ಜ.5 ರಿಂದ ಬಿಳಿಗಿರಿರಂಗನ ಬೆಟ್ಟದಲ್ಲಿ ಹಕ್ಕಿ ಹಬ್ಬ

ಚಾಮರಾಜನಗರ: ಅರಣ್ಯ ಇಲಾಖೆ ಹಾಗೂ ರಾಜ್ಯ ಪರಿಸರ ಪ್ರವಾಸೋದ್ಯಮ ಅಭಿವೃದ್ಧಿ ನಿಗಮ (ಕೆಇಡಿಬಿ) ವತಿಯಿಂದ ಜಿಲ್ಲೆಯ ಬಿಳಿಗಿರಿರಂಗನಾಥ ಸ್ವಾಮಿ ಬೆಟ್ಟದಲ್ಲಿ 2021ರ ಜನವರಿ 5ರಿಂದ 7ರವರೆಗೆ ʻಬರ್ಡ್ ಫೆಸ್ಟಿವಲ್ʼ (ಹಕ್ಕಿ ಹಬ್ಬ) ಹಮ್ಮಿಕೊಳ್ಳಲಾಗಿದೆ.

ಅಳಿವಿನಂಚಿನಲ್ಲಿರುವ ಹಕ್ಕಿಗಳ ಸಂತತಿ ಸಂರಕ್ಷಣೆ, ಅಧ್ಯಯನ ಹಾಗೂ ಪಕ್ಷಿ ವೀಕ್ಷಣೆಯನ್ನು ಉತ್ತೇಜಿಸುವ ನಿಟ್ಟಿನಲ್ಲಿ ʻಹಕ್ಕಿ ಹಬ್ಬʼ ನಡೆಯಲಿದೆ. ಹಕ್ಕಿಗಳ ಕುರಿತು ಆಸಕ್ತರಿಗೆ ಹಾಗೂ ಅಧ್ಯಯನಶೀಲರಿಗೆ ಪ್ರಯೋಜನವಾಗಲಿ ಎಂಬ ಉದ್ದೇಶದೊಂದಿಗೆ ಸ್ಥಳೀಯರಲ್ಲೂ ಪರಿಸರ-ಹಕ್ಕಿಗಳ ಕುರಿತು ಜಾಗೃತಿ ಮೂಡಿಸುವ ಸಲುವಾಗಿ ಹಕ್ಕಿ ಹಬ್ಬ ಆಯೋಜಿಸಲಾಗಿದೆ.

ರಾಜ್ಯದ ರಂಗನತಿಟ್ಟು, ದಾಂಡೇಲಿ, ಬಳ್ಳಾರಿ, ಮಂಗಳೂರು, ಚಿಕ್ಕಬಳ್ಳಾಪುರ ಮತ್ತು ಕಾರವಾರದಲ್ಲಿ ಈಗಾಗಲೇ ಯಶಸ್ವಿಯಾಗಿರುವ ಈ ಹಬ್ಬವನ್ನು ಮೊದಲ ಬಾರಿಗೆ ಚಾಮರಾಜನಗರ ಜಿಲ್ಲೆಯಲ್ಲಿ ಆಯೋಜಿಸಲಾಗುತ್ತಿದೆ. ಪೂರ್ವ ಮತ್ತು ಪಶ್ಚಿಮ ಘಟ್ಟಗಳನ್ನು ಬೆಸೆುುಂವ, ವಿವಿಧ ವಾದರಿುಂ ಅರಣ್ಯವನ್ನು ಹೊಂದಿರುವ ಬಿಆರ್‌ಟಿ ಹುಲಿಸಂರಕ್ಷಿತ ಪ್ರದೇಶದಲ್ಲಿ ಅಪರೂಪದ ಹಕ್ಕಿಗಳ ವೀಕ್ಷಣೆ ಹಾಗೂ ಛಾಯಾಗ್ರಹಣಕ್ಕೆ ಅವಕಾಶ ಕಲ್ಪಿಸಲಾಗುತ್ತಿದೆ.

× Chat with us