Mysore
27
scattered clouds

Social Media

ಭಾನುವಾರ, 22 ಡಿಸೆಂಬರ್ 2024
Light
Dark

ಬಿಜೆಪಿ ಮತ್ತು ಜೆಡಿಎಸ್ ಪಕ್ಷಗಳು ಕಾವೇರಿ ವಿವಾದದಲ್ಲಿ ರಾಜಕೀಯ ಮಾಡುತ್ತಿವೆ: ಸಿಎಂ ಸಿದ್ದರಾಮಯ್ಯ

ಬೆಂಗಳೂರು : ಪ್ರಜಾಪ್ರಭುತ್ವದಲ್ಲಿ ಪ್ರತಿಭಟನೆಗೆ ಅವಕಾಶ ಇದೆ. ಆದರೆ ಬಿಜೆಪಿ ಮತ್ತು ಜೆಡಿಎಸ್ ಪಕ್ಷಗಳು ಕಾವೇರಿ ವಿವಾದದಲ್ಲಿ ರಾಜಕೀಯ ಮಾಡುತ್ತಿವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಆರೋಪಿಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿರುವ ಅವರು, ಬಿಜೆಪಿ, ಜೆಡಿಎಸ್ ಪಕ್ಷಗಳನ್ನು ಒಳಗೊಂಡತೆ ಕಾವೇರಿ ವಿವಾದದಲ್ಲಿ ಸರ್ವಪಕ್ಷ ಸಭೆ ಕರೆಯಲಾಗಿತ್ತು. ಅಲ್ಲಿ ಚರ್ಚೆ ನಡೆಸಲಾಗಿದೆ. ಆ ವೇಳೆ ವಿರೋಧ ಪಕ್ಷಗಳು ತಮ್ಮ ರಾಜೀನಾಮೆ ಕೇಳಿರಲಿಲ್ಲ. ಈಗ ರಾಜಕೀಯ ಮಾಡುತ್ತಿವೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ರಾಜ್ಯಸರ್ಕಾರ ಕಾವೇರಿ ವಿಷಯದಲ್ಲಿ ನಾಡಿನ ಹಿತರಕ್ಷಣೆಗೆ ಅಗತ್ಯ ಕ್ರಮ ಕೈಗೊಂಡಿದೆ. ಆದರೂ ಸುಪ್ರೀಂಕೋರ್ಟ್ ಆದೇಶ ನೀಡಿದೆ ಎಂದರು.

ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ನಿಯಂತ್ರಣಾ ಸಮಿತಿ ಹಾಗೂ ಕಾವೇರಿ ನೀರು ನಿರ್ವಹಣಾ ಸಂಸ್ಥೆಗಳು ನೀಡಿದ್ದ ಆದೇಶಗಳನ್ನು ಪ್ರಶ್ನಿಸಿ ರಾಜ್ಯಸರ್ಕಾರ ಸುಪ್ರೀಂಕೋರ್ಟ್‍ಗೆ ಮೇಲ್ಮನವಿ ಸಲ್ಲಿಸಿತ್ತು. ಅದನ್ನು ತಿರಸ್ಕರಿಸಲಾಗಿದೆ. ಅದೇ ರೀತಿ ತಮಿಳುನಾಡು 24 ಸಾವಿರ ಮತ್ತು 7,200 ಕ್ಯೂಸೆಕ್ಸ್ ನೀರು ಬಿಡುವಂತೆ ಮೇಲ್ಮನವಿ ಸಲ್ಲಿಸಿದ್ದರು. ಅದನ್ನೂ ಸುಪ್ರೀಂಕೋರ್ಟ್ ತಿರಸ್ಕರಿಸಿದೆ.

ಸೆ. 26 ರಂದು ಸುಪ್ರೀಂಕೋರ್ಟ್‍ನಲ್ಲಿ ಮತ್ತೊಮ್ಮೆ ಕಾವೇರಿ ವಿಚಾರ ಚರ್ಚೆಗೆ ಬರಲಿದೆ. ಅಲ್ಲಿ ನಾವು ಪ್ರಬಲವಾದ ವಾದ ಮಂಡಿಸಲು ಕ್ರಮ ಕೈಗೊಂಡಿದ್ದೇವೆ ಎಂದು ಹೇಳಿದರು.

ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಪ್ರತಿಭಟನೆ ಮಾಡಲು ಎಲ್ಲರಿಗೂ ಅವಕಾಶ ಇದೆ. ನಾವು ಅದನ್ನು ಹತ್ತಿಕ್ಕಲು ಹೋಗುವುದಿಲ್ಲ ಎಂದು ಸ್ಪಷ್ಟಪಡಿಸಲಾಯಿತು.

Tags:

ಸುದ್ದಿ ಬಗ್ಗೆ ನಿಮ್ಮ ಅಭಿಪ್ರಾಯ ತಿಳಿಸಿ