BREAKING NEWS

ಕನಕಪುರದಲ್ಲಿ ಬಿಜೆಪಿ ಅಭ್ಯರ್ಥಿ ಅಶೋಕ್ ಪ್ರಚಾರಕ್ಕೆ ರದ್ದು : ಕಾರಣ ಏನು ?

ರಾಮನಗರ : ರಾಜ್ಯ ವಿಧಾನಸಭಾ ಚುನಾವಣೆಗೆ ದಿನಗಣನೆ ಶುರುವಾಗಿದ್ದು, ಕನಕಪುರ ಕ್ಷೇತ್ರದಲ್ಲಿ ಚುನಾವಣಾ ಕಣ ರಂಗೇರಿದೆ. ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ವಿರುದ್ಧ ಬಿಜೆಪಿ ಅಭ್ಯರ್ಥಿಯಾಗಿ ಕಂದಾಯ ಸಚಿವ ಆರ್ ಅಶೋಕ್ ಸ್ಪರ್ಧಿಸುತ್ತಿದ್ದಾರೆ. ಹೈವೋಲ್ಟೇಜ್ ಕ್ಷೇತ್ರ ಎನಿಸಿರುವ ಕನಕಪುರ ಕ್ಷೇತ್ರದಲ್ಲಿಂದು ಆರ್​ ಅಶೋಕ್ ಪ್ರಚಾರ ನಡೆಸಬೇಕಿತ್ತು. ಆದರೆ ಪ್ರಚಾರ ದಿಢೀರ್ ರದ್ದಾಗಿದೆ.

ಕನಕಪುರದಲ್ಲಿ ಡಿಕೆ ಶಿವಕುಮಾರ್ ಪರ ಡಿಕೆ ಸುರೇಶ್ ಪ್ರಚಾರ ನಡೆಸಲಿದ್ದು ಬಿಜೆಪಿ-ಕಾಂಗ್ರೆಸ್ ಅಭ್ಯರ್ಥಿಗಳು ಒಂದೇ ಮಾರ್ಗದಲ್ಲಿ ಪ್ರಚಾರ ಮಾಡಿದರೆ ಘರ್ಷಣೆ ಎದುರಾಗುವ ಹಿನ್ನೆಲೆ ಪ್ರಚಾರ ರದ್ದು ಮಾಡಲಾಗಿದೆ.
ಬಿಜೆಪಿ ಅಭ್ಯರ್ಥಿ ಆರ್ ಅಶೋಕ್, ಕನಕಪುರ ಕ್ಷೇತ್ರದ ಅರಳಾಳು ಸಂದ್ರಗೇಟ್, ಚಿಕ್ಕಮುದವಾಡಿ, ಚಿಕ್ಕೇನಹಳ್ಳಿ ವಾಡೇದೊಡ್ಡಿ ಮುಂತಾದೆಡೆ ಪ್ರಚಾರ ಮಾಡಬೇಕಿತ್ತು.

ಆದರೆ ಇದೇ ಮಾರ್ಗದಲ್ಲಿ ಸಂಸದ ಡಿಕೆ ಸುರೇಶ್ ಅವರು ಡಿಕೆ ಶಿವಕುಮಾರ್ ಪರವಾಗಿ ಪ್ರಚಾರ ನಡೆಸುವ ಹಿನ್ನೆಲೆ ಆಶೋಕ್ ಪ್ರಚಾರಕ್ಕೆ ಪೊಲೀಸರು ನಿರಾಕರಿಸಿದ್ದಾರೆ. ಮುಂಜಾಗ್ರತಾ ಕ್ರಮವಾಗಿ ಘರ್ಷಣೆ ನಡೆಯುವ ಸಾಧ್ಯತೆ ಹಿನ್ನೆಲೆ ಪೊಲೀಸರಿಂದ ಅನುಮತಿ ನಿರಾಕರಿಸಲಾಗಿದೆ. ಸದ್ಯ ಈಗ ರಾಮನಗರ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಇಕ್ಬಾಲ್ ಹುಸೇನ್ ಅವರ ಪರವಾಗಿ ಡಿಕೆ ಸುರೇಶ್ ರೋಡ್ ಶೋ ನಡೆಸುತ್ತಿದ್ದಾರೆ.

lokesh

Recent Posts

ಪ್ರಧಾನಿ ಮೋದಿ ಸ್ವಾಗತಕ್ಕೆ ಸಜ್ಜಾದ ಆದಿಚುಂಚನಗಿರಿ : ಬಿಗಿ ಪೊಲೀಸ್‌ ಭದ್ರತೆ

ಮಂಡ್ಯ : ಪ್ರಧಾನಿ ನರೇಂದ್ರ ಮೋದಿ ಅವರು ನಾಳೆ (ಏಪ್ರಿಲ್ 15) ಜಿಲ್ಲೆಯ ನಾಗಮಂಗಲ ತಾಲ್ಲೂಕಿನ ಆದಿಚುಂಚನಗಿರಿ ಶ್ರೀಕ್ಷೇತ್ರಕ್ಕೆ ಮೊದಲ…

7 hours ago

ಶಾಂತಿ ಒಪ್ಪಂದ ಜೀವಂತ | ಅಮೆರಿಕ-ಇರಾನ್ ಮಾತುಕತೆಗೆ ಸಿದ್ಧತೆ

ವಾಷಿಂಗ್ಟನ್ : ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿ ನಡೆದ ಅಮೆರಿಕ-ಇರಾನ್ ಮಾತುಕತೆ ವಿಫಲವಾದ ನಂತರ, ಎರಡು ವಾರಗಳ ಕದನ ವಿರಾಮ ಕೊನೆಗೊಳ್ಳುವ ಮೊದಲು,…

8 hours ago

ಐವರು ಸಾಧಕರಿಗೆ ಅಂಬೇಡ್ಕರ್‌ ಪ್ರಶಸ್ತಿ ; ಪ್ರಶಸ್ತಿ ವಿತರಿಸಿದ ಸಿಎಂ ಸಿದ್ದರಾಮಯ್ಯ

ಬೆಂಗಳೂರು : ಅಸ್ಪೃಶ್ಯತೆ ಆಚರಣೆ, ಅಸಮಾನತೆ ವಿರುದ್ಧದ ಹೋರಾಟಗಳಲ್ಲಿ ಪಾಲ್ಗೊಂಡು, ಸಮ ಸಮಾಜ ನಿರ್ಮಾಣದ ಹಾದಿಯಲ್ಲಿ ಛಾಪು ಮೂಡಿಸಿದ ಐವರು…

9 hours ago

ಹಾರ್ಮುಜ್ ಜಲಸಂಧಿ ದಾಟಿದ ಹಡಗುಗಳು ; ಅಮೆರಿಕದ ದಿಗ್ಬಂಧನಕ್ಕೆ ಇರಾನ್ ಸವಾಲು

ಟೆಹ್ರಾನ್‌ : ಅಮೆರಿಕ ಸರ್ಕಾರ ಹೇರಿದ ನೌಕಾ ದಿಗ್ಬಂಧನ ಎದುರಿಸಿ ಇರಾನ್‌ನ ಹಡಗುಗಳು ಹಾರ್ಮುಜ್ ಜಲಸಂಧಿ ದಾಟುವುದನ್ನು ಮುಂದುವರಿಸಿವೆ. ಕನಿಷ್ಠ…

10 hours ago

ಅಂಬೇಡ್ಕರ್‌ ಚಿಂತನೆಗಳ ಬಗ್ಗೆ ಜಾಗೃತಿ ಮೂಡಿಸಿ : ಶಾಸಕ ತನ್ವೀರ್‌ ಸೇಠ್‌

ಮೈಸೂರು : ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರ ಹೋರಾಟದ ಬದುಕು ಮತ್ತು ಅವರು ಪ್ರತಿಪಾದಿಸಿದ ಸಮಾನತೆಯ ತತ್ವಗಳನ್ನು ಪ್ರತಿಯೊಬ್ಬರೂ ತಮ್ಮ…

11 hours ago

ಚಾ.ನಗರ | ಹೊಸೂರು ಗ್ರಾಮದಲ್ಲಿ ಮಳೆಗಾಗಿ ವಿಶೇಷ ಪ್ರಾರ್ಥನೆ

ಚಾಮರಾಜನಗರ : ತಾಲ್ಲೂಕಿನ ವಿ.ಸಿ.ಹೊಸೂರು ಗ್ರಾಮಸ್ಥರು ತಮ್ಮ ಊರಿಗೆ ಇನ್ನೂ ಪೂರ್ವ ಮುಂಗಾರು ಮಳೆ ಪ್ರವೇಶ ಆಗದ ಹಿನ್ನೆಲೆಯಲ್ಲಿ ಮಳೆಗಾಗಿ…

11 hours ago