BREAKING NEWS

ಬಿಜೆಪಿ ಸಂಘಟಿತ ದ್ವೇಷವನ್ನು ಹುಟ್ಟುಹಾಕಿದೆ: ಮಲ್ಲಿಕಾರ್ಜುನ ಖರ್ಗೆ ವಾಗ್ದಾಳಿ

ನವದೆಹಲಿ : ಕಳೆದ ಐದು ವರ್ಷಗಳಲ್ಲಿ ಕೇವಲ 12.2 ಲಕ್ಷ ಉದ್ಯೋಗಗಳನ್ನು  ಸೃಷ್ಟಿಸಲಾಗಿದ್ದು, ಊಹಿಸಲಾಗದ ರೀತಿಯಲ್ಲಿ ನಿರುದ್ಯೋಗವಿದ್ದು, ಬೆಲೆ ಏರಿಕೆಯಿಂದ ಜನಸಾಮಾನ್ಯರು ತತ್ತರಿಸಿದ್ದಾರೆ ಎಂದು ಹೇಳಿರುವ ರಾಜ್ಯಸಭೆ ವಿಪಕ್ಷ ನಾಯಕ ಮಲ್ಲಿಕಾರ್ಜುನ ಖರ್ಗೆ, ಬಿಜೆಪಿಯು ಹುಟ್ಟುಹಾಕಿದ ಸಂಘಟಿತ ದ್ವೇಷದ ಪರಿಸ್ಥಿತಿಯ ಈ ದುರಂತಕ್ಕೆ ಕಾರಣವಾಗಿದೆ  ಎಂದಿದ್ದಾರೆ.

ಈ ಕುರಿತು ಟ್ವೀಟ್ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿರುವ ಖರ್ಗೆ, ಮೋದಿ ಸರ್ಕಾರದ ಅಡಿಯಲ್ಲಿ  ದೇಶದಲ್ಲಿ ಕಳೆದ 5 ವರ್ಷಗಳಲ್ಲಿ ಕೇವಲ 12.2 ಲಕ್ಷ ಔಪಚಾರಿಕ ಉದ್ಯೋಗಗಳನ್ನು ಸೃಷ್ಟಿಸಲಾಗಿದೆ. ಅಂದರೆ ವರ್ಷಕ್ಕೆ ಸರಾಸರಿ 2,44,000 ಉದ್ಯೋಗಗಳು. ನಾವು ಈ ಅಂಕಿಅಂಶವನ್ನು ಪತ್ತೆ ಹಚ್ಚಿಲ್ಲ.

ಮೋದಿ ಸರ್ಕಾರವೇ ಇಪಿಎಫ್ ನಿಯಮಿತ ಕೊಡುಗೆದಾರರು  ಔಪಚಾರಿಕ ಉದ್ಯೋಗಗಳ ಸೃಷ್ಟಿ ಎಂದು  ರಚಿಸಿದ್ದು, ಇಪಿಎಫ್ ಡೇಟಾ ಇದನ್ನು ದೃಢೀಕರಿಸುತ್ತದೆ. ಬಿಜೆಪಿ ವರ್ಷಕ್ಕೆ 2 ಕೋಟಿ ಉದ್ಯೋಗ ನೀಡುವುದಾಗಿ ಭರವಸೆ ನೀಡಿತ್ತು. ಅಂದರೆ 9 ವರ್ಷಗಳಲ್ಲಿ 18 ಕೋಟಿ ಉದ್ಯೋಗ ಸೃಷ್ಟಿಸಬಹುದಿತ್ತು ಎಂದಿದ್ದಾರೆ.

ನಮ್ಮ ಯುವಕರು ಕರಾಳ ಭವಿಷ್ಯವನ್ನು ನೋಡುತ್ತಿದ್ದಾರೆ. ಆಶ್ಚರ್ಯವೇನಿಲ್ಲ, ಬೀದಿಗಳಲ್ಲಿ ಕೋಪ ಮತ್ತು ಹಿಂಸೆ ಇದೆ. ಉದ್ಯೋಗ ಕೊಡಿಸುವಲ್ಲಿ ಬಿಜೆಪಿ ದಯನೀಯವಾಗಿ ವಿಫಲವಾಗಿದೆ.’ ಊಹಿಸಲಾಗದ ನಿರುದ್ಯೋಗ, ಬೆಲೆ ಏರಿಕೆ ಮತ್ತು ಬಿಜೆಪಿಯವರು ಹುಟ್ಟುಹಾಕಿದ ದ್ವೇಷದ ಪರಿಸ್ಥಿತಿ ಈ ದುರಂತಕ್ಕೆ ಕಾರಣವಾಗಿದೆ ಎಂದು ಅವರು ವಾಗ್ದಾಳಿ ನಡೆಸಿದ್ದಾರೆ.  ನಮ್ಮ ಬಡ ಮತ್ತು ಮಧ್ಯಮ ವರ್ಗದ ಉಳಿವಿಗಾಗಿ ಬಿಜೆಪಿಯನ್ನು ಅಧಿಕಾರದಿಂದ ಕಿತ್ತೊಗೆಯಬೇಕಾಗಿದೆ ಎಂದು ಮಲ್ಲಿಕಾರ್ಜುನ ಖರ್ಗೆ ಕರೆ ನೀಡಿದ್ದಾರೆ.

andolanait

Recent Posts

ಇಶಾ ಫೌಂಡೇಶನ್‌ ವಿರುದ್ಧದ ಪ್ರಕರಣ ವಜಾಗೊಳಿಸಿದ ಸುಪ್ರೀಂಕೋರ್ಟ್‌

ಹೊಸದಿಲ್ಲಿ: ತಮಿಳುನಾಡಿನ ಕೊಯಮತ್ತೂರಿನಲ್ಲಿರುವ ಸದ್ಗುರು ಜಗ್ಗಿ ವಾಸುದೇವ್‌ ಅವರ ಆಶ್ರಮ ಸೇರಲು ತನ್ನ ಇಬ್ಬರು ಹೆಣ್ಣುಮಕ್ಕಳನ್ನು ಬ್ರೈನ್‌ವಾಶ್‌ ಮಾಡಲಾಗಿದೆ ಎಂಬ…

1 hour ago

ಮಡಿಕೇರಿ: ಮಗನಿಂದಲೇ ತಂದೆಯ ಹತ್ಯೆ..

ಮಡಿಕೇರಿ: ಮಗನಿಂದಲೇ ತಂದೆ ಹತ್ಯೆಯಾದ ಘಟನೆ ಶ್ರೀಮಂಗಲ ಪೊಲೀಸ್ ಠಾಣಾ ವ್ಯಾಪ್ತಿಯ ಚಿಕ್ಕಮಂಡೂರು ಗ್ರಾಮದಲ್ಲಿ ನಡೆದಿದೆ. ಸಿ ಎನ್ ನಾಣಯ್ಯ…

2 hours ago

ಮುಡಾ: ಇಡಿ ದಾಳಿಗೆ ರಾಜಕೀಯ ಕಾರಣವಲ್ಲ; ಅಶೋಕ್

ಜಾರಿ ನಿರ್ದೇಶನಾಲಯದ ದಾಳಿಗೆ ರಾಜಕೀಯ ಕಾರಣವಲ್ಲ, 3-4 ಸಾವಿರ ಕೋಟಿ ರೂ. ಅಕ್ರಮ ನಡೆದಿದೆ ಎಂದು ಹೇಳಿದ್ದೇ ಕಾಂಗ್ರೆಸ್‌ನವರು: ಪ್ರತಿಪಕ್ಷ…

2 hours ago

BJP ಟಿಕೆಟ್‌ ವಂಚನೆ: ಆರೋಪ ತಳ್ಳಿ ಹಾಕಿದ ಕೇಂದ್ರ ಸಚಿವ ಪ್ರಲ್ಹಾದ ಜೋಶಿ

ನವದೆಹಲಿ: ನನಗೆ ಸಹೋದರಿಯೇ ಇಲ್ಲ ಮತ್ತು ಗೋಪಾಲ್ ಜೋಶಿ ಮೇಲಿನ ಪ್ರಕರಣಕ್ಕೂ ತಮಗೂ ಯಾವುದೇ ಸಂಬಂಧವಿಲ್ಲ ಎಂದು ಕೇಂದ್ರ ಸಚಿವ…

2 hours ago

ಮಂಡ್ಯ ಟೂ ಇಂಡಿಯಾ: ಬೃಹತ್‌ ಉದ್ಯೋಗ ಮೇಳಕ್ಕೆ ಮೊದಲ ದಿನ ಅಭೂತಪೂರ್ವ ಸ್ಪಂದನೆ

ಮಂಡ್ಯ ಟೂ ಇಂಡಿಯಾ; ಸಕ್ಕರೆ ನಾಡಿನಲ್ಲಿ 2 ದಿನಗಳ ಬೃಹತ್ ಉದ್ಯೋಗ ಮೇಳ 150ಕ್ಕೂ ಹೆಚ್ಚು ಕಂಪನಿಗಳ ಭಾಗಿ, ಸಾವಿರಾರು…

3 hours ago

ಮುಡಾ ಮೇಲೆ ಇಡಿ ದಾಳಿ: ಸಿಬಿಐ ತನಿಖೆ ನಡೆಸುವರೆಗೂ ಹೋರಾಟ ಮುಂದುವರಿಕೆ: ಸ್ನೇಹಮಯಿ ಕೃಷ್ಣ

ಮೈಸೂರು: ಮುಡಾ ಮೇಲಿನ ಇಡಿ ಕಾರ್ಯಾಚರಣೆ ಕೇವಲ ಸಿಎಂ ಸಿದ್ದರಾಮಯ್ಯ ಅವರ ಕುಟುಂಬದವರ ಪ್ರಕರಣವಲ್ಲ. ಸಂಪೂರ್ಣ ಮುಡಾ ಅಕ್ರಮದ ಬಗ್ಗೆ…

3 hours ago