಮಗಾಂಧಿ ಹೆಸರು ಇಡಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಘೋಷಣೆ ಮಾಡಿದ್ದಾರೆ. ಫ್ರೀಡಂಪಾರ್ಕ್ ನಲ್ಲಿ…