ನವದೆಹಲಿ : ಬಿಲ್ಕಿಸ್ ಬಾನು ಹತ್ಯೆ ಪ್ರಕರಣದ 11 ಮಂದಿ ಅಪರಾಧಿಗಳಿಗೆ ಶಿಕ್ಷೆ ಕಡಿತಗೊಳಿಸಿ ಮೇ 2022 ರಂದು ನೀಡಿದ್ದ ಆದೇಶವನ್ನು ಸುಪ್ರೀಂ ಕೋರ್ಟ್ ಇಂದು ರದ್ದುಗೊಳಿಸಿದೆ.
ಬಿಲ್ಕಿಸ್ ಬಾನು ಹತ್ಯೆ ಮಾಡಿದ್ದ ಆರೋಪಿಗಳು ತಮಗೆ ನೀಡಲಾಗಿದ್ದ ಶಿಕ್ಷೆಯ ಅವಧಿಯನ್ನು ಕಡಿತಗೊಳಿಸುವಂತೆ ಕೋರಿ ಗುಜರಾತ್ ಸರ್ಕಾರಕ್ಕೆ ಮನವಿ ಸಲ್ಲಿಸಲು ಅನುಮತಿ ನೀಡಲಾಗಿದ್ದ ಸುಪ್ರೀಂ ಆದೇಶವನ್ನು ಸ್ವತಃ ಸುಪ್ರೀಂ ರದ್ದುಗೊಳಿಸಿ ಆದೇಶ ಹೊರಡಿಸಲಾಗಿದೆ. ಈ ನಿವೃತ್ತರಾಗಿರುವ ನ್ಯಾಯಾದೀಶರಾದ ಅಜಯ್ ರಸ್ತೆಗಿ ಆದೇಶ ನೀಡಿದ್ದರು.
ವಂಚನೆ ಹಾಗೂ ವಾಸ್ತವಗಳನ್ನು ಮರೆಮಾಡಿ ಈ ಆದೇಶವನ್ನು ಪಡೆಯಲಾಗಿತ್ತು ಎಂದಿರುವ ಸುಪ್ರೀಂ ಕೋರ್ಟ್, ಅಪರಾಧಿಗಳ ಬಿಡುಗಡೆ ಮರುಪರಿಶೀಲಿಸಲು ಅರ್ಜಿ ಸಲ್ಲಿಸದೇ ಇರುವುದಕ್ಕೆ ಗುಜರಾತ್ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದೆ.
ಅಪರಾಧಿಗಳ ವಿಚಾರಣೆಯು ಮಹಾರಾಷ್ಟ್ರ ನ್ಯಾಯಾಲಯದಲ್ಲಿ ನಡೆದಿದ್ದರಿಂದ ಮಹಾರಾಷ್ಟ್ರ ಸರ್ಕಾರ ಮಾತ್ರ ಅವರ ಶಿಕ್ಷೆ ಕಡಿತಗೊಳಿಸುವ ಹಕ್ಕು ಹೊಂದಿತ್ತು ಎಂದು ಸುಪ್ರೀಂ ಕೋರ್ಟ್ ಹೇಳಿದೆ. ಅಪರಾಧಿಗಳಲ್ಲೊಬ್ಬ ರಾಧೇಶ್ಯಾಮ್ ಭಗವಾನ್ ದಾಸ್ ಶಾ ಎಂಬಾತ ಶಿಕ್ಷೆ ಕಡಿತಗೊಳಿಸಲು ರಾಜ್ಯ ಸರ್ಕಾರಕ್ಕೆ ಮನವಿ ಸಲ್ಲಿಸಲು ಕೋರಿದ ಅನುಮತಿಯನ್ನು ಜುಲೈ 2019ರಲ್ಲಿ ಗುಜರತ್ ಹೈಕೋರ್ಟ್ ನಿರಾಕರಿಸಿದ ನಂತರ ಸಲ್ಲಿಸಿದ್ದ ಅರ್ಜಿ ಇದಾಗಿತ್ತು.
ಆತ ಮಹಾರಾಷ್ಟ್ರ ನ್ಯಾಯಾಲಯದಲ್ಲಿ ಅಪೀಲು ಸಲ್ಲಿಸಿದ್ದರೂ ನಿರ್ಧಾರ ಪ್ರಕಟಗೊಳ್ಳುವ ಮುನ್ನವೇ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದ.
ಈ ಹಿಂದೆ ಆಗಸ್ಟ್ ತಿಂಗಳಿನಲ್ಲಿ ತನ್ನ ಮೇ 2022 ತೀರ್ಪಿನ ಬಗ್ಗೆ ಸುಪ್ರೀಂ ಕೋರ್ಟ್ ಅಚ್ಚರಿ ವ್ಯಕ್ತಪಡಿಸಿತ್ತು. ಗುಜರಾತ್ ಸರ್ಕಾರ ಅಪರಾಧಿಗಳ ಬಿಡುಗಡೆಗೆ ನೀಡಿರುವ ಆದೇಶ ರದ್ದುಗೊಳಿಸಿರುವ ಸುಪ್ರೀಂ, ಆರೋಪಿಗಳಿಗೆ ಜೈಲಿಗೆ ಮರಳಲು ಎರಡು ವಾರಗಳ ಗಡುವು ನೀಡಿದೆ.
ಬೆಂಗಳೂರು : ಶಾಲಾ ವಿದ್ಯಾರ್ಥಿಗಳನ್ನು ಪ್ರವಾಸಕ್ಕೆ ಕರೆದೊಯ್ಯುವ ಮುನ್ನ ಸುರಕ್ಷತೆಗೆ ಆದ್ಯತೆ ನೀಡಬೇಕು ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ…
ಕೊಲಂಬೊ : ಐಸಿಸಿ ಪುರುಷರ ಟಿ20 ವಿಶ್ವಕಪ್ 2026ರ ಗ್ರೂಪ್ ಬಿ ಪಂದ್ಯದಲ್ಲಿ ಜಿಂಬಾಬ್ವೆ ತಂಡವು ಆಸ್ಟ್ರೇಲಿಯಾದ ವಿರುದ್ಧ ಅದ್ಭುತ…
ತುಮಕೂರು : ಜ್ಯೋತಿಷಿಯ ಮಾತು ನಂಬಿ ಮಗಳು ತಾಯಿಯನ್ನೇ ಕೊಲೆ ಮಾಡಿರುವ ಘಟನೆ ತುಮಕೂರು ತಾಲೂಕಿನ ಅನುಪನಹಳ್ಳಿಯಲ್ಲಿ ನಡೆದಿದೆ. ಪುಷ್ಪಲತಾ…
ಮಂಡ್ಯ : ಇತ್ತೀಚೆಗೆ ಹಲವು ಇಲಾಖಾ ಅಧಿಕಾರಿಗಳ ವರ್ಗಾವಣೆಗೆ ಸಂಬಂಧಿಸಿದ ಸರ್ಕಾರ ಆದೇಶ ಹೊರಡಿಸಿದ್ದು, ಅದರಲ್ಲಿ ಮಂಡ್ಯ ಜಿಲ್ಲಾ ಆರೋಗ್ಯ…
ಮೈಸೂರು : ಸಿದ್ದರಾಮಯ್ಯ ಅವರೇ ಐದು ವರ್ಷಗಳ ಕಾಲ ಮುಖ್ಯಮಂತ್ರಿಯಾಗಿ ಮುಂದುವರಿಯುವ ಆಸೆ ಇದೆ. ಹೈಕಮಾಂಡ್ ಏನೇ ತೀರ್ಮಾನ ಮಾಡಿದರೂ…
ಬೆಂಗಳೂರು : ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ತಾಲೂಕಿನ ಎಂ.ಸತ್ಯವರ ಗ್ರಾಮದ ಸಮೀಪದ ಹೊಸಕೋಟೆ-ದಾಬಸ್‌ಪೇಟೆ ರಾಷ್ಟ್ರೀಯ ಹೆದ್ದಾರಿ (NH-648) ಮತ್ತು…