BREAKING NEWS

ಬಿಟ್‍ ಕಾಯಿನ್ ಹಗರಣ : ಆರೋಪಿಗಳ ಮನೆ ಮೇಲೆ ಎಸ್‌ಐಟಿ ದಾಳಿ

ಬೆಂಗಳೂರು : ಹಿಂದಿನ ಸರ್ಕಾರದ ಆಡಳಿತಗಾರರಿಗೆ, ಅಧಿಕಾರಿಗಳ ಕೊರಳಿಗೆ ಉರುಳಾಗಲಿದೆ ಎಂದು ಭಾವಿಸಲಾದ ಬಿಟ್‍ಕಾಯಿನ್ ಹಗರಣದಲ್ಲಿ ವಿಶೇಷ ತನಿಖಾ ದಳ ಬೆಂಗಳೂರಿನ ನಾಲ್ಕು ಕಡೆ ಮನೆ ಶೋಧ ಕಾರ್ಯಾಚರಣೆ ನಡೆಸಿದೆ.

ಕರಣದ ಪ್ರಮುಖ ಆರೋಪಿ ಶ್ರೀಕೃಷ್ಣ ಅಲಿಯಾಸ್ ಶ್ರೀಕಿಗೆ ಸೇರಿದ ಜಯನಗರದ ನಿವಾಸ, ಶ್ರೀಕಿಗೆ ನೆರವಾದ ಆರೋಪಕ್ಕೆ ಗುರಿಯಾಗಿರುವ ಸುನೀಶ್ ಹೆಗ್ಡೆ ಅವರ ಸಂಜಯ ನಗರ ನಿವಾಸ, ಪ್ರಸಿದ್ಧ್ ಅವರ ಸದಾಶಿವ ನಗರ ನಿವಾಸ ಮತ್ತು ಸಂಬಂಕರೊಬ್ಬರ ಮನೆಯ ಮೇಲೆ ದಾಳಿಗಳಾಗಿವೆ.

ನ್ಯಾಯಾಲಯದಿಂದ ವಾರಂಟ್ ಪಡೆದು ಇಂದು ಮುಂಜಾನೆ 6 ಗಂಟೆಯಿಂದಲೇ ಶೋಧ ಕಾರ್ಯಾಚರಣೆ ನಡೆಸಲಾಗಿದೆ. 2020 ರಲ್ಲಿ ವರದಿಯಾಗಿದ್ದ ಬಿಟ್‍ಕಾಯಿನ್ ಹಗರಣವನ್ನು ರಾಜ್ಯ ಕಾಂಗ್ರೆಸ್ ಸರ್ಕಾರ ಮರುತನಿಖೆಗೆ ಆದೇಶಿಸಿದ್ದು, ವಿಶೇಷ ತನಿಖಾ ದಳ ರಚಿಸಿದೆ.

ತನಿಖಾ ದಳ ಈಗಾಗಲೇ ವಿವಿಧ ಹಂತಗಳಲ್ಲಿ ವಿಚಾರಣೆ ನಡೆಸುತ್ತಿದೆ. ಅತ್ಯುನ್ನತವಾದ ತಂತ್ರಜ್ಞಾನ ಆಧಾರಿತ ಹೈ ಪ್ರೊಫೈಲ್ ಪ್ರಕರಣವಾಗಿರುವ ಬಿಟ್‍ಕಾಯಿನ್‍ನಲ್ಲಿ ಸಾಕ್ಷ್ಯ ಸಂಗ್ರಹಿಸುವುದು ಕಷ್ಟದ ಕೆಲಸವಾಗಿದ್ದು, ತನಿಖಾ ದಳ ಈ ನಿಟ್ಟಿನಲ್ಲಿ ಹಗಲೂ ರಾತ್ರಿ ಬೆನ್ನು ಬಿದ್ದಿದೆ. ಈ ಹಿಂದೆ ಪ್ರಕರಣದ ತನಿಖೆ ನಡೆಸಿದ್ದ ಪೊಲೀಸ್ ಅಧಿಕಾರಿಗಳಿಂದಲೂ ಹೇಳಿಕೆ ಪಡೆಯಲಾಗಿದೆ. ಪ್ರಕರಣದಲ್ಲಿ ಪ್ರಮುಖವಾಗಿ ಕೇಳಿಬಂದಿದ್ದ ಮೂವರಿಗೆ ಸೇರಿದ ನಾಲ್ಕು ಸ್ಥಳಗಳ ಮೇಲೆ ದಾಳಿ ಮಾಡುವ ಮೂಲಕ ಸಾಕ್ಷ್ಯಗಳನ್ನು ಸಂಗ್ರಹಿಸುವ ಪ್ರಯತ್ನ ನಡೆಸಿದೆ.

lokesh

Recent Posts

ದಸರಾ ವೆಬ್‌ಸೈಟ್‌ ಲೋಕಾರ್ಪಣೆ : ಅ.11ರಿಂದ 21ರವರೆಗೆ ನಡೆಯಲಿರುವ ಕಾರ್ಯಕ್ರಮಗಳ ಮಾಹಿತಿ

ಮೈಸೂರು: ನಾಡಹಬ್ಬ ದಸರಾ ಮಹೋತ್ಸವದ ಅಂಗವಾಗಿ ನಡೆಯಲಿರುವ ಕಾರ್ಯಕ್ರಮಗಳನ್ನು ಜನರಿಗೆ ತಿಳಿಸಲು ಹಾಗೂ ಪ್ರವಾಸಿಗರಿಗೆ ಉಪಯುಕ್ತವಾದ ಮಾಹಿತಿ ಕೊಡಲು ದಸರಾ-೨೦೨೬ರ…

11 hours ago

ತಮಿಳುನಾಡಿಗೆ ಕಾವೇರಿ ನೀರು: 3 ಸಾವಿರ ಕ್ಯೂಸೆಕ್‌ಗೆ ಇಳಿಸಲು ರಾಜ್ಯ ಸರ್ಕಾರ ಮನವಿ

ನವದೆಹಲಿ: ತಮಿಳುನಾಡಿಗೆ ಕಾವೇರಿ ನೀರು ಹರಿಸುವ ವಿಚಾರ ಮತ್ತೆ ಮುನ್ನೆಲೆಗೆ ಬಂದಿದೆ. 6 ಸಾವಿರ ಕ್ಯೂಸೆಕ್‌ ನೀರನ್ನು 3 ಸಾವಿರ…

13 hours ago

ರಾಜ್ಯ ರಾಜಕೀಯದಲ್ಲಿ ಮತ್ತೊಂದು ಮಹತ್ವದ ಬೆಳವಣಿಗೆ: ಸೆಪ್ಟೆಂಬರ್.18 ರಿಂದ ಅಮಿತ್ ಶಾ 2 ದಿನ ರಾಜ್ಯ ಪ್ರವಾಸ ‌

ಹುಬ್ಬಳ್ಳಿ: ಸೆಪ್ಟೆಂಬರ್ 18ರಿಂದ ಕೇಂದ್ರ ಗೃಹ ಸಚಿವ ಅಮಿತ್ ಶಾ ರಾಜ್ಯದಲ್ಲಿ 2 ದಿನಗಳ ಪ್ರವಾಸ ಕೈಗೊಳ್ಳಲಿದ್ದಾರೆ. ಸೆಪ್ಟೆಂಬರ್ 18ರ…

14 hours ago

ರಾಮನಗುಡ್ಡ ಕೆರೆ ಭರ್ತಿ : ಕೋಡಿ ಬಿದ್ದು ಹರಿದ ನೀರು

ಮಹಾದೇಶ್. ಎಂ ಗೌಡ ಹನೂರು: ತಾಲ್ಲೂಕಿನ ಮಂಗಲ ಗ್ರಾಮದ ಹುಲುಸುಗುಡ್ಡೆ ಬಳಿ ಇರುವ ಐತಿಹಾಸಿಕ ರಾಮನಗುಡ್ಡ ಕೆರೆ ಸಂಪೂರ್ಣ ಭರ್ತಿಯಾಗಿ…

18 hours ago

ಓದುಗರ ಪತ್ರ: ಕೊನೆಗೊಳ್ಳಲಿ ಸಂಘರ್ಷ!

ಕೊನೆಗೊಳ್ಳಲಿ ಸಂಘರ್ಷ! ಯುದ್ಧವನು ಕೊನೆಗಾಣಿಸಲು ರಾಜತಾಂತ್ರಿಕ ಮಾತುಕತೆಯೇ ಉತ್ತಮವೆಂಬ ಭಾರತದ ನಿಲುವಿಗೆ ಬ್ರಿಕ್ಸ್ ನಾಯಕರು ಒಕ್ಕೊರಲಿನಿಂದ ಒಪ್ಪಿರುವುದು ಸ್ವಾಗತಾರ್ಹ! ಇದಲ್ಲವೇ…

23 hours ago

ಓದುಗರ ಪತ್ರ: ಚುರುಕಾಗಲಿ 6ರ ಪ್ಲಾಟ್ ಫಾರಂ ಟಿಕೆಟ್ ಕೌಂಟರ್

ಮೈಸೂರಿನ ನೈಋತ್ಯ ರೈಲ್ವೆಗೆ ಸೇರಿರುವ ಅಶೋಕ ಪುರಂ ರೈಲು ನಿಲ್ದಾಣದಲ್ಲಿ ಪ್ಲಾಟ್ ಫಾರಂ ೬ರ ಕಡೆ ರೈಲು ಪ್ರಯಾಣಿಕರಿಗೆ ಅನುಕೂಲವಾಗಲೆಂದು…

23 hours ago